ಪಶ್ಚಿಮ ಬಂಗಾಳದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಹಿನ್ನೆಲೆ : 6 ಮಂದಿ ದಾರುಣ ಸಾವು
ಕೋಲ್ಕತ್ತಾ (ಪಶ್ಚಿಮ ಬಂಗಾಳ) : ಪಶ್ಚಿಮ ಬಂಗಾಳದ ಪಟಾಕಿ ತಯಾರಿಸುವ ಕಾರ್ಖಾನೆಯಲ್ಲಿ ದೊಡ್ಡ ಪ್ರಮಾಣದ ಸ್ಫೋಟ ಸಂಭವಿಸಿದೆ ಮರ, ಪಕ್ಕದ ಮನೆ ಮೇಲೆಲ್ಲ ದೇಹದ ತುಂಡುಗಳು: ಕಾರ್ಖಾನೆಯ ಸಮೀಪದ ಅಲ್ಲಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಮೃತದೇಹಗಳು ಪತ್ತೆಯಾಗಿವೆ. ಅಲ್ಲದೇ, ಭೀಕರ ಸ್ಫೋಟದ ನಂತರ ಪಕ್ಕದ ಮನೆಗಳು ಮತ್ತು ಮರಗಳ ಮೇಲೂ ಕೆಲ ದೇಹದ ತುಂಡುಗಳು ಕಂಡುಬಂದಿದ್ದು, ಸ್ಫೋಟದ ತೀವ್ರತೆಯು ಸ್ಥಳೀಯರಲ್ಲಿ ಭಾರಿ ಆತಂಕ ಉಂಟುಮಾಡಿದೆ. ಉತ್ತರ 24 ಪರಗಣ ಜಿಲ್ಲೆಗೆ ಸೇರಿದ ದತ್ತಪುಕುರ್ದಲ್ಲಿ ಪಟಾಕಿ ತಯಾರಿಸುವ ಕಾರ್ಖಾನೆಯಲ್ಲಿ ಇಂದು […]
ಲ್ಯಾಂಡರ್ ಮತ್ತು ಎಕ್ಸ್ ರೇ ಮಿಷನ್ ನೌಕೆ ಸೋಮವಾರ ಉಡಾವಣೆ ಸಾಧ್ಯತೆ: ಚಂದ್ರನತ್ತ ಜಪಾನ್
ಟೋಕಿಯೊ: ಭಾರತದ ಚಂದ್ರಯಾನ-3 ಯಶಸ್ಸಿನ ನಂತರ ಈಗ ಜಪಾನ್ ಚಂದ್ರನತ್ತ ನೌಕೆ ಕಳುಹಿಸಲು ಸಿದ್ಧತೆ ನಡೆಸಿದೆ. ಜಪಾನಿನ ಏರೋಸ್ಪೇಸ್ ಎಕ್ಸ್ಪ್ಲೊರೇಶನ್ ಏಜೆನ್ಸಿಯ (ಜಾಕ್ಸಾ) ಎಸ್‌ಎಲ್‌ಐಎಂ ಅಥವಾ ಸ್ಲಿಮ್ (Smart Lander for Investigating Moon) ಸಣ್ಣ ಪ್ರಮಾಣದ ಹಗುರವಾದ ಸಂಶೋಧನಾ ಕಾರ್ಯಾಚರಣೆ ವ್ಯವಸ್ಥೆಯನ್ನು ಯಶಸ್ವಿಗೊಳಿಸುವ ಮತ್ತು ಭವಿಷ್ಯದ ಚಂದ್ರ ಶೋಧನೆಗಳಿಗೆ ಅಗತ್ಯವಾದ ಪಿನ್ ಪಾಯಿಂಟ್ ಲ್ಯಾಂಡಿಂಗ್ ತಂತ್ರಜ್ಞಾನವನ್ನು ಸಾಧಿಸುವ ಗುರಿಯನ್ನು ಹೊಂದಿದೆ.ಜಪಾನಿನ ಬಾಹ್ಯಾಕಾಶ ಸಂಸ್ಥೆ ಸೋಮವಾರ ಚಂದ್ರನ ಮೇಲ್ಮೈಗೆ ಲ್ಯಾಂಡರ್ ಮತ್ತು ಎಕ್ಸ್-ರೇ ಮಿಷನ್ ನೌಕೆಯನ್ನು ಉಡಾವಣೆ […]
ಆಗಸ್ಟ್ 28ರಂದು ಕೆಕೆಆರ್ಟಿಸಿಯಿಂದ ‘ಕಲ್ಯಾಣ ರಥ’ ಹೈಟೆಕ್ ಸ್ಲೀಪರ್ ಬಸ್ ಸೇವೆಗೆ ಚಾಲನೆ
ಕಲಬುರಗಿ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ (ಕೆಕೆಆರ್‌ಟಿಸಿ) ಹೊಸದಾಗಿ ಹೈಟೆಕ್ ವೋಲ್ವೋ ಮಲ್ಟಿ ಎಕ್ಸಲ್ ಸ್ಲೀಪರ್ ಬಸ್ ಸೇರ್ಪಡೆಯಾಗಿದೆ. ಕಲ್ಯಾಣ ರಥ’ ಎಂಬ ಹೆಸರಿನ ಈ ಐಷಾರಾಮಿ ಬಸ್ ಇದೇ ಆಗಸ್ಟ್ 28 ರಿಂದ ರಸ್ತೆಗೆ ಇಳಿಯಲಿದೆ. ಮೊದಲ ಹಂತದಲ್ಲಿ ರಾಯಚೂರು ಜಿಲ್ಲೆಯ ಸಿಂಧನೂರು-ಬೆಂಗಳೂರು ನಡುವೆ ಸಂಚಾರ ನಡೆಸಲಿದೆ. ”ಆಗಸ್ಟ್ 28 ರಂದು ಸಿಂಧನೂರಿನಲ್ಲಿ ಸಾರಿಗೆ ಮತ್ತು ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿ ಅವರು ನೂತನ ಬಸ್ಗೆ ಚಾಲನೆ ನೀಡಲಿದ್ದಾರೆ. ಸಂಸ್ಥೆಗೆ ಕಲ್ಯಾಣ ರಥ […]
ಮಹಿಳಾ ಅಂಧರ ಕ್ರಿಕೆಟ್ ತಂಡಕ್ಕೆ ಚಿನ್ನ ಪದಕ ಗೆದ್ದ ಹಿನ್ನೆಲೆ: ಪ್ರಧಾನಿ ಮೋದಿ ಅಭಿನಂದನೆ
ನವದೆಹಲಿ : ಅಂತಾರಾಷ್ಟ್ರೀಯ ಅಂಧರ ಕ್ರೀಡಾ ಒಕ್ಕೂಟದ ವರ್ಲ್ಡ್ ಗೇಮ್ಸ್ 2023 ರ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು 9 ವಿಕೆಟ್‌ಗಳಿಂದ ಮಣಿಸಿದ ಭಾರತೀಯ ಮಹಿಳಾ ಅಂಧರ ಕ್ರಿಕೆಟ್ ತಂಡ ಚಿನ್ನದ ಪದಕ ಗೆಲ್ಲುವ ಮೂಲಕ ನಿನ್ನೆ (ಶನಿವಾರ) ಹೊಸ ಇತಿಹಾಸ ನಿರ್ಮಿಸಿದೆ.ಐತಿಹಾಸಿಕ ಪದಕ ವಿಜೇತ ಮಹಿಳಾ ಕ್ರಿಕೆಟ್ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದು, “ನಿಮ್ಮ ಯಶಸ್ಸಿನಿಂದ ಇಡೀ ದೇಶವೇ ಹೆಮ್ಮೆಯಿಂದ ಬೀಗುತ್ತಿದೆ” ಎಂದು ಹೇಳಿದ್ದಾರೆ. ಐಬಿಎಸ್‌ಎ ವಿಶ್ವ ಕ್ರೀಡಾಕೂಟದಲ್ಲಿ ಮಹಿಳಾ ಅಂಧರ ಕ್ರಿಕೆಟ್ ತಂಡವು ಚಿನ್ನದ […]
ಸೌಜನ್ಯ ಅತ್ಯಾಚಾರ ಮಾಡಿದ ಆರೋಪಿ “ಕೊರಗಜ್ಜ ಕೊರಗಜ್ಜ” ಎಂದು ಹುಚ್ಚನಂತೆ ಅಲೆದಾಡಲಿ.
ಉಡುಪಿ: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಮಾಡಿದ ಆರೋಪಿ ಕೊರಗಜ್ಜ ಕೊರಗಜ್ಜ ಎಂದು ರಸ್ತೆಯಲ್ಲಿ ಹುಚ್ಚನಂತೆ ಅಲೆದಾಡಲಿ ಅಂತ ಪ್ರಾರ್ಥಿಸಿ ಕರಾವಳಿಯ ಕಾರಣಿಕ ದೈವ ಕೊರಗಜ್ಜನಿಗೆ ಉರುಳು ಸೇವೆಯ ಮೂಲಕ ಪೂಜೆ ಸಲ್ಲಿಸಲಾಯಿತು. ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರಿಂದ ವಿಶೇಷ ಉರುಳು ಸೇವೆ ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಬಳಿ ಇರುವ ನೆಲ್ಲಿಕಟ್ಟೆ ಕೊರಗಜ್ಜ ದೈವಸ್ಥಾನದಲ್ಲಿ ಇಂದು ನಡೆಯಿತು. ಮೊದಲು ಪ್ರಾರ್ಥನೆ ಸಲ್ಲಿಸಿದ ನಿತ್ಯಾನಂದ ಒಳಕಾಡು, ಬಳಿಕ ಸೌಜನ್ಯಾಳ ಭಾವ ಚಿತ್ರ […]