ಛಾಯಾಚಿತ್ರ ಪತ್ರಕರ್ತ ಜನಾರ್ದನ್ ಕೊಡವೂರು ಇವರಿಗೆ ಛಾಯಾ ಸಾಧಕ ಪುರಸ್ಕಾರ

ಉಡುಪಿ: ಛಾಯಾಗ್ರಹಣ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವ ಛಾಯಾಚಿತ್ರ ಪತ್ರಕರ್ತ ಜನಾರ್ದನ್ ಕೊಡವೂರು ಇವರಿಗೆ ಛಾಯಾ ಸಾಧಕ ಪುರಸ್ಕಾರ ದೊರೆತಿದೆ. ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಛಾಯಾ ಸಾಧಕ ಪುರಸ್ಕಾರವನ್ನು ನೀಡಿದರು. ಈ ಸಂದರ್ಭದಲ್ಲಿ ಕೆಎಸ್ ಪಿವಿ ಅಧ್ಯಕ್ಷ ರಮೇಶ್ ಬಿ.ಕೆ, ಗರುಡ ಫೌಂಡೇಶನ್ ನ ಅಧ್ಯಕ್ಷೆ ಮೇಧಿನಿ ಗರುಡಾಚಾರ್, ಕೋಶಾಧಿಕಾರಿ ರಘು, ಕಾರ್ಯದರ್ಶಿ ರಮೇಶ್ ಮೂರ್ತಿ ಉಪಸ್ಥಿತರಿದ್ದರು.

ಕಾನೂನು ಬಾಹಿರವಾಗಿ ಚಟುವಟಿಕೆ ನಡೆಸುವ ಕ್ಲಬ್ ಪಬ್ ಹಾಗೂ ಮಟ್ಕಾ ದಂಧೆ ನಿಲ್ಲಿಸಲು ಬಿಜೆಪಿ ಒತ್ತಾಯ

ಉಡುಪಿ: ಜಿಲ್ಲೆಯ ಮಣಿಪಾಲ ಪರಿಸರದಲ್ಲಿ ಮಧ್ಯರಾತ್ರಿಯ ನಂತರವೂ ಪರವಾನಿಗೆ ಇಲ್ಲದೆ, ಅಬಕಾರಿ ಇಲಾಖೆಯ ಸಿಎಲ್ 7 ಮತ್ತು ಸಿಎಲ್ 9 ಬಳಸಿಕೊಂಡು ಪಬ್ಬುಗಳಲ್ಲಿ ಮತ್ತು ಡಿಸ್ಕೋಗಳಲ್ಲಿ ಡಿಜೆ ಮ್ಯೂಸಿಕ್ ಬಳಸಿ ಚಟುವಟಿಕೆ ನಡೆಸುತ್ತಿದ್ದು, ಸದ್ರಿ ಚಟುವಟಿಕೆಗಳು ಕಾನೂನು ಬಾಹಿರವಾಗಿ ಕಾರ್ಯ ನಿರ್ವಹಿಸುತ್ತಿವೆ. ಅಬಕಾರಿ ಇಲಾಖೆಯ ಕಾನೂನಿನಂತೆ ಬಾರ್ ಮತ್ತು ರೆಸ್ಟೋರೆಂಟ್‌ ಗಳು ನಿಗದಿತ ಮುಕ್ತಾಯ ಅವಧಿಯ ನಂತರವೂ ತನ್ನ ವ್ಯವಹಾರವನ್ನು ಯಾವುದೇ ಅಳುಕಿಲ್ಲದೆ ನಡೆಸಿಕೊಂಡಿವೆ. ಇದರಿಂದಾಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಉಡುಪಿ ಜಿಲ್ಲೆಯಾದ್ಯಂತ ರಿಕ್ರಿಯೇಷನ್ ಕ್ಲಬ್‌ನ ಹೆಸರಿನಲ್ಲಿ ಇಸ್ಪಿಟ್ […]

ದೇಶ, ವಿದೇಶಗಳಲ್ಲಿ ಪ್ರಾರ್ಥನೆ: ಚಂದ್ರಯಾನ 3 ಯಶಸ್ವಿಯಾಗಲೆಂದು ಹೋಮ, ಹವನ, ಪೂಜೆ ನಡೆಸುತ್ತಿರುವ ಭಕ್ತರು

ನವದೆಹಲಿ : ದೇಶ ಮಾತ್ರವಲ್ಲದೇ ಜಗತ್ತಿನಾದ್ಯಂತ ಈ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಎಲ್ಲರೂ ಕಾತರದಿಂದ ಕಾಯುತ್ತಿದ್ದಾರೆ. ಇನ್ನೊಂದೆಡೆ, ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನ 3 ಯಶಸ್ವಿಯಾಗಿ ಲ್ಯಾಂಡಿಂಗ್‌ ಆಗಲೆಂದು ಪ್ರಪಂಚಾದ್ಯಂತ ವಿವಿಧ ಧಾರ್ಮಿಕ ಸಮುದಾಯಗಳಿಂದ ಹೋಮ, ಹವನ, ಪೂಜೆ, ಪ್ರಾರ್ಥನೆಗಳನ್ನು ಸಲ್ಲಿಕೆ ಮಾಡಲಾಗುತ್ತಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಕೈಗೊಂಡಿರುವ ಅತ್ಯಂತ ಮಹತ್ವದ ಸಾಹಸಕ್ಕೆ ಕ್ಷಣಗಣನೆ ಪ್ರಾರಂಭವಾಗಿದೆ.ಚಂದ್ರಯಾನ 3 ಯೋಜನೆಯ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಯಶಸ್ವಿಯಾಗಿ ಇಳಿಯಲೆಂದು ದೇಶ ಸೇರಿದಂತೆ ಪ್ರಪಂಚಾದ್ಯಂತ ಭಕ್ತರು ಪ್ರಾರ್ಥನೆ […]

ತೃತೀಯಲಿಂಗಿಗೆ ಮೊದಲ ಬಾರಿಗೆತೆಲಂಗಾಣದಲ್ಲಿ ಲಭಿಸಿದ ಪಿಜಿ ವೈದ್ಯಕೀಯ ಸೀಟು

ಹೈದರಾಬಾದ್:ತೆಲಂಗಾಣದ ತೃತೀಯಲಿಂಗಿ, 29 ವರ್ಷದ ಡಾ.ರುತ್ಪಾಲ್ ಜಾನ್ ತುಂಬಾ ಕಷ್ಟಪಟ್ಟು ಅಧ್ಯಯನ ಮಾಡಿದ್ದರಿಂದ ಮೊದಲ ಬಾರಿಗೆ ಸ್ನಾತಕೋತ್ತರ ಪದವಿಯ ವೈದ್ಯಕೀಯ ಸೀಟು ಲಭಿಸಿದೆ. ಖಮ್ಮಂ ನಿವಾಸಿ 29 ವರ್ಷದ ಡಾ.ರುತ್ಪಾಲ್ ಜಾನ್ ತುಂಬಾ ಕಷ್ಟಪಟ್ಟು ಅಧ್ಯಯನ ಮಾಡಿದರು. ಕಠಿಣ ಪರಿಶ್ರಮದಿಂದ ಎಂಬಿಬಿಎಸ್ ಮುಗಿಸಿ ಸದ್ಯ ಹೈದರಾಬಾದ್​ನ ಉಸ್ಮಾನಿಯಾ ಮೆಡಿಕಲ್ ಕಾಲೇಜಿನ ಎಆರ್​ಟಿ ಸೆಂಟರ್​ನಲ್ಲಿ ಕೆಲಸ ಮಾಡುತ್ತಿದ್ದಾರೆ. ವಿವಿಧ ಮಾನಸಿಕ ಮತ್ತು ದೈಹಿಕ ಸಮಸ್ಯೆಗಳನ್ನು ಹೊಂದಿರುವ ಬಡ ರೋಗಿಗಳಿಗೆ ಸೇವೆ ಸಲ್ಲಿಸುತ್ತಿದ್ದಾರೆ.ವೈದ್ಯಕೀಯ ಶಿಕ್ಷಣದಲ್ಲಿ ಮೊದಲ ಬಾರಿಗೆ ತೃತೀಯಲಿಂಗಿಯೊಬ್ಬರು ಪಿಜಿ […]

ವಿಕ್ರಮ್​ ಲ್ಯಾಂಡರ್​ ನಿಗದಿಯಂತೆಯೇ ಎಲ್ಲ ನಡೆಯಲಿದೆ: ಪ್ಲಾನ್​ ಬಿ ಇಲ್ಲ ಇಸ್ರೋ ಸ್ಪಷ್ಟನೆ

ಚಂದ್ರಯಾನ -3 ರ ಯೋಜನೆಯಂತೆಯೇ ಎಲ್ಲವೂ ನಡೆಯಲಿದೆ. ಬುಧವಾರ ನಿಗದಿಯಾದಂತೆ ವಿಕ್ರಮ್ ಚಂದ್ರನ ಅಂಗಳದಲ್ಲಿ ಸುರಕ್ಷಿತವಾಗಿ ಲ್ಯಾಂಡ್​ ಮಾಡಲು ಇಸ್ರೋ ಸನ್ನದ್ದವಾಗಿದೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ. ನಾವು ಯಾವುದೇ ಪ್ಲಾನ್​ ಬಿ ಹೊಂದಿಲ್ಲ ಎಂದು ಇಸ್ರೋದ ಉನ್ನತ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.ವಿಕ್ರಂ ಸಾಪ್ಟ್ ಲ್ಯಾಂಡಿಂಗ್​​​ನಲ್ಲಿ ಯಾವುದೇ ಮುಂದೂಡಿಕೆ ಅಥವಾ ಪ್ಲಾನ್ ಬಿ ಪ್ಲಾನ್​​​ ಅನ್ನು ಇಸ್ರೋ ಹೊಂದಿಲ್ಲ ಎಂದು ಈ ಅಧಿಕಾರಿ ಹೇಳಿದ್ದಾರೆ. ” ಆರಂಭದಲ್ಲಿ ಯೋಜಿಸಿದಂತೆ ಬುಧವಾರ ಸಂಜೆ ಲ್ಯಾಂಡಿಂಗ್ ಆಗಲಿದೆ ಎಂದು ಭಾರತೀಯ ಬಾಹ್ಯಾಕಾಶ […]