ಇಂದಿನಿಂದ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟ ಆರಂಭ
ಶಿವಮೊಗ್ಗ: ಮಲೆನಾಡಿಗರ ಬಹುದಿನದ ಕನಸು ಇಂದು ನನಸಾಗುತ್ತಿದೆ. ಇಂದಿನಿಂದ ಶಿವಮೊಗ್ಗದಲ್ಲಿ ಲೋಹದ ಹಕ್ಕಿಗಳ ಹಾರಾಟ ಪ್ರಾರಂಭವಾಗಲಿದೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂದು ಬೆಳಗ್ಗೆ 9:50ಕ್ಕೆ ಇಂಡಿಗೋ 6E 7731 ವಿಮಾನವು ಕುವೆಂಪು ವಿಮಾನ ನಿಲ್ದಾಣಕ್ಕೆ ಸುಮಾರು 11:05ಕ್ಕೆ ಆಗಮಿಸಲಿದೆ. ಈ ಮೂಲಕ ನಾಗರಿಕ ವಿಮಾನ ಹಾರಾಟ ಪ್ರಥಮವಾಗಿ ಪ್ರಾರಂಭವಾಗಲಿದೆ. ಇಂಡಿಗೋ ವಿಮಾನ 6E 77312 ವಿಮಾನವು ಕುವೆಂಪು ವಿಮಾನ ನಿಲ್ದಾಣದಿಂದ 11:25 ಕ್ಕೆ ಹೊರಟು 12:25 ಕ್ಕೆ ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ವಾಪಸ್ […]
4 ವಿಮಾನಗಳಿಗೆ ಹಾನಿ : ರಷ್ಯಾದ ವಿಮಾನ ನಿಲ್ದಾಣದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕೀವ್ : ಉಕ್ರೇನಿಯನ್ ಡ್ರೋನ್‌ಗಳು ರಷ್ಯಾದ ಭೂಪ್ರದೇಶಕ್ಕೆ ಬಂದು ಅಪ್ಪಳಿಸಿವೆ.ರಷ್ಯಾದ ಪ್ಸ್ಕೋವ್ ನಗರದ ವಿಮಾನ ನಿಲ್ದಾಣದ ಮೇಲೆ ಉಕ್ರೇನ್ ಡ್ರೋನ್ ದಾಳಿ ನಡೆದಿದ್ದು, 4 ವಿಮಾನಗಳಿಗೆ ಹಾನಿಯಾಗಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ವರದಿಗಳು ಹೇಳಿವೆ. ಆದರೆ ಈ ಬಗ್ಗೆ ಖಚಿತವಾಗಿಲ್ಲ. ರಷ್ಯಾದ ಬೆಲ್ಗೊರೊಡ್ ಪ್ರದೇಶದ ಗಡಿಯಾಚೆಗೆ ಮತ್ತು ಮಾಸ್ಕೋ ಕಡೆಗೆ ಡ್ರೋನ್‌ಗಳ ಉಡಾವಣೆ ಮತ್ತು ಆಕ್ರಮಣಗಳು ಅತಿಯಾಗಿದೆ. ಈ ಡ್ರೋನ್ ದಾಳಿಯಿಂದಾಗಿ ನಾಲ್ಕು Il-76 ವಿಮಾನಗಳು ಹಾನಿಗೊಳಗಾಗಿವೆ. ದಿಢೀರ್ […]
ತಾಯಿ ಮರಣ ಪ್ರಮಾಣ ಕಡಿಮೆಗೊಳಿಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ
ಉಡುಪಿ: ವೈದ್ಯರು ಹಾಗೂ ರೋಗಿಯ ನಡುವೆ ಮಾನವೀಯ ಅನುಬಂಧ ಹಾಗೂ ಆಶಾ ಕಾರ್ಯಕರ್ತೆಯರಿಗೆ ಸರಿಯಾದ ಮಾರ್ಗದರ್ಶನ ನೀಡಿ, ಅರಿವು ಮೂಡಿಸಿದಲ್ಲಿ ತಾಯಿ ಮರಣ ಪ್ರಮಾಣವನ್ನು ಕಡಿಮೆಗೊಳಿಸಬಹುದು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ನಗರದ ಕೆ.ಎಂ.ಸಿ. ಮಣಿಪಾಲದ ಟಿ.ಎಂ.ಎ. ಪೈ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ ಉಡುಪಿ ಜಿಲ್ಲೆ ಹಾಗೂ ಪ್ರಸೂತಿ ಹಾಗೂ ಸ್ತ್ರೀರೋಗ ವಿಭಾಗ ಮತ್ತು ಸಮುದಾಯ ವೈದ್ಯಕೀಯ ವಿಭಾಗ, […]
ಸೆ.3ರಂದು ಶಿಕ್ಷಕರ ಅರ್ಹತಾ ಪರೀಕ್ಷೆ: ನಿಷೇಧಾಜ್ಞೆ
ಉಡುಪಿ: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಸ್ಪರ್ಧಾತ್ಮಕ ಪರೀಕ್ಷೆಯು ಸೆಪ್ಟಂಬರ್ 3 ರಂದು ಜಿಲ್ಲೆಯ ಒಟ್ಟು 9 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಯು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಹಾಗೂ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗಧಿಪಡಿಸಿದ ಪರೀಕ್ಷಾ ಕೇಂದ್ರಗಳ ಸುತ್ತಲೂ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಹಾಗೂ ಸುತ್ತಲೂ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಸೆಕ್ಷನ್ 144(1) ರಂತೆ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ ವಿದ್ಯಾಕುಮಾರಿ […]
ಗರ್ಭ ಪೂರ್ವ ಹಾಗೂ ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ಹಚ್ಚುವುದು ಕಾನೂನಿನ ಅಡಿಯಲ್ಲಿ ಅಪರಾಧ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ
ಉಡುಪಿ: ಗರ್ಭ ಪೂರ್ವ ಹಾಗೂ ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ಮಾಡುವುದು ಕಾನೂನಿನ ಅಡಿಯಲ್ಲಿ ಅಪರಾಧ. ಇತ್ತೀಚಿನ ದಿನಗಳಲ್ಲಿ ಹೆಣ್ಣು ಹಾಗೂ ಗಂಡು ಮಕ್ಕಳ ಲಿಂಗಾನುಪಾತ ವ್ಯತ್ಯಾಸ ಉಂಟಾಗಿ ಸಮಾಜದಲ್ಲಿ ಗಂಭೀರ ಪರಿಣಾಮ ಉಂಟಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಕ್ಷಮ ಪ್ರಾಧಿಕಾರ ಪಿ.ಸಿ. […]