ಉಸಿರು ಬಿಗಿಹಿಡಿದುಕೊಂಡು ಕಾಯುತ್ತಿರುವ ಭಾರತ, ಇಂದು ಸಂಜೆ 5.20ಕ್ಕೆ ಇಸ್ರೋದಿಂದ ನೇರಪ್ರಸಾರ: ಚಂದ್ರಯಾನ-3
ನವದೆಹಲಿ: ಇಸ್ರೋ ಚಂದ್ರಯಾನ-3ರ ಸಾಫ್ಟ್ ಲ್ಯಾಂಡಿಂಗ್ ಕಾರ್ಯಾಚರಣೆಯ ನೇರ ಪ್ರಸಾರಕ್ಕೆ ವ್ಯವಸ್ಥೆ ಮಾಡಿದೆ. ಇಂದು (ಬುಧವಾರ) ಸಂಜೆ 5.20ಕ್ಕೆ ನೇರ ಪ್ರಸಾರ ಪ್ರಾರಂಭವಾಗುತ್ತದೆ.ಶಾಲಾ-ಕಾಲೇಜುಗಳಲ್ಲಿ ಐತಿಹಾಸಿಕ ಕ್ಷಣದ ನೇರ ಪ್ರಸಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ವಿಜ್ಞಾನಿಗಳು ಮತ್ತು ಶಿಕ್ಷಕರು ಕಾರ್ಯಾಚರಣೆಯ ಒಳನೋಟಗಳನ್ನು ಪ್ರಸ್ತುತಪಡಿಸಲಿದ್ದಾರೆ. ಜೊತೆಗೆ ಭಾರತದ ಬಾಹ್ಯಾಕಾಶ ಇತಿಹಾಸದಲ್ಲಿ ನಡೆಯಲಿರುವ ಘಟನೆಯ ಮಹತ್ವವನ್ನು ವಿವರಿಸುತ್ತಾರೆ.ಇಂದು ಸಂಜೆ ಚಂದ್ರಯಾನ-3 ಲ್ಯಾಂಡರ್ ‘ಚಂದಮಾಮ’ನ ಸ್ಪರ್ಶಿಸಲಿರುವುದರಿಂದ ಭಾರತವು ಹೆಚ್ಚಿನ ನಿರೀಕ್ಷೆಗಳನ್ನು ಹೊಂದಿದೆ. ಜೀವನದ ಎಲ್ಲಾ ಹಂತಗಳನ್ನು ಮಿಗಿಲಾದ ದೊಡ್ಡ ಕ್ಷಣಕ್ಕಾಗಿ ಭಾರತೀಯರು ಜೋರಾದ ತಯಾರಿ […]
‘Chandrayaan 3’ ಲ್ಯಾಂಡಿಂಗ್ ವರ್ಚುಯಲ್ ಆಗಿ ದಕ್ಷಿಣ ಆಫ್ರಿಕಾದಿಂದ ವೀಕ್ಷಿಸಲಿರುವ ಪ್ರಧಾನಿ
ಜೋಹಾನ್ಸ್‌ಬರ್ಗ್(ದಕ್ಷಿಣ ಆಫ್ರಿಕಾ): 15ನೇ ಬ್ರಿಕ್ಸ್ ಶೃಂಗಸಭೆಗಾಗಿ ಪ್ರಧಾನಿ ನರೇಂದ್ರ ಮೋದಿ ಸೌತ್ ಆಫ್ರಿಕಾದ ಜೋಹಾನ್ಸ್‌ಬರ್ಗ್ ತಲುಪಿದ್ದಾರೆ.ಸೌತ್ ಆಫ್ರಿಕಾ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ವರ್ಚುಯಲ್ ಆಗಿ ವಿಕ್ರಮ್ ಲ್ಯಾಂಡರ್ ಯಶಸ್ವಿ ಲ್ಯಾಂಡಿಂಗ್ ವೀಕ್ಷಣೆ ಮಾಡಲಿದ್ದಾರೆ.ಹೀಗಾಗಿ ಸೌತ್ ಆಫ್ರಿಕಾದಿಂದಲೇ ಮೋದಿ ವರ್ಚುಯಲ್ ಆಗಿ ಐತಿಹಾಸಿಕ ವಿಕ್ರಮ್ ಲ್ಯಾಂಡರ್ ಲ್ಯಾಂಡಿಂಗ್ ವೀಕ್ಷಣೆ ಮಾಡಲಿದ್ದಾರೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಚಂದ್ರಯಾನ 3 ಚಂದ್ರನ ಅಜ್ಞಾತ ದಕ್ಷಿಣ ಧ್ರುವದಲ್ಲಿ ಇಳಿಯುವ ಮೂಲಕ ಇತಿಹಾಸ ಸೃಷ್ಟಿಸಲು ಸಿದ್ಧವಾಗಿದೆ ಎಂದು ಹೇಳಿದೆ. ಲ್ಯಾಂಡಿಂಗ್‌ನ ಲೈವ್ […]
ಉಡುಪಿ ಕಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿ.ಗೆ ಸಾಧನಾ ಪ್ರಶಸ್ತಿ
ಉಡುಪಿ: ಉಡುಪಿ ಕಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿ., 2022-23ನೇ ಸಾಲಿನಲ್ಲಿ ಸಂಘವು ಸಾಧಿಸಿದ ಸರ್ವತೋಮುಖ ಅಭಿವೃದ್ದಿಗಾಗಿ ದಕ್ಷಿಣ ಕನ್ನಡ ಜಿಲ್ಲಾ ಕೆಂದ್ರ ಸಹಕಾರಿ ಬ್ಯಾಂಕ್, ಮಂಗಳೂರು ಇವರಿಂದ ಗುರುತಿಸಲ್ಪಟ್ಟು ಸಾಧನಾ ಪ್ರಸ್ತಿಗೆ ಭಾಜನವಾಗಿದೆ. ಆ.19 ರಂದು ನಡೆದ ಸಮಾರಂಭದಲ್ಲಿ ಬ್ಯಾಂಕಿನ ಅಧ್ಯಕ್ಷ ಅಲೋಶಿಯಸ್ ಡ್ ಅಲ್ಮೇಡಾ, ಉಪಾಧ್ಯಕ್ಷ ಲೂವಿಸ್ ಲೋಬೋ ಮತ್ತು ಸಿಇಓ ಸಂದೀಪ್ ಫೆರ್ನಾಂಡೀಸ್ ಇವರು ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್.ರಾಜೇಂದ್ರ ಕುಮಾರ್ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ […]
ಜಿಂಬಾಬ್ವೆ ಕ್ರಿಕೆಟ್ ದಿಗ್ಗಜ ಹೀತ್ ಸ್ಟ್ರೀಕ್ ಕ್ಯಾನ್ಸರ್ನಿಂದ ವಿರುದ್ಧ ಹೋರಾಡಿ ನಿಧನ
ನವದೆಹಲಿ: ಜಿಂಬಾಬ್ವೆ ಕ್ರಿಕೆಟ್ ದಂತಕಥೆ ಹೀತ್ ಸ್ಟ್ರೀಕ್ (49) ಕ್ಯಾನ್ಸರ್ ವಿರುದ್ಧ ಹೋರಾಡಿ ನಿಧನರಾದರು. ಈ ವಿಷಯ ತಿಳಿದ ಕ್ರಿಕೆಟ್ ಸೆಲೆಬ್ರಿಟಿಗಳು ಹಾಗೂ ಅವರ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.ಜಿಂಬಾಬ್ವೆ ಕ್ರಿಕೆಟ್ ದಿಗ್ಗಜ ಹೀತ್ ಸ್ಟ್ರೀಕ್ (49) ನಿಧನರಾಗಿದ್ದಾರೆ.ಅವರು ಕ್ಯಾನ್ಸರ್ ವಿರುದ್ಧ ಹೋರಾಡಿದರು. ಈ ವಿಷಯ ತಿಳಿದ ಕ್ರಿಕೆಟ್ ಸೆಲೆಬ್ರಿಟಿಗಳು ಹಾಗೂ ಅವರ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ಕಳೆದ ಮೇನಲ್ಲಿ, ದಕ್ಷಿಣ ಆಫ್ರಿಕಾದ ಪ್ರಸಿದ್ಧ ಆಂಕೊಲಾಜಿಸ್ಟ್‌ನಿಂದ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಅವರ ಕುಟುಂಬ ಸದಸ್ಯರು ಹೇಳಿದ್ದರು. ಅವರು ಕ್ಯಾನ್ಸರ್ […]
ಅಣ್ಣ From Mexico’ ಮೋಷನ್ ಪೋಸ್ಟರ್ ಬಿಡುಗಡೆ: ಹುಟ್ಟುಹಬ್ಬದಂದು ಡಾಲಿ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್
‘ ಅಣ್ಣ From Mexico ‘ ಶಂಕರ್ ಗುರು ನಿರ್ದೇಶನದಲ್ಲಿ ಮೂಡಿಬರುತ್ತಿರುವ ಎರಡನೇ ಸಿನಿಮಾವಾಗಿದೆ. ಪಕ್ಕ ಆಯಕ್ಷನ್ ಚಿತ್ರವಾಗಿದ್ದು, ಅಜ್ಜಿ ಮತ್ತು ಮೊಮ್ಮಗನ ಬಾಂಧವ್ಯದ ಕಥೆ ಸಿನಿಮಾದಲ್ಲಿರಲಿದೆ. ಹಾಗೆಯೇ, ಸತ್ಯ ರಾಯಲ್ ನಿರ್ಮಾಣದಲ್ಲಿ ತಯಾರಾಗಲಿರುವ ಈ ಸಿನಿಮಾಕ್ಕೆ ವಾಸುಕಿ ವೈಭವ್ ಸಂಗೀತ ನಿರ್ದೇಶನ ಮಾಡಲಿದ್ದು, ಮುಂದಿನ ನವೆಂಬರ್ ತಿಂಗಳಿನಿಂದ ಚಿತ್ರೀಕರಣ ಶುರುವಾಗಲಿದೆ. ಮೆಕ್ಸಿಕೋ ಸೇರಿದಂತೆ ಹಲವೆಡೆ ಶೂಟಿಂಗ್ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.ಬಡವ ರಾಸ್ಕಲ್ ಚಿತ್ರತಂಡ ಮತ್ತೊಂದು ಸಿನಿಮಾ ಘೊಷಿಸಿದೆ. ನಟ ಧನಂಜಯ್ ಹುಟ್ಟುಹಬ್ಬದ ಪ್ರಯುಕ್ತ ‘ಅಣ್ಣ […]