NEP ಗೆ ತಿಲಾಂಜಲಿ: ಕರ್ನಾಟಕ ರಾಜ್ಯ ಖಾಸಗಿ ಶಾಲೆಗಳ ಸಂಘದಿಂದ ವಿರೋಧ

ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (NEP) ತೆಗೆದುಹಾಕುವುದಾಗಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚೆಗೆ ಹೇಳಿದ್ದಾರೆ. ಈ ಘೋಷಣೆಗೆ ಪ್ರತಿಪಕ್ಷಗಳಿಂದ ತೀವ್ರ ಟೀಕೆ ವ್ಯಕ್ತವಾಗಿದ್ದು, ಇದೀಗ ಕರ್ನಾಟಕ ರಾಜ್ಯ ಖಾಸಗಿ ಶಾಲೆಗಳ ಸಂಘದಿಂದ ವಿರೋಧ ವ್ಯಕ್ತವಾಗಿದೆ. ಸರಕಾರ ಈ ನೀತಿಯನ್ನು ಕೈಬಿಡುವ ಬದಲು ಬದಲಾವಣೆ ಮಾಡಬೇಕು ಎಂದು ಸಂಘ ಒತ್ತಾಯಿಸಿದೆ. ಖಾಸಗಿ ಶಾಲೆಗಳ ಸಂಘದ ಪ್ರಕಾರ, ಇದು ವಿದ್ಯಾರ್ಥಿಗಳ ದೃಷ್ಠಿಯಿಂದ ‘ಆರೋಗ್ಯಕರ ಬೆಳವಣಿಗೆಯಲ್ಲ’ ಮತ್ತು ಸರ್ಕಾರವು ಈಗಾಗಲೇ ಜಾರಿಗೆ ಬಂದಿರುವಂತೆ ಎನ್‌ಇಪಿಯನ್ನು ಮುಂದುವರಿಸಬೇಕು […]

ರಾಜ್ಯದಲ್ಲಿ ಮತ್ತೆ ವರುಣನ ಪ್ರವೇಶ: ಮೂರು ನಾಲ್ಕು ದಿನ ಮಳೆ ಸಾಧ್ಯತೆ

ಬೆಂಗಳೂರು: ರಾಜಧಾನಿ ಸೇರಿ ಹದಿನಾಲ್ಕು ಜಿಲ್ಲೆಗಳಲ್ಲಿ ಇನ್ನು ಕೆಲವು ದಿನ ಉತ್ತಮ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆಯು ನೀಡಿದೆ. ಮುಂದಿನ ಮೂರು ದಿನ ಕಾಲ ಬೆಂಗಳೂರು ಸೇರಿದಂತೆ ಹದಿನಾಲ್ಕು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಯಲ್ಲೋ ಅಲರ್ಟ್‌ ಘೋಷಿಸಿದೆ. ಕರ್ನಾಟಕದ ಹಲವೆಡೆ ಮುಂದಿನ ನಾಲ್ಕು ದಿನಗಳ ಕಾಲ ಗಂಟೆಗೆ 30 ರಿಂದ 40 ಕಿ.ಮಿ ವೇಗದಲ್ಲಿ ಗಾಳಿ ಬೀಸಲಿದೆ. ಕರಾವಳಿ ಭಾಗದಲ್ಲಿ ಇದು ಇನ್ನೂ ಹೆಚ್ಚಿದ್ದು, 40 ರಿಂದ […]

ಶ್ರೀ ಕೃಷ್ಣ ಜನ್ಮಾಷ್ಟಮಿ ನಿಮಿತ್ತ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ ಸಾರ್ವಜನಿಕರು

ಉಡುಪಿ: ಪರ್ಯಾಯ ಶ್ರೀಕೃಷ್ಣಾಪುರ ಮಠದ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಭೀಮ ಜ್ಯುವೆಲ್ಲರ್ಸ್ ಪ್ರಾಯೋಜಕತ್ವದಲ್ಲಿ ಸ್ಪರ್ಧೆಗಳು ನಡೆಯುತ್ತಿದ್ದು ಪರ್ಯಾಯ ಕೃಷ್ಣಾಪುರ ಮಠಾಧೀಶ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ಉಪಸ್ಥಿತರಿದ್ದು ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿದ ಸ್ಪರ್ಧಾಳುಗಳಿಗೆ ಪ್ರಸಾದವನ್ನಿತ್ತು ಅನುಗ್ರಹಿಸಿದರು. ನಂತರ ಸಾಂಪ್ರದಾಯಿಕ ಚುಕ್ಕಿ ರಂಗವಲ್ಲಿ ಸ್ಪರ್ಧೆ ನಡೆಯಿತು. ಪರ್ಯಾಯ ಮಠದ ದಿವಾನರು, ಕಾರ್ಯಕರ್ತರು ಭಾಗವಹಿಸಿದ್ದರು.

ಯುವಜನೋತ್ಸವ ಅಂಗವಾಗಿ ಜಿಲ್ಲಾ ಮಟ್ಟದ ಮ್ಯಾರಥಾನ್ ಗೆ ಚಾಲನೆ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಯುವ ಸ್ಪಂದನ ಕೇಂದ್ರ, ಯುವ ಸಬಲೀಕರಣ ಸೇವೆಗಳು, ಡಾ. ಜಿ.ಶಂಕರ್ ಸರಕಾರಿ ಪ್ರಥಮ ದರ್ಜೆ ಕಾಲೇಜು ಅಜ್ಜರಕಾಡು ಉಡುಪಿ ಇವರ ರಾಷ್ಟ್ರೀಯ ಸೇವಾ ಯೋಜನೆ ಎಂಡ್ ರೆಡ್ ರಿಬ್ಬನ್ ಕ್ಲಬ್ ಮತ್ತು ಉಡುಪಿ ಜಿಲ್ಲಾ ಅಮೆಚುರ್ ಅಥ್ಲೆಟಿಕ್ಸ್ ಅಸೋಸಿಯೇಷನ್, ಜಿಲ್ಲಾ ಸರ್ವೇಕ್ಷಣಾ ಘಟಕ ಎನ್.ಸಿ.ಡಿ ವಿಭಾಗ ಮತ್ತು […]

ಮಂಗಳೂರು: ಸ್ನೇಹಾಲಯ ನಿರಾಶ್ರಿತ ಮಾನಸಿಕ ಅಸ್ವಸ್ಥರ ಕೇಂದ್ರದ 14 ನೇ ವಾರ್ಷಿಕೋತ್ಸವ ಆಚರಣೆ

ಮಂಗಳೂರು: 2009 ರಲ್ಲಿ ಸಂತ ಮದರ್ ತೆರೇಸಾರವರ ಜನ್ಮದಿನದಂದು ನಿರಾಶ್ರಿತ ಮಾನಸಿಕ ಅಸ್ವಸ್ಥರ ಸೇವೆಗಾಗಿ ಪ್ರಾರಂಭಗೊಂಡ ಸ್ನೇಹಾಲಯ ಚಾರಿಟಬಲ್ ಟ್ರಸ್ಟ್ ತನ್ನ 14 ನೇ ವಾರ್ಷಿಕೋತ್ಸವವನ್ನು ಆಚರಿಸಿತು. ಸಮಾಜಕ್ಕೆ ಸಂಸ್ಥೆಯ ಅತ್ಯುತ್ತಮ ಕೊಡುಗೆಗಳನ್ನು ಪ್ರದರ್ಶಿಸುವ ಕಾರ್ಯಕ್ರಮಗಳ ಜೊತೆಗೆ ಅನುಕಂಪ, ದಯೆ ಮತ್ತು ಸಹಾನುಭೂತಿಯ ತತ್ವಗಳ ಮೇಲೆಸ್ಥಾಪಿತವಾದ ಸ್ನೇಹಾಲಯ ಚಾರಿಟಬಲ್ ಟ್ರಸ್ಟ್ ಬಡವರು ಮತ್ತು ನಿರ್ಗತಿಕರಿಗೆ ಭರವಸೆಯ ದಾರಿದೀಪವಾಗಿ ಹೊರಹೊಮ್ಮಿದೆ. ಕಳೆದ 14 ವರ್ಷಗಳಲ್ಲಿ ಅಸಂಖ್ಯಾತ ನೊಂದವರ ಜೀವನವನ್ನು ಬೆಳಗಿಸಿದೆ. ಈ ಸಂದರ್ಭದಲ್ಲಿ ನೂತನವಾಗಿ ನಿರ್ಮಿಸಲ್ಪಟ್ಟ ಸಂತ ದೇವಸಹಾಯ ಪಿಳ್ಳೈ ಅವರ […]