47 ವರ್ಷದ ಬಳಿಕ ಚಂದ್ರನಲ್ಲಿಗೆ ಹಾರಿದ ರಷ್ಯಾ ನೌಕೆ

ಮಾಸ್ಕೋ :ರಷ್ಯಾದ ವೊಸ್ಟೊಚ್ನಿ ಉಡಾವಣಾ ಕೇಂದ್ರದಿಂದ ಲೂನಾ -25 ಬಾಹ್ಯಾಕಾಶ ನೌಕೆಯು ಮಾಸ್ಕೋ ಸಮಯ ಶುಕ್ರವಾರ ಮುಂಜಾನೆ 2:10 ಕ್ಕೆ (ಐಎಸ್​ಟಿ ಕಾಲಮಾನ ಬೆಳಗ್ಗೆ 4:40) ಸೋಯುಜ್ -2.1 ಬಿ ರಾಕೆಟ್ ಮೂಲಕ ನಭಕ್ಕೆ ಹಾರಿದೆ. 47 ವರ್ಷಗಳ ಬಳಿಕ ರಷ್ಯಾ ತನ್ನ ಲೂನಾ-25 ಲ್ಯಾಂಡರ್ ಮಿಷನ್ ಮೂಲಕ ಮತ್ತೆ ಚಂದ್ರನತ್ತ ಮುಖ ಮಾಡಿದೆ. ದಶಕಗಳ ಬಳಿಕ ರಷ್ಯಾ ಮತ್ತೊಮ್ಮೆ ಚಂದ್ರನ ಮೇಲೆ ನೌಕೆ ಇಳಿಸಲು ಮುಂದಾಗಿದೆ. ರಷ್ಯಾದ ಲೂನಾ -25 ಬಾಹ್ಯಾಕಾಶ ನೌಕೆಯು ಶುಕ್ರವಾರ ಸೋಯುಜ್ […]

ಚಿಟ್‌ ರಿಜಿಸ್ಟ್ರಾರ್‌ ನೀಡಿದ ಬಹಿರಂಗ ನೊಟೀಸ್‌ಗೆ ಹೈಕೋರ್ಟ್‌ ತಡೆ

ಅಮರಾವತಿ (ಆಂಧ್ರ ಪ್ರದೇಶ): ಮಾರ್ಗದರ್ಶಿ ಚಿಟ್ ಗ್ರೂಪ್​ಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸುವ ಕುರಿತು ಚಿಟ್​ ರಿಜಿಸ್ಟ್ರಾರ್​ ಹೊರಡಿಸಿದ್ದ ಸಾರ್ವಜನಿಕ ನೊಟೀಸ್​ಗೆ ಆಂಧ್ರ ಪ್ರದೇಶ ಹೈಕೋರ್ಟ್​ ತಡೆಯಾಜ್ಞೆ ಕೊಟ್ಟಿದೆ.ಮಾರ್ಗದರ್ಶಿ ಚಿಟ್ ಗ್ರೂಪ್​ಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸುವ ಕುರಿತು ಚಿಟ್​ ರಿಜಿಸ್ಟ್ರಾರ್​ ಹೊರಡಿಸಿದ್ದ ಸಾರ್ವಜನಿಕ ನೊಟೀಸ್​ಗೆ ಆಂಧ್ರ ಪ್ರದೇಶ ಹೈಕೋರ್ಟ್ ಇಂದು​ ತಡೆ ನೀಡಿತು. ಸಾರ್ವಜನಿಕ ನೊಟೀಸ್​ ಆಧಾರದ ಮೇಲೆ ಯಾವುದೇ ಕ್ರಮ ತೆಗೆದುಕೊಳ್ಳುವುದಕ್ಕೆ ಹೈಕೋರ್ಟ್​ ತಡೆ ಕೊಟ್ಟಿದೆ. ಚಂದಾದಾರರು ಈಗಾಗಲೇ ಸಲ್ಲಿಸಿರುವ ಅರ್ಜಿಗಳ ಕುರಿತಂತೆ ಮಧ್ಯಂತರ ಆದೇಶ ಹೊರಡಿಸಲಾಗಿದೆ. […]

ಈರುಳ್ಳಿ ಬೆಲೆ ಏರಿಕೆ ಹಿನ್ನೆಲೆ :ಕೇಂದ್ರದಿಂದ ಬಫರ್ ಸ್ಟಾಕ್ ಬಿಡುಗಡೆ ಆರಂಭ 

ನವದೆಹಲಿ: ದೇಶದ ಕೆಲ ಭಾಗಗಳಲ್ಲಿ ಈರುಳ್ಳಿ ಬೆಲೆ ಏರಿಕೆಯಾಗುತ್ತಿರುವ ವರದಿಗಳಿಂದ ಅಲರ್ಟ್​ ಆಗಿರುವ ಕೇಂದ್ರ ಸರ್ಕಾರ ತನ್ನ ಬಫರ್ ಸ್ಟಾಕ್​ನಿಂದ ಈರುಳ್ಳಿಯನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲು ಪ್ರಾರಂಭಿಸಿದೆ. ಈ ಮೂಲಕ ಈರುಳ್ಳಿಯ ಬೆಲೆ ಏರಿಕೆಯನ್ನು ತಡೆಗಟ್ಟಲು ಕೇಂದ್ರ ಸರ್ಕಾರ ತ್ವರಿತವಾಗಿ ಮಧ್ಯ ಪ್ರವೇಶಿಸಿದೆ. ಈರುಳ್ಳಿ ಬೆಲೆಗಳು ಹೆಚ್ಚಾಗಬಹುದು ಎಂಬ ಅಂದಾಜಿನ ಹಿನ್ನೆಲೆಯಲ್ಲಿ ತಕ್ಷಣ ಕಾರ್ಯಪ್ರವೃತ್ತವಾಗಿರುವ ಕೇಂದ್ರ ಸರ್ಕಾರ, ಈರುಳ್ಳಿ ಬಫರ್ ಸ್ಟಾಕ್​ ಅನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾರಂಭಿಸಿದೆ. ಸರ್ಕಾರದ ಕೃಷಿ ಮಾರುಕಟ್ಟೆ ಏಜೆನ್ಸಿಗಳಾದ ರಾಷ್ಟ್ರೀಯ ಕೃಷಿ ಸಹಕಾರ […]

BSE 366 & Nifty 115 ಅಂಕ ಇಳಿಕೆ

ಮುಂಬೈ : ಭಾರತೀಯ ಶೇರು ಸೂಚ್ಯಂಕಗಳು ಶುಕ್ರವಾರ ಸತತ ಎರಡನೇ ದಿನಕ್ಕೆ ಕುಸಿತವನ್ನು ಮುಂದುವರಿಸಿವೆ. 30 ಶೇರುಗಳ ಬಿಎಸ್‌ಇ ಸೆನ್ಸೆಕ್ಸ್ 366 ಪಾಯಿಂಟ್ಸ್ ಅಥವಾ ಶೇಕಡಾ 0.56 ರಷ್ಟು ಕುಸಿದು 65,323 ಕ್ಕೆ ತಲುಪಿದೆ. ಎನ್‌ಎಸ್‌ಇ ನಿಫ್ಟಿ ಸೂಚ್ಯಂಕ 115 ಪಾಯಿಂಟ್ಸ್ ಅಥವಾ ಶೇಕಡಾ 0.59 ರಷ್ಟು ಕುಸಿದು 19,428 ಕ್ಕೆ ತಲುಪಿದೆ. ಫಾರ್ಮಾ, ಹೆಲ್ತ್ ಕೇರ್, ಬ್ಯಾಂಕ್, ಹಣಕಾಸು, ಗ್ರಾಹಕ ಸರಕುಗಳು, ಲೋಹ ಮತ್ತು ಆಟೋಮೊಬೈಲ್ ಶೇರುಗಳು ದೇಶೀಯ ಸೂಚ್ಯಂಕಗಳನ್ನು ಕೆಳಮಟ್ಟಕ್ಕೆ ಇಳಿಸಿದವು. ಚಿಲ್ಲರೆ ಹಣದುಬ್ಬರ […]

ಲೋಕಸಭೆಯಲ್ಲಿ 22, ರಾಜ್ಯಸಭೆಯಲ್ಲಿ 25 ಮಸೂದೆ ಅಂಗೀಕಾರ : ಮುಂಗಾರು ಅಧಿವೇಶನ ಅಂತ್ಯ

ನವದೆಹಲಿ : ಸಂಸತ್ತಿನ ಉಭಯ ಸದನಗಳನ್ನು ಶುಕ್ರವಾರ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದ್ದು, ಕೆಳಮನೆಯಲ್ಲಿ ಶೇ 45 ಮತ್ತು ಮೇಲ್ಮನೆಯಲ್ಲಿ ಶೇ 63ರಷ್ಟು ಉತ್ಪಾದಕತೆಯನ್ನು ದಾಖಲಿಸಿದ್ದ ಮುಂಗಾರು ಅಧಿವೇಶನಕ್ಕೆ ಅಂತ್ಯ ಹಾಡಲಾಗಿದೆ.ಇಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, 23 ದಿನಗಳ ಸುದೀರ್ಘ ಅಧಿವೇಶನದಲ್ಲಿ ಒಟ್ಟು 17 ಅಧಿವೇಶನಗಳು (sittings) ನಡೆದಿವೆ ಎಂದು ಹೇಳಿದರು. ಸಂಸತ್​ ಕಲಾಪ ಇಂದು ಅಂತ್ಯಗೊಂಡಿದ್ದು, ಉಭಯ ಸದನಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಲೋಕಸಭೆಯ ಉತ್ಪಾದಕತೆಯು ಶೇಕಡಾ 45 ಮತ್ತು ರಾಜ್ಯಸಭೆಯ ಉತ್ಪಾದಕತೆ […]