ಗ್ರಾಮೀಣ ಬ್ಯಾಂಕ್ ಗಳಿಂದ ಸಾಲ ಪಡೆದ ರೈತರ ಸಮಸ್ಯೆ ಆಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಳ್ಳಾರಿ ಕರ್ನಾಟಕ ಗ್ರಾಮೀಣ ಬ್ಯಾಂಕಿನಿಂದ ಬೆಳೆಸಾಲ ಪಡೆದು ಸುಸ್ತಿದಾರರಾಗಿರುವ ರೈತರಿಗೆ ಓ.ಟಿ.ಎಸ್. (One Time Settlement) ಯೋಜನೆಯಡಿ ಅನುಕೂಲ ಕಲ್ಪಿಸುವ ಕುರಿತು ಬ್ಯಾಂಕಿನ ಮುಖ್ಯಸ್ಥರು, ನಬಾರ್ಡ್‌ ಹಾಗೂ ಪ್ರವರ್ತಕ ಬ್ಯಾಂಕ್‌ ಆದ ಕೆನರಾ ಬ್ಯಾಂಕ್‌ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಪರಿಹಾರ ಕಂಡುಕೊಳ್ಳಲು ಮುಖ್ಯ ಕಾರ್ಯದರ್ಶಿ ಹಾಗೂ ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಅವರು ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ಶಾಸಕ ಬಿ.ಆರ್. ಪಾಟೀಲ ಹಾಗೂ ದರ್ಶನ್‌ ಪುಟ್ಟಣ್ಣಯ್ಯ […]

ಪೌಷ್ಠಿಕ ಆಹಾರ ಕಿಟ್ ವಿತರಣೆ ಹಾಗೂ ಕ್ಷಯ ರೋಗ ಮಾಹಿತಿ ಕಾರ್ಯಾಗಾರ

ಉಡುಪಿ: ದೇಶದಲ್ಲಿ ಒಟ್ಟು ಇಪ್ಪತ್ತೈದು ಲಕ್ಷ ತೊಂಬತ್ತು ಸಾವಿರ ಕ್ಷಯ ರೋಗಿಗಳು ಇದ್ದಾರೆ ಎನ್ನುವ ಮಾಹಿತಿ ಇದೆ. ಇದಕ್ಕೆ ಕಾರಣ ಪೌಷ್ಟಿಕ ಆಹಾರದ ಕೊರತೆ ಹಾಗೂ ಒಬ್ಬರಿಂದ ಇನ್ನೊಬ್ಬರಿಗೆ ರೋಗ ಹರಡುವಿಕೆ. ರೋಗಿಗಳಿಗೆ ಪೌಷ್ಟಿಕ ಆಹಾರದ ಕಿಟ್ ನೀಡುವುದರಿಂದ ಪೌಷ್ಠಿಕತೆಯ ಕೊರತೆಯನ್ನು ಹೋಗಲಾಡಿಸಿ ಕ್ಷಯ ರೋಗವನ್ನು ನೀಗಿಸಬಹುದು. ಪ್ರಧಾನಿ ನರೇಂದ್ರ ಮೋದಿಯವ ಕ್ಷಯ ಮುಕ್ತ ಭಾರತದ ಆಶಯಕ್ಕಾಗಿ ಜಿಲ್ಲೆಯನ್ನು ಕ್ಷಯ ಮುಕ್ತವನ್ನಾಗಿಸಲು ಕೊಡವೂರು ವಾರ್ಡ್ ಅಭಿವೃದ್ಧಿ ಸಮಿತಿ, ಲಯನ್ಸ್ ಅಂಡ್ ಲಿಯೋ ಕ್ಲಬ್ ಪರ್ಕಳ , ಅಪ್ಪು […]