ರಾಜ್ಯ ಸರ್ಕಾರದಿಂದ ಡ್ರೈವರ್​ ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ಖಾಲಿ ಇರುವ ಡ್ರೈವರ್​ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶದ ಅಭ್ಯರ್ಥಿಗಳಿಗೆ ಮಾತ್ರ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅವಕಾಶ ನೀಡಲಾಗಿದೆ.ಕಲ್ಯಾಣ ಕರ್ನಾಟಕ ಪ್ರದೇಶದ ಅಭ್ಯರ್ಥಿಗಳಿಗೆ ಮಾತ್ರ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅವಕಾಶ ನೀಡಲಾಗಿದೆ. ಒಟ್ಟು ಮೂರು ಹುದ್ದೆಗಳು ಖಾಲಿ ಇದ್ದು, ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು. ಸೂಕ್ತ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಹತೆ: ಅಭ್ಯರ್ಥಿಗಳು 7ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಇತ್ತೀಚಿನ ವಾಹನ […]

ಭಾರತ-ಪಾಕ್ ಸೇರಿ: ಐಸಿಸಿ ಏಕದಿನ ಕ್ರಿಕೆಟ್‌ 8 ಪಂದ್ಯಗಳ ದಿನ ಬದಲು; ಇದೇ 15ರಿಂದ ಟಿಕೆಟ್​ ಬುಕ್ಕಿಂಗ್​ ಗೆ ಅವಕಾಶ

ದುಬೈ: ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌​ ವೇಳಾಪಟ್ಟಿಯಲ್ಲಿ ಎಂಟು ಪಂದ್ಯಗಳ ಬದಲಾವಣೆಯಾಗಿದೆ. ಬೆಂಗಳೂರಿನ ಮೈದಾನದಲ್ಲಿ ಭಾರತ- ನೆದರ್ಲ್ಯಾಂಡ್ಸ್ ನಡುವಿನ ಪಂದ್ಯ ಒಂದು ದಿನ ಮುಂದೂಡಲಾಗಿದೆ.ಗುಜರಾತ್‌ನ ಅಹಮದಾಬಾದ್​ನಲ್ಲಿ ನಡೆಯುವ ಭಾರತ-ಪಾಕಿಸ್ತಾನ ಪಂದ್ಯ ಸೇರಿದಂತೆ ಒಟ್ಟು ಎಂಟು ಪಂದ್ಯಗಳ ದಿನ ಬದಲಾಗಿದ್ದು, ಹೊಸ ವೇಳಾಪಟ್ಟಿಯನ್ನು ಐಸಿಸಿ ಇಂದು ಬಿಡುಗಡೆಗೊಳಿಸಿತು. ಇತ್ತೀಚೆಗೆ ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ, ವೇಳಾಪಟ್ಟಿಯ ಬದಲಾವಣೆಯ ಸಾಧ್ಯತೆಗಳ ಬಗ್ಗೆ ಮಾತನಾಡಿದ್ದರು. ರಾಜ್ಯಗಳ ಕ್ರಿಕೆಟ್​ ಸಂಸ್ಥೆಗಳು, ಹಬ್ಬದಂದು ಕ್ರಿಕೆಟ್ ಪಂದ್ಯಗಳು ನಡೆದರೆ ಭದ್ರತಾ ಸಮಸ್ಯೆ ಉಂಟಾಗುವ ಸಮಸ್ಯೆಯಿದೆ ಎಂದು […]

ಸಚಿವ ಈಶ್ವರ ಖಂಡ್ರೆ ಮಾಹಿತಿ: ಕರ್ನಾಟಕದಲ್ಲಿ ಆನೆಗಳ ಸಂಖ್ಯೆ 350ರಷ್ಟು ಹೆಚ್ಚಳ

ಬೆಂಗಳೂರು : ರಾಜ್ಯದ ಆನೆಗಳ ಸಂಖ್ಯೆಯಲ್ಲಿ 350ರಷ್ಟು ಹೆಚ್ಚಳವಾಗಿದೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಆನೆಗಳ ಗಣತಿಯ ವರದಿ ಬಿಡುಗಡೆ ಮಾಡಿ ಮಾತನಾಡಿದ ಅವರು, 2017ರಲ್ಲಿ ರಾಜ್ಯದಲ್ಲಿ ಸುಮಾರು 6049 ಆನೆಗಳಿದ್ದವು. ಈ ಬಾರಿ ಗಣತಿಯ ವೇಳೆ 6,395 ಆನೆಗಳಿವೆ ಎಂದು ಅಂದಾಜು ಮಾಡಲಾಗಿದ್ದು, ಸುಮಾರು 350ರಷ್ಟು ಹೆಚ್ಚಳವಾಗಿದೆ ಎಂದರು.ಆನೆಗಳು ಬಲಿಷ್ಠ ವನ್ಯಜೀವಿಗಳಾದರೂ ಭಾರತ ಸೇರಿದಂತೆ ವಿಶ್ವಾದ್ಯಂತ ಅಪಾಯದಲ್ಲಿವೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ […]

ಇಸ್ರೊದ 3ನೇ ಹಂತದ ಕಾರ್ಯಾಚರಣೆ ಯಶಸ್ವಿ: ಚಂದ್ರನಿಗೆ 1,500 ಕಿಮೀ ಹತ್ತಿರ ತಲುಪಿದ ಚಂದ್ರಯಾನ-೩

ಬೆಂಗಳೂರು: ಭಾನುವಾರ ನಡೆಸಿದ ಚಂದ್ರನ ಕಕ್ಷೆ ಸೇರ್ಪಡೆಯನ್ನು (ಎಲ್‌ಒಐ) ಒಳಗೊಂಡ ತನ್ನ ಮೂರನೇ ಚಂದ್ರಯಾನ ಕಾರ್ಯಾಚರಣೆಯನ್ನು ಇಸ್ರೊ ಪೂರ್ಣಗೊಳಿಸಿದೆ.ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-3 ನೌಕೆ ಚಂದ್ರನಿಗೆ ಅತ್ಯಂತ ಹತ್ತಿರಕ್ಕೆ ತಲುಪಿದೆ.ಚಂದ್ರಯಾನ-3 ಬಾಹ್ಯಾಕಾಶ ನೌಕೆ ಚಂದ್ರನಿಗೆ ತೀರಾ ಹತ್ತಿರಕ್ಕೆ ತಲುಪಿದ್ದು, ಭಾರತದ ಬಾಹ್ಯಾಕಾಶ ಇತಿಹಾಸದಲ್ಲಿ ಇಸ್ರೊ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿತು. ಸೋಮವಾರ ಇಸ್ರೋ ಚಂದ್ರಯಾನ -3 ರ ಎತ್ತರವನ್ನು ಸುಮಾರು 14,000 ಕಿಮೀ ಕಡಿಮೆ ಮಾಡಿ ಚಂದ್ರನಿಗೆ 4,313 ಕಿಮೀಗೆ ಇಳಿಸಿತ್ತು. ಮುಂದಿನ ಚಂದ್ರಯಾನ ಕಾರ್ಯಾಚರಣೆ ಕ್ರಮಗಳು ಆಗಸ್ಟ್ 14 […]

ಐಸಿಸಿ ರ್‍ಯಾಂಕಿಂಗ್‌ನಲ್ಲಿ ಗಿಲ್​, ಕಿಶನ್‌ಗೆ ಸಿಹಿ ಸುದ್ದಿ

ದುಬೈ: ಆರಂಭಿಕ ಆಟಗಾರರಾದ ಇಶಾನ್​ ಕಿಶನ್​ ಮತ್ತು ಶುಭಮನ್​ ಗಿಲ್​ ತಮ್ಮ ವೃತ್ತಿಜೀವನದ ಅತ್ಯುತ್ತಮ ರ್‍ಯಾಂಕಿಂಗ್ ಗಿಟ್ಟಿಸಿಕೊಂಡಿದ್ದಾರೆ.ವೆಸ್ಟ್​ ಇಂಡೀಸ್​ ಪ್ರವಾಸದ ಏಕದಿನ ಪಂದ್ಯಗಳಲ್ಲಿ ಭಾರತ ಕ್ರಿಕೆಟ್‌ ತಂಡದ ಯುವ ಬ್ಯಾಟರ್​ಗಳು ಉತ್ತಮ ಪ್ರದರ್ಶನ ನೀಡಿದ್ದು ಐಸಿಸಿ ಶ್ರೇಯಾಂಕದಲ್ಲಿ ಚೇತರಿಕೆ ಕಂಡಿದ್ದಾರೆ.ಐಸಿಸಿ ಏಕದಿನ ರ್‍ಯಾಂಕಿಂಗ್​ ಬಿಡುಗಡೆಯಾಗಿದೆ. ವೆಸ್ಟ್​ ಇಂಡೀಸ್​ ಪ್ರವಾಸದಲ್ಲಿ ಮಿಂಚಿದ ಯುವ ಆಟಗಾರರು ಶ್ರೇಯಾಂಕದಲ್ಲಿ ಏರಿಕೆ ಕಂಡಿದ್ದಾರೆ. ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಮ್ ಏಕದಿನ ಕ್ರಿಕೆಟ್​ ಶ್ರೇಯಾಂಕದಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. ಎರಡನೇ ಸ್ಥಾನದಲ್ಲಿ ದಕ್ಷಿಣ ಆಫ್ರಿಕಾದ […]