ಸೆಪ್ಟೆಂಬರ್‌ ಮೊದಲ ವಾರ ಆದಿತ್ಯ ಎಲ್‌ 1 ಉಡಾವಣೆ : ಚಂದ್ರನ ಬಳಿಕ ಸೂರ್ಯನತ್ತ ಚಿತ್ತ ಹರಿಸಿದ ಇಸ್ರೋ

ತಿರುವನಂತಪುರಂ (ಕೇರಳ) :ಸೂರ್ಯನನ್ನು ಅಧ್ಯಯನ ಮಾಡುವ ಆದಿತ್ಯ ಎಲ್ 1 ಗಗನನೌಕೆಯನ್ನು ಸೆಪ್ಟೆಂಬರ್ ಮೊದಲ ವಾರದಲ್ಲಿ ಉಡಾವಣೆ ಮಾಡಲಾಗುವುದು ಎಂದು ಇಸ್ರೋ ಮುಖ್ಯಸ್ಥ ಎಸ್.ಸೋಮನಾಥ್ ಹೇಳಿದ್ದಾರೆ. ಚಂದ್ರಯಾನ-3 ಬಾಹ್ಯಾಕಾಶ ಯೋಜನೆಯ ಲ್ಯಾಂಡರ್ ‘ವಿಕ್ರಮ್’ ಈಗಾಗಲೇ ಚಂದ್ರನ ದಕ್ಷಿಣ ಧ್ರುವ ಪ್ರದೇಶದಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್​ ಆಗಿದ್ದು, ವೈಜ್ಞಾನಿಕ ಸಂಶೋಧನೆಗಳ ಕೆಲಸ ಪ್ರಾರಂಭಿಸಿದೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಇಸ್ರೋ ಮುಖ್ಯಸ್ಥರು, “ಆದಿತ್ಯ ಎಲ್ 1 ಉಪಗ್ರಹ ಸಿದ್ಧವಾಗಿದೆ. ಈಗಾಗಲೇ ಶ್ರೀಹರಿಕೋಟಾವನ್ನು ತಲುಪಿದ್ದು, ಪಿಎಸ್‌ಎಲ್‌ವಿಗೆ ಸಂಪರ್ಕ ಹೊಂದಿದೆ. ಇಸ್ರೋದ ಮುಂದಿನ […]

ಭಾರತದ ಚೆಸ್‌ ಪ್ರತಿಭೆ ಪ್ರಜ್ಞಾನಂದ ಪೋಸ್ಟ್‌: ಸದಾ ಬೆಂಬಲಿಸುವ ಅಮ್ಮನ ಜೊತೆಗೆ

ಚೆನ್ನೈ (ತಮಿಳುನಾಡು) : ಫಿಡೆ ವಿಶ್ವಕಪ್ ಚೆಸ್ ಚಾಂಪಿಯನ್‌ಶಿಪ್ ಟೂರ್ನಿಯ ಫೈನಲ್‌ನಲ್ಲಿ ಬೆಳ್ಳಿ ಪದಕ ಗೆದ್ದ ತಮಿಳುನಾಡಿನ ಆಟಗಾರ ಆರ್.ಪ್ರಜ್ಞಾನಂದ, ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್​ವೊಂದನ್ನು ಮಾಡಿದ್ದು, ಪ್ರೋತ್ಸಾಹ ಹಾಗೂ ಬೆಂಬಲ ನೀಡಿದ ಎಲ್ಲರಿಗೂ, ಅದ್ರಲ್ಲೂ ವಿಶೇಷವಾಗಿ ತಾಯಿ ಆರ್.ನಾಗಲಕ್ಷ್ಮಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ.”ನಾನು ಚೆಸ್ ವಿಶ್ವಕಪ್ ಫೈನಲ್‌ನಲ್ಲಿ ಬೆಳ್ಳಿ ಪದಕ ಗೆದ್ದಿದ್ದೇನೆ. ಮುಂದಿನ ವರ್ಷದ ಸ್ಪರ್ಧೆಗೆ ಅರ್ಹತೆ ಪಡೆದಿದ್ದೇನೆ. ನಿಮ್ಮ ಪ್ರೀತಿ, ಬೆಂಬಲ ಮತ್ತು ಪ್ರಾರ್ಥನೆಗಳಿಗಾಗಿ ನಾನು ಕೃತಜ್ಞ. ಶುಭ ಹಾರೈಸಿದ ಪ್ರತಿಯೊಬ್ಬರಿಗೂ ಧನ್ಯವಾದಗಳು. ವಿಶೇಷವಾಗಿ, […]

ಮಂಗಳೂರಿನ ವಿರುದ್ಧ ಗೆದ್ದು ಸೆಮಿಫೈನಲ್‌ ಪ್ರವೇಶಿಸಿದ ಹಾಲಿ ಚಾಂಪಿಯನ್ ಗುಲ್ಬರ್ಗ : ಮಹಾರಾಜ ಟ್ರೋಫಿ

ಬೆಂಗಳೂರು: ಮಂಗಳೂರು ಡ್ರ್ಯಾಗನ್ಸ್ ವಿರುದ್ಧ 8 ವಿಕೆಟ್‌ಗಳಿಂದ ಜಯ ಸಾಧಿಸುವ ಮೂಲಕ ಹಾಲಿ ಚಾಂಪಿಯನ್ ಗುಲ್ಬರ್ಗಾ ಮಿಸ್ಟಿಕ್ಸ್ ಮಹಾರಾಜ ಟ್ರೋಫಿ ಟೂರ್ನಿಯಲ್ಲಿ ಸೆಮಿಫೈನಲ್ ಪ್ರವೇಶಿಸಿದೆ. ಗುಲ್ಬರ್ಗ ಪರ ಬೌಲಿಂಗ್‌ನಲ್ಲಿ ಅಭಿಲಾಷ್ ಶೆಟ್ಟಿ (3/33) ಬ್ಯಾಟಿಂಗ್‌ನಲ್ಲಿ ಕೆ.ವಿ ಅನೀಶ್ (72*) ಹಾಗೂ ಎಲ್‌.ಆರ್ ಚೇತನ್ (58) ಗೆಲುವಿನ ರೂವಾರಿಗಳಾಗಿ ಮಿಂಚಿದರು. ಹುಬ್ಬಳ್ಳಿ, ಮೈಸೂರು ತಂಡಗಳು ಕ್ವಾಲಿಫೈ ಆದ ನಂತರ ಮೂರನೇ ತಂಡವಾಗಿ ಸೆಮಿಸ್​ಗೆ ಗುಲ್ಬರ್ಗ ಪ್ರವೇಶಿಸಿದೆ. ಸಧ್ಯ ಬೆಂಗಳೂರು ಮತ್ತು ಶಿವಮೊಗ್ಗ ನಡುವೆ ಪಂದ್ಯ ನಡೆಯುತ್ತಿದ್ದು, ಬೆಂಗಳೂರು ಗೆದ್ದಲ್ಲಿ […]

ಏಷ್ಯಾ ದಾಖಲೆ ಮುರಿದ ಭಾರತದ ಪುರುಷರ 4×400 ಮೀ ರಿಲೇ ತಂಡ: ವಿಶ್ವ ಚಾಂಪಿಯನ್‌ಶಿಪ್‌ನ ಫೈನಲ್‌ಗೆ ಅರ್ಹತೆ

ಆಗಸ್ಟ್ 26 ರಂದು ಬುಡಾಪೆಸ್ಟ್‌ನಲ್ಲಿ ನಡೆಯಲಿರುವ ವಿಶ್ವ ಚಾಂಪಿಯನ್‌ಶಿಪ್‌ನ ತನ್ನ ಮೊದಲ ಅಂತಿಮ ಸುತ್ತಿಗೆ ಅರ್ಹತೆ ಪಡೆಯಲು ಭಾರತೀಯ ಪುರುಷರ 4×400 ಮೀ ರಿಲೇ ತಂಡವು 2 ನಿಮಿಷ 59.05 ಸೆಕೆಂಡುಗಳ ಬೆರಗುಗೊಳಿಸುವ ಓಟದಲ್ಲಿ ಏಷ್ಯನ್ ದಾಖಲೆಯನ್ನು ಮುರಿದಿದೆ. ಮುಹಮ್ಮದ್ ಅನಾಸ್ ಯಾಹಿಯಾ, ಅಮೋಜ್ ಜಾಕೋಬ್, ಮುಹಮ್ಮದ್ ಅಜ್ಮಲ್ ವರಿಯಥೋಡಿ ಮತ್ತು ರಾಜೇಶ್ ರಮೇಶ್ ಅವರ ರಿಲೇ ತಂಡವು ಫೈನಲ್ ಪ್ರವೇಶಿಸಿದೆ. ಯು.ಎಸ್.ಎ ಮೊದಲನೆ ಸ್ಥಾನವನ್ನು ಪಡೆದುಕೊಂಡರೆ, ಭಾರತ ಎರಡನೇ ಸ್ಥಾನವನ್ನು ತನ್ನದಾಗಿಸಿಕೊಂಡಿದೆ. ಹಿಂದಿನ ಏಷ್ಯನ್ ದಾಖಲೆ […]

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಿಂದ ರಕ್ಷಾಬಂಧನ ಆಚರಣೆ

ಉಡುಪಿ: ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ, ಉಡುಪಿ ಶಾಖೆ ಇದರ ಸಂಚಾಲಕಿ ಬಿ ಕೆ ಸುಮಾ ಹಾಗೂ ಶಾಖೆಯ ಪ್ರಮುಖರಾದ ಬಿ ಕೆ ರತ್ನಾಕರ್ ಕಿಣಿ, ಬಿ ಕೆ ಮಾಲಿನಿ, ಬಿ ಕೆ ಭಾಸ್ಕರ್, ಬಿ ಕೆ ಅಶ್ವಿನಿ ಹಾಗೂ ಬಿ ಕೆ ದೇವಕಿ ಇವರ ನೇತೃತ್ವದಲ್ಲಿ ಆ. 26ರಂದು ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ರಕ್ಷಾಬಂಧನ ಹಬ್ಬವನ್ನು ರಾಖಿ ಕಟ್ಟುವುದರ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್, ಕೆ.ಪಿ.ಸಿ.ಸಿ […]