ಮಲ್ಪೆಯಲ್ಲಿ ಬೋಟ್ ನಿಂದ ಬಿದ್ದು ಮೀನುಗಾರ ನಾಪತ್ತೆ
ಉಡುಪಿ: ಮಲ್ಪೆ ಬೋಟ್ ನಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದು ಮೀನುಗಾರನೋರ್ವರು ನಾಪತ್ತೆಯಾದ ಘಟನೆ ಮಲ್ಪೆಯಲ್ಲಿ ನಡೆದಿದೆ. 35ವರ್ಷದ ಗೋಪಾಲ ಶನಿಯಾರ್ ನಾಯ್ಕ (35) ನಾಪತ್ತೆಯಾದ ಮೀನುಗಾರ. ಇವರು ಇತರ ಮೀನುಗಾರರೊಂದಿಗೆ ಮಲ್ಪೆ ಬಂದರಿನಿಂದ ಬೋಟಿನಲ್ಲಿ ಮೀನುಗಾರಿಕೆಗೆ ತೆರಳಿದ್ದು, ಮೀನುಗಾರಿಕೆ ನಡೆಸುತ್ತಿರುವಾಗ ಆಕಸ್ಮಿಕವಾಗಿ ಬೋಟಿನಿಂದ ಕಾಲು ಜಾರಿ ನೀರಿಗೆ ಬಿದ್ದು ನಾಪತ್ತೆಯಾಗಿದ್ದಾರೆ. ಬೋಟಿನಲ್ಲಿದ್ದವರು ಹುಡುಕಾಟ ನಡೆಸಿದರೂ ಅವರು ಪತ್ತೆಯಾಗಲಿಲ್ಲ. ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಾರುಗಳ ಮಧ್ಯೆ ಅಪಘಾತ: ನಾಲ್ವರಿಗೆ ಗಂಭೀರ ಗಾಯ
ಉಡುಪಿ: ಓವರ್ ಟೇಕ್ ಮಾಡುವ ಭರದಲ್ಲಿ ಅಪಘಾತ ಸಂಭವಿಸಿ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೆಬ್ರಿ ತಾಲೂಕಿನ ನಾಡ್ಪಾಲು ಜಕ್ಕನಮಕ್ಕಿ ಎಂಬಲ್ಲಿ ನಡೆದಿದೆ. ಬೈಕನ್ನು ಕಾರೊಂದು ಓವರ್ ಟೇಕ್ ಮಾಡುವಾಗ ಮುಂದಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ನಾಲ್ಕು ಮಂದಿ ಗಾಯಗೊಂಡಿದ್ದಾರೆ. ಅಪಘಾತದ ರಭಸಕ್ಕೆ ಕಾರುಗಳು ಹಾಗೂ ಬೈಕ್ ನುಜ್ಜುಗುಜ್ಜಾಗಿವೆ. ಸ್ಥಳಕ್ಕೆ ಹೆಬ್ರಿ ಪಿಎಸ್ಐ ಮಹೇಶ್ ಟಿಎಂ ಭೇಟಿ ನೀಡಿದ್ದು ಪ್ರಕರಣ ದಾಖಲಾಗಿದೆ. ಅಪಘಾತದಿಂದ ಉಡುಪಿ ಹೆಬ್ರಿ ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು […]
ಸರಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗೆ ಶಿಕ್ಷೆ
ಉಡುಪಿ: ಸರ್ಕಾರಿ ನೌಕರರಿಗೆ ಕರ್ತವ್ಯ ನಿರ್ವಹಿಸಲು ಅಡ್ಡಿಪಡಿಸಿದ ಆರೋಪಿಗೆ ನಗರದ ಪ್ರಧಾನ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. ಉಡುಪಿ ತಾಲೂಕು ಬೆಳ್ಳಂಪಳ್ಳಿ ಗ್ರಾಮದ ಕಂಬ್ಲ ಮಜಲು ಪುಣ್ವೂರು ಎಂಬಲ್ಲಿ ಮಹಿಳೆಗೆ ಕೊರೋನಾ ಪಾಸಿಟಿವ್ ಬಂದ ಕಾರಣ ಆಕೆಯ ಪ್ರಾಥಮಿಕ ಸಂಪರ್ಕದಲ್ಲಿದ್ದ ಗಂಡ ಸುರೇಂದ್ರ ಎಂಬಾತನ ಗಂಟಲು ದ್ರವ ಪರೀಕ್ಷೆ ನಡೆಸಲು ಮನೆಗೆ ಬಂದ ಸರ್ಕಾರಿ ನೌಕರರಿಗೆ ಕರ್ತವ್ಯ ನಿರ್ವಹಿಸಲು ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಅವಮಾನ ಮಾಡಿ, ಜೀವ ಬೆದರಿಕೆ […]
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ಕ್ಷೇತ್ರ ಮಟ್ಟದ ಆರ್ಥಿಕ ಸಾಕ್ಷರತೆ ಕಾರ್ಯಕ್ರಮ
ಉಡುಪಿ: ಸಮಾಜದ ಪ್ರತಿಯೊಬ್ಬರು ಹಣಕಾಸಿನ ವ್ಯವಹಾರದ ಬಗ್ಗೆ ಅಥವಾ ಹಣ ಬಳಕೆಯ ವಿಧಗಳ ಬಗ್ಗೆ ಸ್ವತ: ತಿಳುವಳಿಕೆ ಹೊಂದುವುದು ಅತಿ ಅಗತ್ಯ ಎಂದು ಭಾರತೀಯ ರಿಸರ್ವ್ ಬ್ಯಾಂಕಿನ ಬೆಂಗಳೂರು ಪ್ರಾದೇಶಿಕ ಮುಖ್ಯ ಮಹಾ ಪ್ರಬಂಧಕ ಪಿ.ಎನ್. ರಘನಾಥ ಅಭಿಪ್ರಾಯ ಪಟ್ಟರು. ಅವರು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(RBI), ಹಣಕಾಸು ಸೇರ್ಪಡೆ ಮತ್ತು ಅಭಿವೃದ್ಧಿ ಇಲಾಖೆ, ಬೆಂಗಳೂರು, ಲೀಡ್ ಡಿಸ್ಟ್ರಿಕ್ಟ್ ಆಫೀಸ್, ಕೆನರಾ ಬ್ಯಾಂಕ್, ಉಡುಪಿ ಇದರ ಜಂಟಿಯಾಗಿ ಆಯೋಜಿಸಿದ ಕ್ಷೇತ್ರ ಮಟ್ಟದ ಆರ್ಥಿಕ ಸಾಕ್ಷರತೆ ಕಾರ್ಯಕ್ರಮದಲ್ಲಿ ಮಾತನಾಡಿದರು. […]
ದೊಡ್ಡಣ್ಣಗುಡ್ಡೆ: ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದ ನಾಗಾಲಯದಲ್ಲಿ ನಾಗರಪಂಚಮಿ ಆಚರಣೆ
ದೊಡ್ಡಣ್ಣಗುಡ್ಡೆ: ಶ್ರೀಚಕ್ರ ಪೀಠ ಸರಪೋಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದ ನಾಗಾಲಯದಲ್ಲಿ ಆ. 21ರ ಸೋಮವಾರ ನಾಗರಪಂಚಮಿ ಆಚರಣೆ ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ಅರ್ಚಕ ಅನಿಶ್ ಆಚಾರ್ಯರ ನೇತೃತ್ವದಲ್ಲಿ ನೆರವೇರಲಿರುವುದು. ಆ ಪ್ರಯುಕ್ತ ನಾಗರಾಜ ನಾಗರಾಣಿಯ ಸನ್ನಿಧಾನದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಾಮೂಹಿಕ ವಿಶೇಷ ತನು ತಂಬಿಲ ಸೇವೆ, ಪಂಚಾಮೃತ ಅಭಿಷೇಕ, ಪ್ರಸನ್ನ ಪೂಜೆ, ಮಹಾಪ್ರಸಾದ ವಿತರಣೆ ನೆರವೇರಲಿರುವುದು ಎಂದು ಕ್ಷೇತ್ರ ಉಸ್ತುವಾರಿ ಶ್ರೀಮತಿ ಕುಸುಮ ನಾಗರಾಜ್ ತಿಳಿಸಿದ್ದಾರೆ.