ಆಗಸ್ಟ್ 28 ರಂದು 51 ಸಾವಿರ ಫಲಾನುಭವಿಗಳಿಗೆ ಪ್ರಧಾನಿ ಮೋದಿ ನೇಮಕಾತಿ ಪತ್ರ ವಿತರಣೆ : ರೋಜ್ಗಾರ್ ಮೇಳ
ನವದೆಹಲಿ : ಸರ್ಕಾರಿ ಉದ್ಯೋಗಗಳ ಸೃಷ್ಟಿ ಮತ್ತು ಯುವಕರಿಗೆ ಹುದ್ದೆಗಳನ್ನು ನೀಡುವ ಅಭಿಯಾನವಾದ ‘ರೋಜ್ಗಾರ್ ಮೇಳ’ದ ಅಡಿಯಲ್ಲಿ ಆಗಸ್ಟ್ 28 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 51 ಸಾವಿರ ನೇಮಕಾತಿ ಪತ್ರಗಳನ್ನು ಫಲಾನುಭವಿಗಳಿಗೆ ವಿತರಿಸಲಿದ್ದಾರೆ ಎಂದು ಸರ್ಕಾರ ತಿಳಿಸಿದೆ ಪಂಜಾಬ್ನ ಜಲಂಧರ್ ಸೇರಿದಂತೆ 45 ಕಡೆಗಳಲ್ಲಿ ನಡೆಯುವ ರೋಜ್ಗಾರ್ ಮೇಳದಲ್ಲಿ 8 ನೇ ಹಂತದ ನೇಮಕಾತಿ ಪತ್ರಗಳ ವಿತರಣೆ ನಡೆಯಲಿದೆ. ಮೇಳದಲ್ಲಿ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ನೇರವಾಗಿ ಭಾಗಿಯಾದರೆ, ಪ್ರಧಾನಿ ಮೋದಿ ಅವರು […]
ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಪಾಡಿಕೊಂಡ ಟೈಗರ್ಸ್ : ಹುಬ್ಬಳ್ಳಿಗೆ 5 ವಿಕೆಟ್‌ಗಳಿಂದ ಮಂಗಳೂರು ವಿರುದ್ಧ ಗೆಲುವು.
ಬೆಂಗಳೂರು: ಲೀಗ್ ಹಂತದ ತನ್ನ ಕೊನೆಯ ಪಂದ್ಯದಲ್ಲಿ ಮಂಗಳೂರು ಡ್ರ್ಯಾಗನ್ಸ್ ತಂಡವನ್ನು 5 ವಿಕೆಟ್‌ಗಳಿಂದ ಸೋಲಿಸಿದ ಹುಬ್ಬಳ್ಳಿ ಟೈಗರ್ಸ್ ಅಂಕಪಟ್ಟಿಯಲಿ ಅಗ್ರ ಸ್ಥಾನ ಕಾಪಾಡಿಕೊಂಡಿದೆ. ಹುಬ್ಬಳ್ಳಿ ಪರ ಮನ್ವಂತ್ ಕುಮಾರ್ (5/33) ಮೊಹಮ್ಮದ್ ತಾಹಾ (51) ಮತ್ತು ನಾಯಕ ಮನೀಶ್ ಪಾಂಡೆ (56*) ಆಟದ ನೆರವಿನಿಂದ ಮಂಗಳೂರು ತಂಡವನ್ನು ನಿರಾಯಾಸವಾಗಿ ಹುಬ್ಬಳ್ಳಿ ಸೋಲಿಸಿತು.ಲೀಗ್ನಲ್ಲಿ ಕೇವಲ ಎರಡು ಪಂದ್ಯಗಳಲ್ಲಿ ಸೋಲು ಕಂಡಿರುವ ಹುಬ್ಬಳ್ಳಿ ಟೈಗರ್ಸ್ ಅಂಕಪಟ್ಟಿಯಲ್ಲಿ 16 ಅಂಕದಿಂದ ಅಗ್ರ ಪಟ್ಟವನ್ನು ಉಳಿಸಿಕೊಂಡಿದೆ. ಅಲ್ಲದೇ ನಿನ್ನೆ ಶಿವಮೊಗ್ಗ ಲಯನ್ಸ್ […]
2024ರ ವಿಧಾನ ಪರಿಷತ್ ಚುನಾವಣೆಗೆ ಉಸ್ತುವಾರಿಗಳನ್ನು ನೇಮಿಸಿದ ಬಿಜೆಪಿ
ಬೆಂಗಳೂರು: ಲೋಕಸಭಾ ಚುನಾವಣೆ ಬಳಿಕ ನಡೆಯುವ ವಿಧಾನ ಪರಿಷತ್ನ 7 ಸ್ಥಾನಗಳ ಚುನಾವಣೆಗೆ ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಿ ಬಿಜೆಪಿ ಚುನಾವಣಾ ಸಿದ್ಧತಾ ಕಾರ್ಯವನ್ನು ಆರಂಭಿಸಿದೆ.ಭಾ ಚುನಾವಣೆಯಲ್ಲಿ ಸೋತವರಿಗೂ ಜವಾಬ್ದಾರಿ ನೀಡಲಾಗಿದ್ದು, ಸಂಘಟನೆಗೆ ಬಳಸಿಕೊಳ್ಳಲು ಪಕ್ಷ ಮುಂದಾಗಿದೆ. ಬಿಜೆಪಿ 2024ರ ಜೂನ್ ತಿಂಗಳಲ್ಲಿ ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಉಸ್ತುವಾರಿಗಳನ್ನು ನೇಮಕ ಮಾಡಿದೆ. ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಮಾಜಿ ಸಚಿವ ಬಿ ಶ್ರೀರಾಮುಲು, ನೈರುತ್ಯ ಪದವೀಧರ ಕ್ಷೇತ್ರಕ್ಕೆ ಸಿ ಟಿ ರವಿ, ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ಆರ್ […]
ಚೆನ್ನೈನಲ್ಲಿ ಜೈಲರ್ ಸಕ್ಸಸ್ ಸೆಲೆಬ್ರೇಶನ್
ಜೈಲರ್ ಈ ಹಿಂದಿನ ಬಾಕ್ಸ್ ಆಫೀಸ್ ದಾಖಲೆಗಳನ್ನು ಮುರಿದಿದೆ. ಭಾರತದ ಅತ್ಯಂತ ಪ್ರಸಿದ್ಧ ನಟ ರಜನಿಕಾಂತ್ ಅವರ ಜೈಲರ್ ಸಿನಿಮಾ ಚಿತ್ರಮಂದಿರಗಳಲ್ಲಿ ಉತ್ತಮ ಪ್ರದರ್ಶನ ಮುಂದುವರಿಸಿದೆ. ನೆಲ್ಸನ್ ದಿಲೀಪ್ ಕುಮಾರ್ ಆಯಕ್ಷನ್ ಕಟ್ ಹೇಳಿರುವ ಈ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಸಖತ್ ಸದ್ದು ಮಾಡುತ್ತಿದೆ.ಚೆನ್ನೈನಲ್ಲಿ ಜೈಲರ್ ಸಿನಿಮಾ ಸಕ್ಸಸ್ ಸೆಲೆಬ್ರೇಶನ್ ನಡೆದಿದೆ. ಗಲ್ಲಾಪೆಟ್ಟಿಗೆ ಅಂಕಿ ಅಂಶ ಎಲ್ಲರ ಹುಬ್ಬೇರುವಂತೆ ಮಾಡಿದೆ. ತಲೈವಾ 2 ವರ್ಷಗಳ ಬ್ರೇಕ್ ಬಳಿಕ ಜೈಲರ್ನೊಂದಿಗೆ ಪರದೆ ಮೇಲೆ ಬಂದಿದ್ದು, 2023ರ ಬ್ಲಾಕ್ಬಸ್ಟರ್ ಚಿತ್ರವಾಗಿ […]
ಸಿಎಂ ಸಿದ್ದರಾಮಯ್ಯ ಮೂರು ದಿನಗಳ ಕಾಲ ಮೈಸೂರು ಪ್ರವಾಸ
ಮೈಸೂರು: ಆಗಸ್ಟ್ 27ರ ಬೆಳಗ್ಗೆ 8 ಗಂಟೆಗೆ ಸ್ಥಳೀಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲಿದ್ದಾರೆ. ಆಗಸ್ಟ್ 28ರ ಬೆಳಗ್ಗೆ 11ಕ್ಕೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿರುವ ಕೆಡಿಪಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 27 ರಿಂದ 30 ರ ವರೆಗೆ ಜಿಲ್ಲೆಯಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಸಂಜೆ 5 ಗಂಟೆಗೆ ಸಿದ್ದಾರ್ಥ ನಗರದ ಕಣ್ಣಿನ ಆಸ್ಪತ್ರೆ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು, ರಾತ್ರಿ 7 ಗಂಟೆಗೆ ಹೋಟೆಲ್ ಜೆಪಿ ಪ್ಯಾಲೇಸ್ನಲ್ಲಿ ಗಂಗೋತ್ರಿ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಆ.29ರಂದು […]