ಜಿಲ್ಲೆಯ ಮನೆ-ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಾಡಲಿ: ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ
ಉಡುಪಿ: ಸರ್ಕಾರದ ಸೂಚನೆಯಂತೆ ನನ್ನ ಮಣ್ಣು- ನನ್ನ ದೇಶ ಕಾರ್ಯಕ್ರಮದ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಇದರ ಅಂಗವಾಗಿ ಆ. 15 ರವರೆಗೆ ಜಿಲ್ಲೆಯ ಮನೆ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸುವ ಮೂಲಕ ಪ್ರತಿಯೊಬ್ಬರಲ್ಲೂ ದೇಶಪ್ರೇಮ ಮೂಡಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಅವರು ಹೇಳಿದ್ದಾರೆ. ಈ ಅಭಿಯಾನದಲ್ಲಿ ಜಿಲ್ಲೆಯ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಭಾಗವಹಿಸಿ, ತಮ್ಮ ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸುವ ಮೂಲಕ ಅಭಿಯಾನವನ್ನು ಯಶಸ್ವಿಗೊಳಿಸಬೇಕು. ರಾಷ್ಟ್ರಧ್ವಜ ಹಾರಿಸುವ ಸಂದರ್ಭದಲ್ಲಿ ಧ್ವಜ […]
ಉಡುಪಿ: ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ
ಉಡುಪಿ: ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಆಗಸ್ಟ್ 14 ಮತ್ತು 15 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದು, ಪ್ರವಾಸದ ವಿವರಗಳು ಇಂತಿವೆ. ಆಗಸ್ಟ್ 14 ರಂದು ಮಧ್ಯಾಹ್ನ 12.15 ಕ್ಕೆ ಉಡುಪಿ ತಾಲೂಕು ಪಂಚಾಯತ್ ಆವರಣದಲ್ಲಿ , ಮಹಿಳಾ ಸ್ವ ಸಹಾಯ ಸಂಘಗಳ ಉತ್ಪನ್ನಗಳ ಮಾರಾಟ ಕೇಂದ್ರ ಸಂಜೀವಿನಿ ಸೂಪರ್ ಮಾರ್ಕೆಟ್ ಉದ್ಘಾಟನೆ. 1 ಗಂಟೆಗೆ ಜಿಲ್ಲಾ […]
ಶತಮಾನದ ಭೀಕರ ಕಾಡ್ಗಿಚ್ಚಿಗೆ ಹವಾಯಿ ದ್ವೀಪ ಭಸ್ಮ.. 89 ಮಂದಿ ಅಗ್ನಿಗಾಹುತಿ
ಲಹೈನಾ (ಹವಾಯಿ) : ಶತಮಾನಗಳಷ್ಟು ಹಳೆಯದಾದ ಲಹೈನಾ ಪಟ್ಟಣವನ್ನು ಕಾಡ್ಗಿಚ್ಚು ಸಂಪೂರ್ಣವಾಗಿ ಸುಟ್ಟು ಹಾಕಿದೆ. ನೂರಾರು ಮನೆಗಳು, ಸಮೃದ್ಧವಾದ ಕಾಡು ಸುಟ್ಟು ಕರಕಲಾಗಿದೆ. ಸ್ಮಶಾನದ ರೀತಿ ನಗರಗಳು ಭಾಸವಾಗುತ್ತಿರುವ ಭಯಾನಕ ದೃಶ್ಯಗಳು ಕರುಳು ಹಿಂಡುತ್ತಿವೆ. ಹವಾಯಿ ದ್ವೀಪ ಎದುರಿಸಿದ ಅತಿ ಭೀಕರ ನೈಸರ್ಗಿಕ ವಿಕೋಪವಾಗಿದೆ. ಅಗ್ನಿಜ್ವಾಲೆಗೆ ಸಿಲುಕಿ ಮೃತಪಟ್ಟವರನ್ನು ಗುರುತಿಸುವುದೂ ಸಾಧ್ಯವಾಗುತ್ತಿಲ್ಲ. ಪ್ರಕೃತಿ ರುದ್ರನರ್ತನಕ್ಕೆ ತಡೆ ಇಲ್ಲವಾಗಿದೆ. ಸರ್ಕಾರದ ಸದ್ಯದ ಗಮನ ಬದುಕುಳಿದವನ್ನು ಉಳಿಸಿಕೊಳ್ಳುವುದಾಗಿದೆ. ಅವರಿಗೆ ಸುರಕ್ಷಿತ ಪ್ರದೇಶದಲ್ಲಿ ವಸತಿ ವ್ಯವಸ್ಥೆ ಮಾಡಲಾಗಿದೆ. ಇದೊಂದು ವಿನಾಶಕಾರಿ ಕಾಡ್ಗಿಚ್ಚು. […]
ಆಧ್ಯಾತ್ಮಿಕ ಪ್ರವಾಸದಲ್ಲಿ ರಜನಿಕಾಂತ್ – ಬದ್ರಿನಾಥ್ ದೇವಸ್ಥಾನದಲ್ಲಿ ವಿಶೇಷ ಪೂಜೆ
ಭಾರತದ, ವಿಶೇಷವಾಗಿ ದಕ್ಷಿಣ ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಅವರು ಸದ್ಯ ಆಧ್ಯಾತ್ಮಿಕ ಪ್ರವಾಸದಲ್ಲಿದ್ದಾರೆ.ತಮ್ಮ ಬಹುನಿರೀಕ್ಷಿತ ಜೈಲರ್ ಸಿನಿಮಾದ ಬಿಡುಗಡೆಗೂ ಮುನ್ನ ಹಿಮಾಲಯ ಪ್ರವಾಸ ಕೈಗೊಂಡರು. ಇದೀಗ ಪ್ರಸಿದ್ಧ ಪುಣ್ಯಕ್ಷೇತ್ರ ಬದ್ರಿನಾಥ್ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದಾರೆ.ಇಂದು ಸೂಪರ್ ಸ್ಟಾರ್ ರಜನಿಕಾಂತ್ ಅವರು ಬದ್ರಿನಾಥ್ ದೇವಸ್ಥಾನಕ್ಕೆ ಭೇಟಿ ಕೊಟ್ಟು ಪೂಜೆ ಸಲ್ಲಿಸಿದ್ದಾರೆ. ಬದ್ರಿನಾಥ್ ದೇವಸ್ಥಾನಕ್ಕೆ ಭೇಟಿ: ಇಂದು ಬೆಳಗ್ಗೆ ಬದ್ರಿನಾಥ್ ದೇವಸ್ಥಾನಕ್ಕೆ ಭೇಟಿ ಕೊಟ್ಟು ವಿಶೇಷ ಪೂಜೆ ಸಲ್ಲಿಸಿದರು. ಸೂಪರ್ ಸ್ಟಾರ್ ಅವರನ್ನು ಬದ್ರಿನಾಥ್ – ಕೇದಾರನಾಥ ದೇವಾಲಯ […]
3 ದಿನಗಳಲ್ಲಿ ₹100 ಕೋಟಿ ಬಾಚಿದ ‘ಜೈಲರ್’ : ರಜನಿ ಸಿನಿಮಾ ಸೂಪರ್ ಹಿಟ್..
ಕಾಲಿವುಡ್ ಸೂಪರ್ಸ್ಟಾರ್ ರಜನಿಕಾಂತ್ ನಟನೆಯ ‘ಜೈಲರ್’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸುತ್ತಿದೆ.ರಜನಿಕಾಂತ್ ನಟನೆಯ ‘ಜೈಲರ್’ ಸಿನಿಮಾ ಮೂರನೇ ದಿನ 35 ಕೋಟಿ ರೂ. ಕಲೆಕ್ಷನ್ ಮಾಡಿದೆ. ಈ ಮೂಲಕ ಭಾರತದಲ್ಲಿ ಒಟ್ಟು 109.10 ಕೋಟಿ ರೂ. ಗಳಿಸಿದೆ. 3ನೇ ದಿನದ ಕಲೆಕ್ಷನ್: ‘ಜೈಲರ್’ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಬಿಡುಗಡೆಯಾದ ಮೂರು ದಿನಗಳಲ್ಲಿ ಭಾರತದಲ್ಲಿ 100 ಕೋಟಿ ರೂಪಾಯಿ ಗಳಿಸಿದೆ. ಟ್ರೇಡಿಂಗ್ ಪೋರ್ಟಲ್ ಸ್ಯಾಕ್ನಿಕ್ ಪ್ರಕಾರ, ಚಿತ್ರವು ಬಿಡುಗಡೆಯಾದ ಮೊದಲ ದಿನ 48.35 ಕೋಟಿ ರೂಪಾಯಿಗಳನ್ನು ಗಳಿಸಿತ್ತು. […]