ಯಾರು ಹೇಳಿದರು: ನಮಗೆ ಸ್ವಾತಂತ್ರ್ಯ ಬಂದಿಲ್ಲವೆಂದು..?

ಅಂತೂ ನಾವು ಸ್ವತಂತ್ರರು: ಕನ್ನಡವನ್ನು ಬಿಟ್ಟು ಪರಂಗಿಗಳ ಇಂಗ್ಲಿಷನ್ನು ನೆಚ್ಚಿಕೊಂಡು ನಮ್ಮ ಭಾಷೆಯನ್ನೂ ಕೊಂದುಕೊಂಡು, ಇಂಗ್ಲಿಷನ್ನು ದಿನನಿತ್ಯದ ಬದುಕಿನಲ್ಲಿ ಮಾತಾಡುತ್ತ ಅದನ್ನು ಬೆಳೆಸುವುದಕ್ಕೆ; ಯಾರೋ ಬರೆದ ನಮ್ಮ ಚರಿತ್ರೆಯನ್ನು ಕಣ್ಮುಚ್ಚಿ ಬಾಯ್ಮುಚ್ಚಿ ಓದುವುದಕ್ಕೆ; ಯಾರೋ ತಿರುಚಿ ಬರೆದ ಚರಿತ್ರೆಯನ್ನೇ ಸತ್ಯವೆಂದು ಕಂಠಪಾಠ ಮಾಡಿ ಪರೀಕ್ಷೆಯಲ್ಲಿ ಬರೆದು ಅಂಕಗಳಿಸುವುದಕ್ಕೆ, ಮತ್ತೊಬ್ಬರ ಕೈಕೆಳಗೆ ದುಡಿಯುವುದರಲ್ಲೇ ಆನಂದ ಪಡುವುದಕ್ಕೆ; ನಮ್ಮ ಸಾಂಸ್ಕೃತಿಕ ಹಿರಿಮೆಯನ್ನು ಮರೆಸಿ ವಿದೇಶೀ ಸಂಸ್ಕೃತಿಯನ್ನು ಮೆರೆಸುವುದಕ್ಕೆ; ಜಾತ್ಯತೀತರೆನ್ನುತ್ತಲೇ ಜಾತೀಯತೆಯನ್ನು ಬೆಳೆಸುತ್ತಾ ಜಾತಿಯಾಧಾರದಲ್ಲಿ ರಾಜಕೀಯ ದೊಂಬರಾಟ ಮಾಡುವುದಕ್ಕೆ; ಮಠಗಳನ್ನು ಕಟ್ಟಿಕೊಂಡು […]

ರಾಜ್ಯ ರಾಜಧಾನಿಯಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: 77ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮಂಗಳವಾರ ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣೆಕ್ ಶಾ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಸಿದ್ದರಾಮಯ್ಯನವರು ಕರ್ನಾಟಕದ ಮುಖ್ಯಮಂತ್ರಿಯಾಗಿ ತಮ್ಮ ಮೊದಲ ಸ್ವಾತಂತ್ರ್ಯ ದಿನಾಚರಣೆಯ ಭಾಷಣವನ್ನು ಮಾಡಿದರು. ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ರಾಜ್ಯದಲ್ಲಿ ಜನಜೀವನದ ಗುಣಮಟ್ಟ ಹೆಚ್ಚಿಸಲು ಸರ್ಕಾರ ನೀಡುತ್ತಿರುವ ಕಲ್ಯಾಣ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಕರ್ನಾಟಕ ಸರ್ಕಾರದ ಕಲ್ಯಾಣ ಯೋಜನೆಗಳು ಸಮಯಾತೀತವಾಗಿವೆ ಮತ್ತು ಅವು ಜನರ ಜೀವನ ಮಟ್ಟವನ್ನು ಸುಧಾರಿಸುವ ಗುರಿಯನ್ನು ಹೊಂದಿವೆ. […]

ಸಂಜೀವಿನಿ ಸೂಪರ್ ಮಾರ್ಕೆಟ್ ರಾಜ್ಯದ ಎಲ್ಲ ಜಿಲ್ಲೆಗಳಿಗೂ ವಿಸ್ತರಿಸುವಂತಾಗಲಿ: ಲಕ್ಷ್ಮಿ ಹೆಬ್ಬಾಳ್ಕರ್

ಉಡುಪಿ: ಸಮೃದ್ಧಿ ಸಂಜೀವಿನಿ ಸ್ವಸಹಾಯ ಗುಂಪಿನ ಸದಸ್ಯರು ಆರಂಭಿಸಿರುವ ‘ಸಂಜೀವಿನಿ ಸೂಪರ್ ಮಾರ್ಕೆಟ್’ ಅನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೋಮವಾರದಂದು ಉದ್ಘಾಟಿಸಿದರು. ಉಡುಪಿಯ ತಾಲೂಕು ಪಂಚಾಯತ್ ಆವರಣದಲ್ಲಿ ಆರಂಭಿಸಿರುವ ಸೂಪರ್ ಮಾರ್ಕೆಟ್ ಹಾಗೂ ಸಂಜೀವಿನಿ ಆಹಾರೋತ್ಸವಕ್ಕೆ ಸೋಮವಾರ ಚಾಲನೆ ನೀಡಿ ಮಾತನಾಡಿದ ಸಚಿವೆ ಪುರುಷರಿಗೆ ಹೋಲಿಸಿದರೆ ಮಹಿಳೆಯರು ಶಾರೀರಿಕವಾಗಿ ಅಶಕ್ತರಿರಬಹುದು, ಆದರೆ ಮಾನಸಿಕವಾಗಿ ಪುರುಷರಿಗಿಂತ ಹೆಚ್ಚು ಶಕ್ತವಾಗಿದ್ದಾಳೆ ಎಂದರು. ಫ್ಯಾಬ್ ಇಂಡಿಯಾ, ಗುಡ್ […]

ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಿ; ಪ್ರವಾಸಿಗರಿಗೆ ಉತ್ತಮ ಮೂಲ ಸೌಕರ್ಯ ಒದಗಿಸಿ: ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ಜಿಲ್ಲೆಯ ಪ್ರಕೃತಿ ಸೌಂದರ್ಯ, ಧಾರ್ಮಿಕ ಕೇಂದ್ರಗಳು ಪ್ರವಾಸಿಗರನ್ನು ಕೈ ಬೀಸಿ ಕರೆಯುವಂತಿದೆ ಇಲ್ಲಿನ ಪ್ರವಾಸಿತಾಣಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು ಹಾಗೂ ಆಗಮಿಸುವ ಪ್ರವಾಸಿಗರಿಗೆ ಕುಡಿಯುವ ನೀರಿನ ಸೌಲಭ್ಯ, ಶೌಚಾಲಯ, ವಾಹನಗಳ ಪಾರ್ಕಿಂಗ್, ಸೇರಿದಂತೆ ಮತ್ತಿತರ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದರು. ಅವರು ಇಂದು ರಜತಾದ್ರಿಯ ಜಿಲ್ಲಾಧಿಕಾರಿ […]

ಪೂರ್ಣಪ್ರಜ್ಞ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನಲ್ಲಿ ಗ್ರಂಥಪಾಲಕರ ದಿನಾಚರಣೆ

ಉಡುಪಿ: ಭಾರತದ ಗ್ರಂಥಾಲಯ ವಿಜ್ಞಾನದ ಪಿತಾಮಹ ಡಾ. ಎಸ್.ಆರ್.ರಂಗನಾಥನ್ ಅವರ 131 ನೇ ಜನ್ಮದಿನದ ನೆನಪಿಗಾಗಿ ಪೂರ್ಣಪ್ರಜ್ಞ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನವನ್ನು ಆಚರಿಸಲಾಯಿತು. ಸಾರ್ವಜನಿಕ ಗ್ರಂಥಾಲಯ ಇಲಾಖೆ, ಉಡುಪಿ ಇದರ ಮುಖ್ಯ ಗ್ರಂಥಾಲಯ ಅಧಿಕಾರಿ ನಳಿನಿ ಜಿ ಐ ಮತ್ತು ಗ್ರಂಥಪಾಲಕಿ ರಂಜಿತ ಸಿ ಅತಿಥಿಗಳಾಗಿ ಭಾಗವಹಿಸಿದ್ದರು. ಇಂದಿನ ಡಿಜಿಟಲ್ ಜಗತ್ತಿನಲ್ಲಿ ಇ-ಸಂಪನ್ಮೂಲಗಳ ಪ್ರಾಮುಖ್ಯತೆಯನ್ನು ಅವರು ವಿವರಿಸಿದರು. ಗ್ರಂಥಾಲಯದ ಬಳಕೆದಾರರ ವಿವಿಧ ಅವಶ್ಯಕತೆಗಳನ್ನು ಪೂರೈಸಲು ಗ್ರಂಥಾಲಯದಲ್ಲಿರುವ ಭೌತಿಕ ಸಂಪನ್ಮೂಲಗಳು ಮತ್ತು ಇ-ಸಂಪನ್ಮೂಲಗಳ ನಡುವೆ […]