2ನೇ ಟಿ20 ಟಾಸ್​ ಗೆದ್ದ ಭಾರತ ಐರ್ಲೆಂಡ್​ ವಿರುದ್ಧ ಬ್ಯಾಟಿಂಗ್​ ಆಯ್ಕೆ

ಡಬ್ಲಿನ್​(ಐರ್ಲೆಂಡ್​) : ಐರ್ಲೆಂಡ್​ ವಿರುದ್ಧ ಡಬ್ಲಿನ್​ನಲ್ಲಿ ನಡೆಯುತ್ತಿರುವ 2ನೇ ಟಿ20 ಪಂದ್ಯದಲ್ಲಿ ಭಾರತ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡಿದೆ.ವೇಗಿ ಜಸ್ಪ್ರೀತ್​ ಬೂಮ್ರಾ ನೇತೃತ್ವದ ತಂಡ ಈ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿ ಕೈವಶಕ್ಕೆ ತಂತ್ರ ರೂಪಿಸಿದ್ದರೆ, ಇತ್ತ ಆತಿಥೇಯ ಐರ್ಲೆಂಡ್​ ಕೂಡ ಬಲಿಷ್ಠ ಭಾರತವನ್ನು ಸೋಲಿಸಿ ಸರಣಿ ಸಮಬಲ ಸಾಧಿಸಲು ಸಜ್ಜಾಗಿದೆ. ಮೊದಲ ಪಂದ್ಯದಲ್ಲಿ ನಾಯಕ ಪಾಲ್​ ಸ್ಟಿರ್ಲಿಂಗ್​ ಬ್ಯಾಟಿಂಗ್​ನಲ್ಲಿ ವಿಫಲವಾಗಿದ್ದರು. ಆರಂಭದಲ್ಲೇ ನಾಲ್ಕು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ತಂಡಕ್ಕೆ ಕರ್ಟಿಸ್ ಕ್ಯಾಂಫರ್ ಮತ್ತು ಬ್ಯಾರಿ ಮೆಕಾರ್ಟಿ […]

ಆ.22-23: ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಆಗಸ್ಟ್ 22 ಮತ್ತು 23 ರಂದು ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. 220/110/11 ಕೆ.ವಿ ಕೇಮಾರ್ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಫೀಡರ್‌ಗಳಾದ ನಿಟ್ಟೆ, ಕಲ್ಯಾ, ಲೆಮಿನಾ, ನಿಟ್ಟೆ ವಾಟರ್ ಸಪ್ಲೈ 110/11 ಕೆ.ವಿ ಕಾರ್ಕಳ ಉಪಕೇಂದ್ರದಿಂದ ಹೊರಡುವ 11ಕೆ.ವಿ ಪದವು ಫೀಡರ್ ಹಾಗೂ 110/11 ಕೆ.ವಿ ಬೆಳ್ಮಣ್ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಫೀಡರ್‌ಗಳಾದ […]

ಆಗಸ್ಟ್ 22, 23: ಉಡುಪಿ ನಗರಸಭಾ ವ್ಯಾಪ್ತಿಯ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ 35 ವಾರ್ಡುಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಬಜೆ ರೇಚಕ ಸ್ಥಾವರದ ಹೆಚ್.ಟಿ ಪಾನೆಲ್ ಮತ್ತು ಎಲ್.ಟಿ ಪಾನೆಲ್‌ನ ಪರಿವರ್ತಕಗಳಿಗೆ ಯು.ಜಿ ಕೇಬಲ್, ಅರ್ಥ್ಲಿಂಗ್ ಮಾಡುವ ಕಾಮಗಾರಿಯನ್ನು ಕೈಗೊಳ್ಳುವುದರಿಂದ ಆಗಸ್ಟ್ 22 ಮತ್ತು 23 ರಂದು ಉಡುಪಿ ನಗರಸಭಾ ವ್ಯಾಪ್ತಿಯ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ಉಡುಪಿ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಿ.ದೇವರಾಜು ಅರಸು ಅವರಿಂದ ಹಿಂದುಳಿದ ವರ್ಗಗಳಿಗೆ ಶಕ್ತಿ: ಶೋಭಾ ಕರಂದ್ಲಾಜೆ

ಉಡುಪಿ: ರಾಜ್ಯದ ಹಿಂದುಳಿದ ವರ್ಗಗಳ ಸಮಸ್ಯೆಗಳನ್ನು ಅರಿತಿದ್ದ ದಿ.ಶ್ರೀ. ಡಿ ದೇವರಾಜ ಅರಸು ಅವರು, ಅವರ ಸಮಸ್ಯೆಗಳಿಗೆ ದನಿಯಾಗಿ, ವಿವಿಧ ಕಾರ್ಯಕ್ರಮಗಳ ಮೂಲಕ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಶಕ್ತಿ ತುಂಬಿದ ಮಹಾನ್ ವ್ಯಕ್ತಿ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ, ರಜತಾದ್ರಿಯ ಅಟಲ್ ಬಿಹಾರಿ […]

ನಗರ ಕೇಂದ್ರ ಗ್ರಂಥಾಲಯದಲ್ಲಿ ವಿದ್ಯಾರ್ಥಿಗಳಿಗಾಗಿ ಡಿಜಿಟಲ್ ಗ್ರಂಥಾಲಯ ಮಾಹಿತಿ ಕಾರ್ಯಾಗಾರ

ಉಡುಪಿ: ಅಜ್ಜರಕಾಡಿನ ವಿದ್ಯಾ ವಾಚಸ್ಪತಿ ಡಾ. ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ನಗರ ಕೇಂದ್ರ ಗ್ರಂಥಾಲಯದಲ್ಲಿ ಆ 19 ರಂದು ಡಿಜಿಟಲ್ ಗ್ರಂಥಾಲಯ ಮಾಹಿತಿ ಕಾರ್ಯಾಗಾರವನ್ನು ಉಡುಪಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾಗಿತ್ತು. ಉಡುಪಿ ನಗರಸಭೆ ಮತ್ತು ನಗರ ಗ್ರಂಥಾಲಯ ಪ್ರಾಧಿಕಾರದ ಸದಸ್ಯೆ ರಶ್ಮಿ ಚಿತ್ತರಂಜನ್ ಭಟ್, ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಗ್ರಂಥಾಲಯದ ಆವರಣದಲ್ಲಿ ಮಲಬಾರ್ ಗೋಲ್ಡ್ ವತಿಯಿಂದ ಉಚಿತವಾಗಿ ನೀಡಿದ ಸಸಿಗಳನ್ನು ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿ […]