ಆ. 11 ಮತ್ತು 13 ರಂದು ವಿದ್ಯುತ್ ವ್ಯತ್ಯಯ
ಉಡುಪಿ: 110/33/11 ಕೆ.ವಿ ಮಣಿಪಾಲ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಮೂಡುಬೆಳ್ಳೆ ಫೀಡರಿನಲ್ಲಿ ನಿರ್ವಹಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಮಣಿಪುರ, ಮೂಡುಬೆಳ್ಳೆ, ಮರ್ಣೆ, ಕಟ್ಟಿಂಗೇರಿ, ಕೆಮ್ತೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಗಸ್ಟ್ 11 ರಂದು ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ಹಾಗೂ 110/11 ಕೆ.ವಿ ಕಾರ್ಕಳ ಉಪವಿದ್ಯುತ್ ಸ್ಥಾವರದಿಂದ ಹೊರಡುವ 11 ಕೆ.ವಿ ಅಜೆಕಾರು ಮಾರ್ಗದ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಕಾಡುಹೊಳೆ, ಗುಡ್ಡೆಯಂಗಡಿ, ಭೂತಗುಂಡಿ, ಭೂತಮಾರು, ಶಿರ್ಲಾಲು, ಹಾಡಿಯಂಗಡಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ […]
ಗಂಡ ಕಪ್ಪೆಂದು ಅವಮಾನಿಸಿ ಪ್ರತ್ಯೇಕವಾಗಿ ವಾಸಿಸಿ ಸುಳ್ಳು ಆರೋಪ ಹೊರಿಸಿದ ಪತ್ನಿ: ಕ್ರೌರ್ಯದ ಹಿನ್ನೆಲೆಯಲ್ಲಿ ವಿವಾಹ ವಿಸರ್ಜಿಸಿದ ಕರ್ನಾಟಕ ಹೈಕೋರ್ಟ್
ಬೆಂಗಳೂರು: ಪತಿಯ ಮೈ ಬಣ್ಣವನ್ನು ‘ಕಪ್ಪು’ ಎಂದು ಅವಮಾನಿಸಿ ಪತ್ನಿ ಅದೇ ಕಾರಣಕ್ಕೆ ಆತನಿಂದ ದೂರವಿರುವುದು ಮತ್ತು ವಿಷಯವನ್ನು ಮುಚ್ಚಿಡಲು ಅಕ್ರಮ ಸಂಬಂಧಗಳ ಸುಳ್ಳು ಆರೋಪಗಳನ್ನು ಪತಿಯ ಮೇಲೆ ಹೊರಿಸುವುದು ಕ್ರೌರ್ಯದ ಪರಿಧಿಯಲ್ಲಿ ಬರುವುದು ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಪತಿ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ಅಲೋಕ್ ಆರಾಧೆ ಮತ್ತು ಅನಂತ್ ರಾಮನಾಥ್ ಹೆಗ್ಡೆ ಅವರಿದ್ದ ವಿಭಾಗೀಯ ಪೀಠವು ಅಂಗೀಕರಿಸಿತು ಮತ್ತು ವಿಚ್ಛೇದನದ ತೀರ್ಪು ನಿರಾಕರಿಸಿದ ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ತಳ್ಳಿಹಾಕಿತು. “ಗಂಡ ಕಪ್ಪಾಗಿದ್ದಾನೆ ಎಂಬ ಕಾರಣಕ್ಕಾಗಿ […]
ಮೀನುಗಾರಿಕಾ ಸಹಕಾರ ಸಂಘಗಳ ಆಡಳಿತ ನಿರ್ವಹಣಾ ತರಬೇತಿ ಶಿಬಿರ
ಉಡುಪಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ. ಉಡುಪಿ, ಹಾಗೂ ಸಹಕಾರ ಇಲಾಖೆ ಉಡುಪಿ ಜಿಲ್ಲೆ, ಇದರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಉಡುಪಿ ಜಿಲ್ಲೆಯ ಎಲ್ಲಾ ಪ್ರಾಥಮಿಕ ಮೀನುಗಾರರ ಸಹಕಾರ ಸಂಘಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಮುಖ್ಯಕಾರ್ಯನಿರ್ವಾಹಕರಿಗೆ ಆಡಳಿತ ನಿರ್ವಹಣಾ ತರಬೇತಿ ಶಿಬಿರವನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್‌ಪಾಲ್ ಎ. ಸುವರ್ಣ ಉದ್ಘಾಟಿಸಿ ಶುಭ ಹಾರೈಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ. ಜಯಕರ […]
ನಮಾಮಿ ಗಂಗಾ ಯೋಜನೆ ಜಾಗತಿಕ ಪರಿಸರ ಸಂರಕ್ಷಣೆಯಲ್ಲಿ ಒಂದು ಮೈಲಿಗಲ್ಲು: ಜಿ. ಅಶೋಕ್ ಕುಮಾರ್
ಮಣಿಪಾಲ: ಕೇಂದ್ರ ಸರಕಾರದ ಗಂಗಾ ನದಿಯನ್ನು ಸ್ವಚ್ಛ ಮತ್ತು ಪುನರ್ಜೀವನಗೊಳಿಸುವ ‘ನಮಾಮಿ ಗಂಗಾ’ ಯೋಜನೆಯು ಜಗತ್ತಿನ ಅತ್ಯಂತ ಪ್ರಮುಖ ಯೋಜನೆಗಳಲ್ಲಿ ಒಂದಾಗಿದ್ದು ಇದಕ್ಕೆ ಕೇಂದ್ರ ಸರಕಾರವು 20 ಸಾವಿರಕ್ಕೂ ಮಿಕ್ಕಿ ಕೋಟಿ ರೂಪಾಯಿಯನ್ನು ತೆಗೆದಿರಿಸಿದೆ. ಕಳೆದ 9 ವರ್ಷಗಳಲ್ಲಿ 450ಕ್ಕೂ ಮಿಕ್ಕಿ ವಿವಿಧ ಕಾಮಗಾರಿಗಳನ್ನು ಕಾರ್ಯರೂಪಗೊಳಿಸಿ ಗಂಗಾ ನದಿಯನ್ನು ಪುನರ್ಜೀವನಗೊಳಿಸುವ ಕಾರ್ಯ ನಡೆದಿದೆ. ಇದಕ್ಕೆ ಸಾಕಷ್ಟು ಪ್ರತಿಫಲವು ದೊರಕಿದ್ದು ಈ ನಿಟ್ಟಿನಲ್ಲಿ ಹತ್ತು ಹಲವು ಕಾರ್ಯ ಯೋಜನೆಗಳು ಕಾರ್ಯಗತಗೊಳ್ಳುತ್ತಿದೆ. ಅವಿರಲಧಾರ ಗಂಗಾ , ನಿರ್ಮಲಧಾರ ಗಂಗಾ, ಜ್ಞಾನ […]
ಪಿ.ಎ ಇಂಜಿನಿಯರಿಂಗ್ ಕಾಲೇಜು ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ
ಮಂಗಳೂರು: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ನಡೆಸಿದ 2023ರ ವಾರ್ಷಿಕ ಪರೀಕ್ಷೆಯಲ್ಲಿ ಬಯೋಟೆಕ್ನಾಲಜಿ ವಿಭಾಗದಲ್ಲಿ 5ನೇ ಮತ್ತು 6ನೇ ರ‍್ಯಾಂಕ್ ಗಳಿಸಿದ ಫೀನಾ ಹಕೀಮ್ ಮತ್ತು ಹರ್ಷಿತ ಶೆಟ್ಟಿಗಾರ್ ಅಭಿನಂದನಾ ಕಾರ್ಯಕ್ರಮವನ್ನು ಪಿ.ಎ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪಿ.ಎ.ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ರಮೀಝ್ ಎಂ.ಕೆ ಮಾತನಾಡಿ, ವಿದ್ಯಾರ್ಥಿಗಳು ಉದ್ಯೋಗಾವಕಾಶವನ್ನು ಸದುಪಯೋಗಪಡಿಸಿಕೊಳ್ಳುವ ಬಗ್ಗೆ ಹಾಗೂ ರ‍್ಯಾಂಕ್ ಗಳಿಸಿ ಕಾಲೇಜಿಗೆ ಕೀರ್ತಿ ತರುವ ಬಗ್ಗೆ ತಿಳಿ ಹೇಳಿದರು. ಪಿ. ಎ. ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ […]