ಶಿವಮೊಗ್ಗ ಲಯನ್ಸ್ಗೆ ರೋಚಕ ಗೆಲುವು: ಬ್ಯಾಟಿಂಗ್‌ನಲ್ಲಿ ಅಬ್ಬರಿಸಿದ ಶರತ್
ಬೆಂಗಳೂರು: ಟಾಸ್ ಗೆದ್ದ ಶಿವಮೊಗ್ಗ ಬೌಲಿಂಗ್ ಆಯ್ಕೆ ಮಾಡಿಕೊಂಡು ಗುಲ್ಬರ್ಗಕ್ಕೆ ಬ್ಯಾಟಿಂಗ್ ಮಾಡುವಂತೆ ಆಹ್ವಾನಿಸಿತು. ಲಯನ್ಸ್ ಬೌಲಿಂಗ್ ದಾಳಿಗೆ ಸಿಲುಕಿದ ಗುಲ್ಬರ್ಗ ಆರಂಭಿಕ ಆಘಾತ ಎದುರಿಸಿತು. ಮೊದಲ ಓವರ್‌ನಲ್ಲಿಯೇ ಎಲ್.ಆರ್.ಚೇತನ್ ರನೌಟಿಗೆ ಬಲಿಯಾದರು. ನಂತರ ಬಂದ ಸೌರಭ್ ಮುತ್ತೂರ್ ಕೂಡ ವಿ.ಕೌಶಿಕ್‌ಗೆ ವಿಕೆಟ್ ಒಪ್ಪಿಸಿ ಬಹುಬೇಗ ನಿರ್ಗಮಿಸಿದರು. ಮೂರನೇ ವಿಕೆಟ್‌ಗೆ ಆದರ್ಶ್ ಪ್ರಜ್ವಲ್ (43), ಆರ್.ಸ್ಮರಣ್ (40) ಜೊತೆಯಾಟವಾಡಿ 77 ರನ್ ಕಲೆಹಾಕುವ ಮೂಲಕ 10 ಓವರ್‌ಗಳಲ್ಲಿ ತಂಡದ ಸ್ಕೋರ್ ಅನ್ನು 86ಕ್ಕೆ ಕೊಂಡೊಯ್ದರು. ಮಹಾರಾಜ ಟ್ರೋಫಿ […]
ದೇಶದ 12 ನಗರಗಳಲ್ಲಿ ಪಂದ್ಯಾಟ : ಪ್ರೋ ಕಬಡ್ಡಿ ಹೊಸ ಸೀಸನ್‌ಗೆ ಮುಹೂರ್ತ
ಮುಂಬೈ: 9 ಆವೃತ್ತಿಗಳ ಭರ್ಜರಿ ಯಶಸ್ಸಿನ ಬಳಿಕ 10ನೇ ಆವೃತ್ತಿಯ ಪ್ರೋ ಕಬಡ್ಡಿ ಲೀಗ್ ಡಿಸೆಂಬರ್ 2ರಿಂದ ಆರಂಭವಾಗಲಿದೆ. ಈ ಸಲದ ಟೂರ್ನಿ ದೇಶದ ಹನ್ನೆರಡು ನಗರಗಳಲ್ಲಿ ಹಂತಹಂತವಾಗಿ ನಡೆಯಲಿದೆ.ಪ್ರೋ ಕಬಡ್ಡಿ ಆಯೋಜಿಸುತ್ತಿರುವ ಮಾಶಲ್ ಸ್ಪೋರ್ಟ್ಸ್ ಮತ್ತು ಲೀಗ್ ಮುಖ್ಯಸ್ಥ ಹಾಗೂ ಲೀಗ್ ಆಯುಕ್ತ ಅನುಪಮ್ ಗೋಸ್ವಾಮಿ ಮಾತನಾಡಿ, “ಹತ್ತನೇ ಆವೃತ್ತಿಯನ್ನು ಆಯೋಜಿಸಲು ನಾವು ಉತ್ಸುಕರಾಗಿದ್ದೇವೆ. ಅದ್ಭುತ ಪ್ರಯಾಣದ ಭಾಗವಾಗಿದ್ದಕ್ಕಾಗಿ ನಾವು ನಮ್ಮ ಕ್ರೀಡಾಪಟುಗಳು ಮತ್ತು ಅಭಿಮಾನಿಗಳಿಗೆ ಕೃತಜ್ಞರಾಗಿರುತ್ತೇವೆ” ಎಂದರು. ಪ್ರೋ ಕಬಡ್ಡಿ 10ನೇ ಸೀಸನ್ ಡಿಸೆಂಬರ್ […]
₹145.50 ಶಾಸಕರ ನಿಧಿಯ ಮೊದಲ ಕಂತು ಕೋಟಿ ಬಿಡುಗಡೆ
ಬೆಂಗಳೂರು: ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ 2023-24ನೇ ಸಾಲಿನ ಆಯವ್ಯಯದಲ್ಲಿ ಒದಗಿಸಿರುವ ಅನುದಾನದಡಿ ಮೊದಲನೇ ಕಂತಿನ ಅನುದಾನವನ್ನು ಸರ್ಕಾರ ಇಂದು (ಗುರುವಾರ) ಬಿಡುಗಡೆಗೊಳಿಸಿ ಆದೇಶ ಹೊರಡಿಸಿದೆ. ಪ್ರದೇಶಾಭಿವೃದ್ಧಿ ಯೋಜನೆಯಡಿ 2023-24ನೇ ಸಾಲಿನ ಆಯವ್ಯಯ ಅಂದಾಜಿನಲ್ಲಿ ಮೊದಲನೆಯ ಕಂತಿನ ಅನುದಾನವನ್ನು (224 ವಿಧಾನಸಭಾ ಕ್ಷೇತ್ರಗಳು ಹಾಗೂ 67 ವಿಧಾನ ಪರಿಷತ್ ಸದಸ್ಯರಿಗೆ) ಪ್ರತಿ ಕ್ಷೇತ್ರಕ್ಕೆ ತಲಾ ರೂ.50 ಲಕ್ಷಗಳಂತೆ ಒಟ್ಟು 145.50 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ 2023-24ನೇ ಸಾಲಿನ ಆಯವ್ಯಯ […]
ಬಿಜೆಪಿ ಅಭ್ಯರ್ಥಿಗಳ ಮಧ್ಯಪ್ರದೇಶ, ಛತ್ತೀಸ್‌ಗಢ ವಿಧಾನಸಭೆ ಚುನಾವಣೆಗೆ ಮೊದಲ ಪಟ್ಟಿ ಬಿಡುಗಡೆ
ನವದೆಹಲಿ: ಛತ್ತೀಸ್‌ಗಢದ 21 ಅಭ್ಯರ್ಥಿಗಳ ಪಟ್ಟಿ ಹಾಗೂ ಮಧ್ಯಪ್ರದೇಶದ 39 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. ಮೊದಲ ಹಂತದಲ್ಲೇ ಉಭಯ ರಾಜ್ಯಗಳಲ್ಲೂ ತಲಾ ಐವರು ಮಹಿಳೆಯರಿಗೆ ಟಿಕೆಟ್ ನೀಡಲಾಗಿದೆ. ಮಧ್ಯಪ್ರದೇಶ ಹಾಗೂ ಛತ್ತೀಸ್‌ಗಢ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಗೂ ಮುನ್ನವೇ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು (ಗುರುವಾರ) ಬಿಡುಗಡೆ ಮಾಡಿದೆ.ಮಧ್ಯಪ್ರದೇಶ ಹಾಗೂ ಛತ್ತೀಸ್‌ಗಢದ ಮುಂಬರುವ ವಿಧಾನಸಭೆ ಚುನಾವಣೆಗೆ ಕ್ರಮವಾಗಿ 39 ಹಾಗೂ 21 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ […]
‘ಏಷ್ಯಾದ ಅತ್ಯುತ್ತಮ ಉದ್ಯೋಗದಾತ’ KSRTCಗೆ ಬ್ರ್ಯಾಂಡ್ ಪ್ರಶಸ್ತಿ
ಬೆಂಗಳೂರು:ಈ ಬಾರಿ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ ಪ್ರಶಸ್ತಿ ಲಭಿಸಿದ್ದು, ಕೆಎಸ್‌ಆರ್‌ಟಿಸಿ ಮುಕುಟಕ್ಕೆ ಜಾಗತಿಕ ಮನ್ನಣೆ ಸಿಕ್ಕಂತಾಗಿದೆ. ದೇಶದ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಅತ್ಯುತ್ತಮ ಸಂಚಾರ ಸೇವೆ ಒದಗಿಸುತ್ತಿರುವ ಸಂಸ್ಥೆಗಳಲ್ಲಿ ಪ್ರಮುಖ ಸಂಸ್ಥೆಯಾಗಿರುವ ಕೆಎಸ್‌ಆರ್‌ಟಿಸಿಯನ್ನು ಪ್ರತಿ ವರ್ಷವೂ ಒಂದಿಲ್ಲೊಂದು ಪ್ರಶಸ್ತಿಗಳು ಹುಡುಕಿಕೊಂಡು ಬರುತ್ತಿವೆ.ಸಿಂಗಾಪುರದ ವಿಶ್ವ ಸುಸ್ಥಿರ ಕಾಂಗ್ರೆಸ್ ನೀಡುವ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ ಪ್ರಶಸ್ತಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (ಕೆಎಸ್‌ಆರ್‌ಟಿಸಿ) ಆಯ್ಕೆಯಾಗಿದೆ. ಸಿಂಗಾಪುರದ ವಿಶ್ವ ಸುಸ್ಥಿರ ಕಾಂಗ್ರೆಸ್ ನೀಡುವ ಏಷ್ಯಾದ ಅತ್ಯುತ್ತಮ ಉದ್ಯೋಗದಾತ […]