ಚಂದ್ರಯಾನ ಯೋಜನೆಯೇ ಒಂದು ದೊಡ್ಡ ಯಶಸ್ಸು: ನಾಸಾ ಮಾಜಿ ಅಧಿಕಾರಿ ಮೈಕ್ ಗೋಲ್ಡ್ ಮೆಚ್ಚುಗೆ
ಟೆಕ್ಸಾಸ್( ಅಮೆರಿಕ): ಭಾರತದ ಚಂದ್ರಯಾನ-3 ಯೋಜನೆಯೇ ಒಂದು ದೊಡ್ಡ ಯಶಸ್ಸು ಎಂದು ನಾಸಾದ ಮಾಜಿ ಅಧಿಕಾರಿ ಮತ್ತು ರೆಡ್ವೈರ್ನ ಮುಖ್ಯ ಅಭಿವೃದ್ಧಿ ಅಧಿಕಾರಿ ಮೈಕ್ ಗೋಲ್ಡ್ ಪ್ರಶಂಸಿದ್ದಾರೆ.ಇಂದು ಸಂಜೆ ಚಂದ್ರಯಾನ-3 ಯೋಜನೆ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ಮಾಡುವಲ್ಲಿ ಯಶಸ್ವಿಯಾಗಲಿ ಅಥವಾ ಬಿಡಲಿ, ಭಾರತದ ಈ ಯೋಜನೆಯೇ ಒಂದು ಮಹತ್ವದ್ದಾಗಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಭಾರತದ ಚಂದ್ರಯಾನ-3 ಯಶಸ್ಸಿಗೆ ಇಂದು ಇಡೀ ವಿಶ್ವವೇ ಕಾದು ಕುಳಿತಿದ್ದು, ಭಾರತದ ಈ ಯೋಜನೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಭಾರತದ […]
ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್ 2ರ ಆ.31 ರಿಂದ ಕಾರ್ಯಾರಂಭ
ದೇವನಹಳ್ಳಿ (ಬೆಂಗಳೂರು ಗ್ರಾ) : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ಅನ್ನು ಅತ್ಯಾಧುನಿಕ ತಂತ್ರಜ್ಞಾನದಿಂದ ನಿರ್ಮಾಣ ಮಾಡಲಾಗಿದ್ದು, ಕಳೆದ ಜನವರಿ 15ರಿಂದ ಕೆಲವು ವಿಮಾನಗಳ ಹಾರಾಟ ಮಾತ್ರ ಶುರುವಾಗಿತ್ತು.ಆಗಸ್ಟ್ 31 ರಿಂದ ಕೆಂಪೇಗೌಡ ವಿಮಾನ ನಿಲ್ದಾಣ ಟರ್ಮಿನಲ್ 2ರಲ್ಲಿ ದೇಶೀಯ ಹಾಗೂ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ನಡೆಯಲಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.ಆದರೆ ಆಗಸ್ಟ್ 31ರಿಂದ ಹೊಸ ಟರ್ಮಿನಲ್‌ನಿಂದ ದೇಶೀಯ ಹಾಗೂ ಅಂತಾರಾಷ್ಟ್ರೀಯ ಎಲ್ಲಾ ವಿಮಾನಗಳ ಹಾರಾಟ ನಡೆಯಲಿದೆ. ದೇಶೀಯ ವಿಮಾನಯಾನ ನಡೆಸುವ […]
ಮುಂಬರುವ ವರ್ಷಗಳಲ್ಲಿ ಭಾರತವು ವಿಶ್ವದ ಬೆಳವಣಿಗೆಯ ಎಂಜಿನ್: ಬ್ರಿಕ್ಸ್ ನಲ್ಲಿ ಪ್ರಧಾನಿ ಮೋದಿ
ಜೋಹಾನ್ಸ್‌ಬರ್ಗ್ (ದಕ್ಷಿಣ ಆಫ್ರಿಕಾ): ಅಸ್ಥಿರವಾದ ಜಾಗತಿಕ ಆರ್ಥಿಕತೆಯ ಹೊರತಾಗಿಯೂ ಭಾರತವು ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿ ಹೊರಹೊಮ್ಮಿದೆ.ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿರುವ ಪಿಎಂ ಮೋದಿ ಮಂಗಳವಾರ ಬ್ರಿಕ್ಸ್ ಬಿಸಿನೆಸ್ ಫೋರಂ ನಾಯಕರ ಸಂವಾದದಲ್ಲಿ ಮಾತನಾಡಿ, ”ಮುಂಬರುವ ವರ್ಷಗಳಲ್ಲಿ ಭಾರತವು ವಿಶ್ವದ ಬೆಳವಣಿಗೆಯ ಎಂಜಿನ್ ಆಗಲಿದೆ” ಎಂದೂ ಹೇಳಿದರು. ”ಭಾರತವು ವಿಶ್ವದ ಮೂರನೇ ಅತಿದೊಡ್ಡ ಸ್ಟಾರ್ಟ್ಅಪ್ ಪರಿಸರ ವ್ಯವಸ್ಥೆ ಹೊಂದಿದ್ದು, 100ಕ್ಕೂ ಹೆಚ್ಚು ಯುನಿಕಾರ್ನ್‌ಗಳಿವೆ. ಸರ್ಕಾರ ಕೈಗೊಂಡಿರುವ ಮಿಷನ್ ಮೋಡ್ ಸುಧಾರಣೆಗಳ ಪರಿಣಾಮ ವ್ಯಾಪಾರ ಸುಲಭತೆಯು (Ease […]
ವಾಶ್ ರೂಂನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ: ಕಾಲೇಜು ವಿರುದ್ಧದ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ
ಉಡುಪಿ: ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ಬಾಲಕಿಯರ ವಾಶ್ ರೂಂನಲ್ಲಿ ವಿದ್ಯಾರ್ಥಿನಿಯೊಬ್ಬಳನ್ನು ಮೂವರು ಹಿರಿಯ ವಿದ್ಯಾರ್ಥಿನಿಯರು ಚಿತ್ರೀಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಕಾಲೇಜು ವಿರುದ್ಧದ ತನಿಖೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಉಡುಪಿಯ ಮಲ್ಪೆ ಪ್ರದೇಶದಲ್ಲಿ ಜುಲೈ 25 ರಂದು ಸಂಸ್ಥೆಯ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕಾಲೇಜು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಸಂದರ್ಭ ಮಧ್ಯಂತರ ತಡೆಯಾಜ್ಞೆ ನೀಡಿದೆ. ಜುಲೈ 18 ರಂದು ಘಟನೆ ನಡೆದಾಗ ಕಾಲೇಜಿನಿಂದ ಘಟನೆಯ ಬಗ್ಗೆ ನಮಗೆ ತಿಳಿಸಲಾಗಿಲ್ಲ ಎಂದು ಪೊಲೀಸರು […]
ಔಟ್‌ಲುಕ್-ಐಕೇರ್ ಇಂಡಿಯಾ ಯೂನಿವರ್ಸಿಟಿ ಶ್ರೇಯಾಂಕ: ದೇಶದ ಟಾಪ್ 40 ವಿಶ್ವವಿದ್ಯಾನಿಲಯಗಳ ಪೈಕಿ ಮಾಹೆ ವಿಶ್ವವಿದ್ಯಾಲಯ
ಮಣಿಪಾಲ: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಪ್ರತಿಷ್ಠಿತ ಔಟ್‌ಲುಕ್-ಐಕೇರ್ ಇಂಡಿಯಾ ಯೂನಿವರ್ಸಿಟಿ ಶ್ರೇಯಾಂಕಗಳು 2023 ರ ಪ್ರಕಾರ, ಭಾರತದಲ್ಲಿನ ಟಾಪ್ 40 ಪರಿಗಣಿತ ವಿಶ್ವವಿದ್ಯಾನಿಲಯಗಳ ಪೈಕಿ ಅಗ್ರಸ್ಥಾನದಲ್ಲಿದೆ. ಅಭಿವೃದ್ಧಿ ಮತ್ತು ಉದ್ಯಮದ ನಿಶ್ಚಿತತೆಯು ಅದನ್ನು ಭಾರತೀಯ ಉನ್ನತ ಶಿಕ್ಷಣದ ಉತ್ತುಂಗಕ್ಕೆ ಏರಿಸಿದೆ. ಸಮಗ್ರ ಬೆಳವಣಿಗೆಯನ್ನು ಉತ್ತೇಜಿಸುವ ತನ್ನ ಸಮರ್ಪಣೆಯನ್ನು ಒತ್ತಿಹೇಳುತ್ತಾ, ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ವಿವಿಧ ವಿಭಾಗಗಳಲ್ಲಿ ಶ್ಲಾಘನೀಯ ಅಂಕಗಳನ್ನು ಪಡೆದಿದೆ, ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ತನ್ನ ಸ್ಥಾನವನ್ನು ದೃಢವಾಗಿ ಸ್ಥಾಪಿಸಿದೆ. ವಿಶ್ವವಿದ್ಯಾನಿಲಯವು […]