ಆಗಸ್ಟ್ 23, ಸಂಜೆ 6.04 ನಿಮಿಷಕ್ಕೆ ಚಂದ್ರನ ಮೇಲೆ ಇಳಿಯುವ ‘ವಿಕ್ರಮ್’
ನವದೆಹಲಿ : ಇನ್ನು ಮೂರೇ ದಿನಗಳಲ್ಲಿ ಭಾರತ ಐತಿಹಾಸಿಕ ದಾಖಲೆ ನಿರ್ಮಾಣಕ್ಕೆ ಸಜ್ಜಾಗಿದೆ.ಭಾರತ ಸೇರಿದಂತೆ ವಿಶ್ವವೇ ತುದಿಗಾಲ ಮೇಲೆ ನಿಂತು ಕಾಯುತ್ತಿರುವ ಚಂದ್ರಯಾನ-3 ನೌಕೆಯ ಲ್ಯಾಂಡಿಂಗ್ನ ದಿನ ಮತ್ತು ಸಮಯವನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಅಧಿಕೃತವಾಗಿ ಪ್ರಕಟಿಸಿದೆ.ಚಂದ್ರಯಾನ-3 ನೌಕೆಯನ್ನು ಚಂದಮಾಮನ ದಕ್ಷಿಣ ಧ್ರುವದ ಮೇಲೆ ಇಳಿಸುವ ದಿನಾಂಕ, ಮುಹೂರ್ತವನ್ನು ಇಸ್ರೋ ಅಧಿಕೃತವಾಗಿ ಘೋಷಿಸಿದೆ. ಐತಿಹಾಸಿಕ ಕ್ಷಣಗಳ ನೇರಪ್ರಸಾರ ಕೂಡ ಇರಲಿದೆ ಎಂದಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ನಿಗದಿಪಡಿಸಲಾದ ಜಾಗದಲ್ಲಿ ಚಂದ್ರಯಾನ-3 ನೌಕೆಯ ಲ್ಯಾಂಡರ್ ಆಗಸ್ಟ್ 23 […]
ಉತ್ತರಾಖಂಡದಲ್ಲಿ ಭೀಕರ ಅಪಘಾತ : ಕಂದಕಕ್ಕೆ ಉರುಳಿ ಬಿದ್ದ ಯತ್ರಾರ್ಥಿಗಳ ಬಸ್
ಉತ್ತರಕಾಶಿ(ಉತ್ತರಾಖಂಡ): ಇಲ್ಲಿನ ಗಂಗೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಸಂಜೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಗುಜರಾತ್ನಿಂದ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಗಂಗೋತ್ರಿ ಹೆದ್ದಾರಿಯ ಗಂಗ್ನಾನಿ ಎಂಬಲ್ಲಿ ಆಳವಾದ ಕಮರಿಗೆ ಬಿದ್ದಿದೆ. ಬಸ್ ಗಂಗೋತ್ರಿಧಾಮದಿಂದ ಉತ್ತರಕಾಶಿ ಕಡೆಗೆ ಹೋಗುತ್ತಿತ್ತು. ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿ, 22 ಮಂದಿ ಗಾಯಗೊಂಡಿದ್ದಾರೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಇಲಾಖೆ ಖಚಿತಪಡಿಸಿದೆ. ಗಾಯಾಳುಗಳನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕಳುಹಿಸಲಾಗುತ್ತಿದೆ. ಭಾನುವಾರ ಸಂಜೆ 4:15 ರ ಸುಮಾರಿಗೆ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.ಉತ್ತರಾಖಂಡದಲ್ಲಿ ಖಾಸಗಿ […]
ಕಾಂಗ್ರೆಸ್ ಹಿರಿಯ ನಾಯಕ ಕಾಗೋಡು ತಿಮ್ಮಪ್ಪಗೆ ಅರಸು ಪ್ರಶಸ್ತಿ ಪ್ರದಾನ ಮಾಡಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ದೇವರಾಜ ಅರಸು ಅವರ ಕಾರ್ಯಕ್ರಮಗಳ ಅನುಕೂಲ ಪಡೆದ ಫಲಾನುಭವಿಗಳು ಮತ್ತು ಅವರ ಮಕ್ಕಳು ಶಾಶ್ವತವಾಗಿ ಸಾಮಾಜಿಕ ನ್ಯಾಯದ ಪರವಾಗಿ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಯುವ ಸಮೂಹಕ್ಕೆ ಕರೆ ನೀಡಿದ್ದಾರೆ.ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಹಮ್ಮಿಕೊಂಡಿದ್ದ ದೇವರಾಜು ಅರಸು ಅವರ 108 ನೇ ಜನ್ಮ ದಿನಾಚರಣೆ ಹಾಗೂ ಡಿ. ದೇವರಾಜ ಅರಸು ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಅವರಿಗೆ ಅರಸು ಪ್ರಶಸ್ತಿ […]
ಐಶ್ವರ್ಯಾ ರೈ, ಪ್ರಿಯಾಂಕಾ ಚೋಪ್ರಾ ಜೊತೆ ಹೋಲಿಕೆ ಹಿನ್ನೆಲೆ ಪ್ರತಿಕ್ರಿಯಿಸಿದ ಸುಶ್ಮಿತಾ ಸೇನ್
ಸುಶ್ಮಿತಾರ ಸಾಧನೆಗಳನ್ನು ಮಾಜಿ ವಿಶ್ವ ಸುಂದರಿಯರಾದ ಐಶ್ವರ್ಯಾ ರೈ ಬಚ್ಚನ್, ಪ್ರಿಯಾಂಕಾ ಚೋಪ್ರಾ ಅವರ ಸಾಧನೆಗಳಿಗೆ ಹೋಲಿಸುವ ಪತ್ರಕರ್ತರ ಪ್ರಯತ್ನಕ್ಕೆ ಪ್ರತಿಕ್ರಿಯಿಸುತ್ತಿರುವ ವಿಡಿಯೋವದು.ಸುಶ್ಮಿತಾ ಸೇನ್ ಮುಖ್ಯಭೂಮಿಕೆಯ ಮುಂದಿನ ವೆಬ್ ಸೀರಿಸ್ ತಾಲಿ ಪ್ರಮೋಶನ್ ವೇಳೆ ಹಳೇ ಘಟನೆಯನ್ನು ಮೆಲುಕು ಹಾಕಿ, ತಮ್ಮ ದೃಷ್ಟಿಕೋನಗಳನ್ನು ಹಂಚಿಕೊಂಡರು. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಹಳೇ ವಿಡಿಯೋ ಬಗ್ಗೆ ಮಾತನಾಡಿದ ನಟಿ, ಪತ್ರಕರ್ತರ ಪ್ರಶ್ನೆಗೆ ದಿಗ್ಭ್ರಮೆಗೊಂಡೆ. ಆದರೆ ಆ ವೇಳೆ ಪ್ರಾಮಾಣಿಕವಾಗಿ ಪ್ರತಿಕ್ರಿಯಿಸಲು ಪ್ರಯತ್ನಿಸಿದೆ. ಆ ಪ್ರಶ್ನೆ ಅಗೌರವಯುತವಾಗಿತ್ತು. ಅಂತಹ ಪ್ರಶ್ನೆಗಳು […]
ಅಡೋಬ್ ಸಹ-ಸಂಸ್ಥಾಪಕ ಜಾನ್ ವಾರ್ನಾಕ್ ವಿಧಿವಶ
ಸ್ಯಾನ್ ಫ್ರಾನ್ಸಿಸ್ಕೋ : ಚಾರ್ಲ್ಸ್ ಗೆಶ್ಕೆ ಅವರೊಂದಿಗೆ ಸೇರಿಕೊಂಡು ವಾರ್ನಾಕ್ 1982 ರಲ್ಲಿ ಅಡೋಬ್ ಅನ್ನು ಸಹ-ಸ್ಥಾಪಿಸಿದರು. ಇವರಿಬ್ಬರೂ ಅದಕ್ಕೂ ಮುನ್ನ ಜೆರಾಕ್ಸ್ ಕಂಪನಿಯಲ್ಲಿ ಒಟ್ಟಿಗೆ ಕೆಲಸ ಮಾಡಿದ್ದರು. ಇವರು ಮೊದಲಿಗೆ ತಯಾರಿಸಿದ ಅಡೋಬ್ ಸ್ಕ್ರಿಪ್ಟ್ ಎಂಬ ಸಾಫ್ಟವೇರ್ ಡೆಸ್ಕ್ ಟಾಪ್ ಪಬ್ಲಿಶಿಂಗ್ನ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ ಅದ್ಭುತ ತಂತ್ರಜ್ಞಾನವಾಗಿತ್ತು. ವಾರ್ನಾಕ್ 2000 ರವರೆಗೆ ಈ ಕಂಪನಿಯ ಸಿಇಒ ಆಗಿ ಸೇವೆ ಸಲ್ಲಿಸಿದರು ಮತ್ತು ಮಂಡಳಿಯ ಅಧ್ಯಕ್ಷರಾಗಿ ಮುಂದುವರೆದರು. ಸಾಫ್ಟ್ ವೇರ್ ವಲಯದ ದಿಗ್ಗಜ ಕಂಪನಿ […]