ಡಾಲರ್ ಎದುರು ರೂಪಾಯಿ ಕುಸಿತ ನಿಫ್ಟಿ 100 & ಸೆನ್ಸೆಕ್ಸ್ 388 ಅಂಕ ಇಳಿಕೆ
ನವದೆಹಲಿ :ಆಗಸ್ಟ್ನಲ್ಲಿ ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಭಾರತೀಯ ಶೇರು ಮಾರುಕಟ್ಟೆಯಿಂದ 10 ಸಾವಿರ ಕೋಟಿ ರೂಪಾಯಿಗೂ ಅಧಿಕ ಹೂಡಿಕೆಯನ್ನು ಹಿಂಪಡೆದಿರುವುದು ಕೂಡ ರೂಪಾಯಿ ಮೌಲ್ಯದ ಮೇಲೆ ಪರಿಣಾಮ ಬೀರಿದೆ ಎಂದು ಮೋತಿಲಾಲ್ ಓಸ್ವಾಲ್ ಫೈನಾನ್ಷಿಯಲ್ ಸರ್ವೀಸಸ್ನ ರಿಟೇಲ್ ರಿಸರ್ಚ್ ವಿಭಾಗದ ಮುಖ್ಯಸ್ಥ ಸಿದ್ಧಾರ್ಥ ಖೇಮ್ಕಾ ಹೇಳಿದ್ದಾರೆ. ಪ್ರಸ್ತುತ ಭಾರತೀಯ ಶೇರು ಮಾರುಕಟ್ಟೆಗಳಲ್ಲಿ ವ್ಯಾಪಿಸಿರುವ ನಕಾರಾತ್ಮಕ ಭಾವನೆಗಳ ಹಿನ್ನೆಲೆಯಲ್ಲಿ ಡಾಲರ್ ಎದುರು ಭಾರತೀಯ ರೂಪಾಯಿ 10 ತಿಂಗಳ ಕನಿಷ್ಠವಾದ 83.14ಕ್ಕೆ ಕುಸಿದಿದೆ. ಗುರುವಾರದ ವಹಿವಾಟಿನಲ್ಲಿ ಭಾರತದ ಶೇರು ಮಾರುಕಟ್ಟೆ […]
341 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಬ್ಯಾಂಕ್
ದೇಶದ ಪ್ರತಿಷ್ಠಿತ ಖಾಸಗಿ ಬ್ಯಾಂಕ್ಗಳಲ್ಲೊಂದಾದ ಕರ್ನಾಟಕ ಬ್ಯಾಂಕ್ನ ದೇಶದ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿಗೆ ಅರ್ಜಿ ಕರೆಯಲಾಗಿದೆ.ಪ್ರತಿಷ್ಠಿತ ಕರ್ನಾಟಕಬ್ಯಾಂಕ್ ವಿವಿಧ ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಿದೆ. ಆಗಸ್ಟ್ 26 ಅರ್ಜಿ ಸಲ್ಲಿಕೆಗೆ ಕೊನೆಯ ದಿನ. ಒಟ್ಟು 341 ಹುದ್ದೆಗಳು ಖಾಲಿ ಇದ್ದು, ಆಗಸ್ಟ್ 12ರಿಂದ ಅರ್ಜಿ ಸ್ವೀಕಾರ ಪ್ರಾರಂಭವಾಗಿದೆ. ಆ.26 ರವರೆಗೆ ಆನ್‌ಲೈನ್ ಮೂಲಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ಮ್ಯಾನೇಜರ್, ಪ್ರೊಬೇಷನರಿ ಆಫೀಸರ್, ಸ್ಪೆಷಲಿಸ್ಟ್ ಆಫೀಸರ್, ಕ್ಲರ್ಕ್, ಆಫೀಸ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಅಹ್ವಾನ ವಿದ್ಯಾರ್ಹತೆ: ಮಾನ್ಯತೆ […]
ಗಡಿಜಿಲ್ಲೆ ಚಾಮರಾಜನಗರದಲ್ಲಿ ಬಾಗಿಲು ಮುಚ್ಚುವ ಹಂತ ತಲುಪಿದ 13 ಸರ್ಕಾರಿ ಶಾಲೆಗಳು
ಚಾಮರಾಜನಗರ: 2023-24ನೇ ಶೈಕ್ಷಣಿಕ ಸಾಲಿನಲ್ಲಿ ಮೂಲಸೌಕರ್ಯ ಕೊರತೆ, ಶಿಕ್ಷಕರ ಕೊರತೆ, ಶಿಥಿಲ ಶಾಲಾ ಕಟ್ಟಡಗಳಿಂದ ಆತಂಕಗೊಂಡು ಮಕ್ಕಳ ಶೂನ್ಯ ದಾಖಲಾತಿಯಿಂದಾಗಿ ಜಿಲ್ಲೆಯಲ್ಲಿ ಒಟ್ಟು 13 ಸರ್ಕಾರಿ ಶಾಲೆಗಳಿಗೆ ಬೀಗ ಹಾಕಲಾಗಿದೆ.ಮೂಲಸೌಕರ್ಯದ ಕೊರತೆಯಿಂದಾಗಿ ಗಡಿಜಿಲ್ಲೆ ಚಾಮರಾಜನಗರದಲ್ಲಿ ಹಲವು ಸರ್ಕಾರಿ ಶಾಲೆಗಳು ಬಾಗಿಲು ಮುಚ್ಚುವ ಹಂತ ತಲುಪಿವೆ. ಈ ಪೈಕಿ ಒಂದು ಉರ್ದು ಮಾಧ್ಯಮದ ಶಾಲೆಯೂ ಸೇರಿದೆ.ಅಗತ್ಯ ಮೂಲಸೌಕರ್ಯ, ಶಿಕ್ಷಕರ ಕೊರತೆ, ಶಿಥಿಲ ಶಾಲಾ ಕಟ್ಟಡಗಳೇ ಚಾಮರಾಜನಗರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ ಉಂಟಾಗಲು ಕಾರಣವಾಗಿವೆ. ಕೋವಿಡ್ ವೇಳೆ […]
ತೋನ್ಸೆ ಗ್ರಾಮ ಪಂಚಾಯತ್‌ನ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕುಸುಮ ರವೀಂದ್ರ ಹಾಗೂ ಅರುಣ್ ಫೆರ್ನಾಂಡಿಸ್ ಆಯ್ಕೆ
ಉಡುಪಿ: ತೋನ್ಸೆ ಗ್ರಾಮ ಪಂಚಾಯತ್‌ನ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕಾಗಿ ಆ.17ರಂದು ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಶ್ರೀಮತಿ ಕುಸುಮ ರವೀಂದ್ರ ಗುಜ್ಜರುಬೆಟ್ಟು ಹಾಗೂ ಉಪಾಧ್ಯಕ್ಷರಾಗಿ ಅರುಣ್ ಫೆರ್ನಾಂಡಿಸ್ ಕಂಬಳತೋಟ ಅವರು ಅವಿರೋಧವಾಗಿ ಆಯ್ಕೆಯಾದರು. ಈ ಸಂದರ್ಭದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್, ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಪಡುತೋನ್ಸೆ ಗ್ರಾಮೀಣ ಕಾಂಗ್ರೆಸ್‌ನ ಅಧ್ಯಕ್ಷ ರಘುರಾಮ್ ಶೆಟ್ಟಿ, ಕೆಪಿಸಿಸಿ ಪ್ಯಾನೇಲಿಷ್ಟ್ ವೆರೋನಿಕಾ ಕರ್ನೇಲಿಯೋ, ಉಡುಪಿ ಬ್ಲಾಕ್ ಕಾಂಗ್ರೆಸ್ ಎಸ್ […]
ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಕಾರ್ಯವೈಖರಿ ಮೆಚ್ಚಿ ಪೆರ್ಡೂರು ಗ್ರಾ.ಪಂ. ಕಾಂಗ್ರೆಸ್ ಬೆಂಬಲಿತ ಉಪಾಧ್ಯಕ್ಷೆ ಚೇತನಾ ಶೆಟ್ಟಿ ಬಿಜೆಪಿ ಸೇರ್ಪಡೆ
ಉಡುಪಿ: ಭಾರತೀಯ ಜನತಾ ಪಕ್ಷ ನೇತೃತ್ವದ ಕೇಂದ್ರ ಸರ್ಕಾರದ ಜನಪರ ಕಾಳಜಿಯ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಕಾರ್ಯ ವೈಖರಿ, ಜನಪರ ಕಾಳಜಿಯನ್ನು ಮೆಚ್ಚಿ ಪೆರ್ಡೂರು ಗ್ರಾಮ ಪಂಚಾಯತ್ ಕಾಂಗ್ರೆಸ್ ಬೆಂಬಲಿತ ಉಪಾಧ್ಯಕ್ಷೆ ಚೇತನಾ ಶೆಟ್ಟಿ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡಸುಂದರ್ ಶೆಟ್ಟಿ ಆ 17ರಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಜಿಲ್ಲಾ ಬಿಜೆಪಿ […]