ಕಾರ್ಕಳ: ಕ್ರಿಯೇಟಿವ್‌ ಕಾಲೇಜಿನಲ್ಲಿ ಕೆಸರ್ಡೊಂಜಿ ದಿನ- ಮಣ್ಣಿನೊಂದಿಗೆ ಕಲಿಕಾ ಅನುಭವ ಕಾರ್ಯಕ್ರಮ

ಕಾರ್ಕಳ: ಹಿರ್ಗಾನ ಗ್ರಾಮದಲ್ಲಿರುವ ‘ಬೆಂಗಾಲ್‌’ ಕೃಷಿ ಭೂಮಿಯಲ್ಲಿ ಕ್ರಿಯೇಟಿವ್‌ ಪಿ.ಯು ಕಾಲೇಜಿನ ವಾಣಿಜ್ಯ ವಿದ್ಯಾರ್ಥಿಗಳಿಗೆ ಕೃಷಿ ಮತ್ತು ಅದಕ್ಕೆ ಸಂಬಂಧಿಸಿದ ವಸ್ತುಗಳ ಪ್ರದರ್ಶನದೊಂದಿಗೆ ಕೆಸರಿನಲ್ಲಿ ಜೀವನದ ಕಲಿಕೆ ಮತ್ತು ವಿವಿಧ ಆಟೋಟ ಕಾರ್ಯಕ್ರಮಗಳು ನಡೆದವು. ಕೆಸರ್ಡೊಂಜಿ ದಿನ ಕಾರ್ಯಕ್ರಮವನ್ನು ನೇಜಿ ನೆಡುವ ಮೂಲಕ ಉದ್ಘಾಟಿಸಿ ಮಾತನಾಡಿದ ಹಿರ್ಗಾನ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ ಸಂತೋಷ್‌ ಶೆಟ್ಟಿ, ಇಂದು ನಮಗೆ ಧನ ಸಂಪಾದನೆಗೆ ಅನೇಕ ಮಾರ್ಗಗಳಿವೆ. ಆದರೆ ಹೊಟ್ಟೆ ತುಂಬಿಸಲು ರೈತ ಬೆಳೆದ ಬೆಳೆಯೇ ಬೇಕಾಗುತ್ತದೆ. ಆಹಾರದ ಉತ್ಪಾದನೆ […]

ಆ. 27 ರಂದು 227ನೇ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವ ಆಚರಣೆ

ಉಡುಪಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ {ರಿ} ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ 227ನೇ ರಾಯಣ್ಣ ಉತ್ಸವವನ್ನು ಉಡುಪಿಯಲ್ಲಿ ವಿಜೃಂಭಣೆಯಿಂದ ಆಚರಿಸಲಾಗುವುದು. ಆ. 27 ಭಾನುವಾರ ಬೆಳಿಗ್ಗೆ 9.30 ರಿಂದ ಬನ್ನಂಜೆಯ ಶ್ರೀ ನಾರಾಯಣ ಗುರು ಅಡಿಟೋರಿಯಂನಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ಉಡುಪಿ ಮತ್ತು ದ.ಕ ಜಿಲ್ಲೆ ಇದರ ಅಧ್ಯಕ್ಷ ಸಿದ್ಧಬಸಯ್ಯಸ್ವಾಮಿ ಚಿಕ್ಕಮಠ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸಭಾ ಕಾರ್ಯಕ್ರಮದಲ್ಲಿ ಬೈಲಹೊಂಗಲದ ದುರ್ಗಾದೇವಿ […]

ಹೈಕಾಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಡೆಂಗ್ಯೂ ಜ್ವರ ಕುರಿತು ಅರಿವು ಜಾಥಾ

ಕುಂದಾಪುರ: “ಡೆಂಗ್ಯೂ ಸೋಲಿಸಿ ಜೀವ ಉಳಿಸಿ” ಎನ್ನುವ ಘೋಷಣೆಯೊಂದಿಗೆ ಹೈಕಾಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಆಗಸ್ಟ್ 24 ರಂದು ಡೆಂಗ್ಯೂ ಜ್ವರ ಕುರಿತಾದ ಅರಿವು ಜಾಥಾ ನಡೆಸಲಾಯಿತು. ಪ್ರಾಥಮಿಕ ಆರೋಗ್ಯ ಕೇಂದ್ರ ಆವರ್ಸೆ ಹಾಗೂ ಸರ್ಕಾರಿ ಪ್ರೌಢಶಾಲೆ ಹೈಕಾಡಿ ಇವರ ಜಂಟಿ ಸಹಯೋಗದೊಂದಿಗೆ ಜಾಥಾ ನಡೆಯಿತು. ಸ್ಥಳೀಯ ಮನೆಗಳು ಹಾಗೂ ಅಂಗಡಿಗಳಿಗೆ ತೆರಳಿ ಡೆಂಗ್ಯೂ ಕುರಿತು ಜಾಗೃತಿ ಮೂಡಿಸಲಾಯಿತು. ಆರೋಗ್ಯ ಮತ್ತು ಕ್ಷೇಮ ಕೇಂದ್ರ- ಹಿಲಿಯಾಣ ಇಲ್ಲಿನ ಸಮುದಾಯ ಆರೋಗ್ಯ ಅಧಿಕಾರಿ ವಿಜೇಂದ್ರ ಡೆಂಗ್ಯೂ ಹರಡುವ ಬಗೆ ಹಾಗೂ […]

FIDE ಚೆಸ್ ವಿಶ್ವಕಪ್‌ ನಲ್ಲಿ ರನ್ನರ್ ಅಪ್ ಆಗಿ ಹೊರಹೊಮ್ಮಿದ ಆರ್. ಪ್ರಗ್ನಾನಂದ: ಮ್ಯಾಗ್ನಸ್ ಕಾರ್ಲ್‌ಸೆನ್ ಗೆ ವಿಶ್ವ ಕಪ್ ಕಿರೀಟ

ಬಾಕು: ಅಜರ್ಬೈಜಾನ್ ನಲ್ಲಿ ನಡೆದ FIDE ಚೆಸ್ ವಿಶ್ವಕಪ್‌ನಲ್ಲಿ ಭಾರತದ ಗ್ರ್ಯಾಂಡ್‌ಮಾಸ್ಟರ್ ಆರ್ ಪ್ರಗ್ನಾನಂದ ಅವರ ಕನಸಿನ ಓಟಕ್ಕೆ ವಿಶ್ವ ನಂ. 1 ಮ್ಯಾಗ್ನಸ್ ಕಾರ್ಲ್‌ಸೆನ್ ಕೊನೆ ಹಾಡಿದ್ದಾರೆ. ಫೈನಲ್ ಪಂದ್ಯಗಳಲ್ಲಿ ಡ್ರಾ ಸಾಧಿಸಿದ ಬಳಿಕ ಗುರುವಾರ ನಡೆದ ಟೈ-ಬ್ರೇಕ್‌ನಲ್ಲಿ 1.5-0.5 ರಿಂದ ಪ್ರಗ್ನಾನಂದನನ್ನು ಸೋಲಿಸಿ ವಿಶ್ವಕಪ್ ಪಟ್ಟ ತನ್ನದಾಗಿಸಿಕೊಂಡಿದ್ದಾರೆ. ಆದಾಗ್ಯೂ, 18 ವರ್ಷದ ಪ್ರಗ್ನಾನಂದ ರನ್ನರ್ ಅಪ್ ಸ್ಥಾನವನ್ನು ಗಳಿಸಿ ಭಾರತೀಯರೆಲ್ಲರೂ ಹೆಮ್ಮೆ ಪಡುವಂತೆ ಮಾಡಿದ್ದಾರೆ. ಆರ್. ಪ್ರಗ್ನಾನಂದ ಅವರ ಈ ಸಾಧನೆಗೆ ಪ್ರಧಾನಿ ಮೋದಿ […]