ಉಡುಪಿ ತುಳುನಾಡ ಟೈಗರ್ಸ್ ನಿಂದ ಮೂರನೇ ವರ್ಷದ ಹುಲಿ ಕುಣಿತ
ಉಡುಪಿ: ಶ್ರೀ ಕೃಷ್ಣಜನ್ಮಾಷ್ಟಮಿಯ ಪ್ರಯುಕ್ತ ತುಳುನಾಡ ಟೈಗರ್ಸ್ ಉಡುಪಿ ಇದರ ಆಶ್ರಯದಲ್ಲಿ ರಾಜೇಶ್ ಸುವರ್ಣ ನೇತೃತ್ವದಲ್ಲಿ ಸೆಪ್ಟೆಂಬರ್ 6 ಮತ್ತು 7ರಂದು ಮೂರನೇ ವರ್ಷದ ಹುಲಿ ಕುಣಿತ ನಡೆಯಲಿದೆ.
ಪ್ರೊಬೆಷನರಿ ಸೇರಿದಂತೆ 500 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ : ಐಬಿಪಿಎಸ್
ಕೆನರಾ ಬ್ಯಾಂಕ್, ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಆಫ್ ಮಹಾರಾಷ್ಟ್ರ, ಬ್ಯಾಂಕ್ ಆಫ್ ಬರೋಡಾ, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಇಂಡಿಯನ್ ಬ್ಯಾಂಕ್ ಸೇರಿದಂತೆ ವಿವಿಧ ಬ್ಯಾಂಕ್ಗಳಲ್ಲಿ ಖಾಲಿ ಇರುವ ಕ್ಲರ್ಕ್ ಹುದ್ದೆ ನೇಮಕಾತಿಗೆ ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS) ಒಟ್ಟು 4451 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.ಅದರಲ್ಲಿ ಕೆನರಾ ಬ್ಯಾಂಕ್ನಲ್ಲಿ ಒಟ್ಟು 500 ಹುದ್ದೆಗಳನ್ನು ಮೀಸಲಿರಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕವನ್ನು ಇದೀಗ ವಿಸ್ತರಣೆ ಮಾಡಿ ಹೊಸ […]
ಬಹುನಿರೀಕ್ಷಿತ ‘ಕಾಂತಾರ’ ಪ್ರೀಕ್ವೆಲ್ ಬಿಡುಗಡೆಗೆ ಹೊಸ ಅಪ್ಡೇಟ್
ಕನ್ನಡ ಚಿತ್ರರಂಗವನ್ನು ಇಡೀ ವಿಶ್ವವೇ ತಿರುಗಿ ನೋಡುವಂತೆ ಮಾಡಿದ ಚಿತ್ರ ‘ಕಾಂತಾರ’. ಅದ್ಭುತ ಕಥೆಯೊಂದಿಗೆ ಪ್ರತಿ ಪಾತ್ರವನ್ನೂ ಸುಂದರವಾಗಿ, ಅಚ್ಚುಕಟ್ಟಾಗಿ ಕಟ್ಟಿಕೊಟ್ಟಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾಗಿ ಬ್ಲಾಕ್ಬಸ್ಟರ್ ಹಿಟ್ ಆಗುವುದರೊಂದಿಗೆ, ಪ್ರೇಕ್ಷಕರನ್ನು ಮತ್ತೊಂದು ಮಜಲಿಗೆ ಕೊಂಡೊಯ್ಯುವಲ್ಲಿ ಯಶಸ್ವಿಯಾಗಿದೆ. ಈ ಚಿತ್ರದಿಂದಾಗಿ ಶೆಟ್ರ ಕ್ರೇಜ್ ಕೂಡ ಹೆಚ್ಚಾಗಿದೆ. ಸ್ಟಾರ್ ತಾರೆಯರಿಂದ ಹಿಡಿದು ಸಾಮಾನ್ಯ ಜನರವರೆಗೂ ‘ಕಾಂತಾರ’ ತಲುಪಿದೆ.ನಟ, ನಿರ್ದೇಶಕ ರಿಷಬ್ ಶೆಟ್ಟಿ ಸ್ವಯಂ ನಿರ್ದೇಶಿಸಿ, ನಟಿಸಿ ಸೈ ಎನಿಸಿಕೊಂಡ ಸಿನಿಮಾವಿದು. ರಿಷಬ್ ಶೆಟ್ಟಿ ಸಾರಥ್ಯದ ‘ಕಾಂತಾರ’ ಸಿನಿಮಾದ […]
ಮೆಗಾಸ್ಟಾರ್ ಚಿರಂಜೀವಿ ಜನ್ಮದಿನ ಹಿನ್ನೆಲೆ 157ನೇ ಚಿತ್ರದ ಪೋಸ್ಟರ್ ಬಿಡುಗಡೆ
ಭಾರತೀಯ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿರುವ ಚಿರಂಜೀವಿ 150ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ, ಅಭಿಮಾನಿಗಳ ಮನದಲ್ಲಿ ಶಾಶ್ವತ ಸ್ಥಾನ ಪಡೆದಿದ್ದಾರೆ. ಚಿತ್ರರಂಗ ಅಷ್ಟೇ ಅಲ್ಲ, ರಾಜಕೀಯಕ್ಕೂ ಅದ್ಧೂರಿಯಾಗಿ ಎಂಟ್ರಿ ಕೊಟ್ಟು ಚುನಾವಣಾ ಕಣದಲ್ಲಿ ಸೋಲು – ಗೆಲುವು ಕಂಡು ನಾಯಕನಾಗಿ ಹೊರಹೊಮ್ಮಿದ್ದಾರೆ.ಟಾಲಿವುಡ್ ಖ್ಯಾತ ನಟ, ಮೆಗಾಸ್ಟಾರ್ ಚಿರಂಜೀವಿಗೆ ಇಂದು ಜನ್ಮದಿನದ ಸಂಭ್ರಮ. 68ನೇ ವಸಂತಕ್ಕೆ ಕಾಲಿಟ್ಟ ಸ್ಟಾರ್ಗೆ ನಟರು, ಗಣ್ಯರು ಹಾಗೂ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.ಇಂದು ಮೆಗಾಸ್ಟಾರ್ ಚಿರಂಜೀವಿ ಜನ್ಮದಿನ. ಈ ಹಿನ್ನೆಲೆ ನಟನ 157ನೇ […]
ಪ್ರಧಾನ ಮಂತ್ರಿ ಕಚೇರಿಯಿಂದ ಉನ್ನತ ಮಟ್ಟದ ಸಭೆ: ಹೊಸ ಕೋವಿಡ್ ಉಪತಳಿ ಪತ್ತೆ
ನವದೆಹಲಿ: ಕೋವಿಡ್ 19 ಬಳಿಕ ಅದರ ಉಪತಳಿಗಳು ಪತ್ತೆಯಾಗುತ್ತಲೇ ಇದೆ.ಇದೀಗ ಸಾರ್ಸ್ ಕೋವ್ 2ನ ಹೊಸ ಉಪತಳಿ ಪತ್ತೆಯಾಗಿದೆ. ಪ್ರಧಾನ ಮಂತ್ರಿ ಅವರ ಪ್ರಧಾನ ಕಾರ್ಯದರ್ಶಿಯಾದ ಪಿಕೆ ಮಿಶ್ರಾ, ನೇತೃತ್ವದಲ್ಲಿ ಸಂಬಂಧಿಸಿದ ಅಧಿಕಾರಿಗಳಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ್ದು, ಜಾಗತಿಕ ಮತ್ತು ರಾಷ್ಟ್ರ ಮಟ್ಟದಲ್ಲಿನ ಕೋವಿಡ್ ಪರಿಸ್ಥಿತಿಗಳ ಕುರಿತು ಅವಲೋಕನ ನಡೆಸಲಾಯಿತು. ಇದೇ ವೇಳೆ, ಹೊಸ ಉಪ ತಳಿಯು ಸಾರ್ವಜನಿಕ ಆರೋಗ್ಯದ ಮೇಲೆ ಬೀರುವ ಪರಿಣಾಮ ಕುರಿತು ಚರ್ಚಿಸಲಾಯಿತು.ಬ್ರಿಟನ್, ಯುರೋಪ್ ಸೇರಿದಂತೆ ಹಲವೆಡೆ ಪತ್ತೆಯಾಗಿರುವ ಈ ಹೊಸ […]