ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಅನುಜ್ಞಾ ಗೆ ದ್ವಿತೀಯ ಸ್ಥಾನ

ಕುಂದಾಪುರ: ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಶ್ಯಾಮಿಲಿ ಪದವಿ ಪೂರ್ವ ಕಾಲೇಜು ಉಡುಪಿ ಇವರ ಜಂಟಿ ಆಶ್ರಯದಲ್ಲಿ ನಡೆದ ಕರಾಟೆ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅನುಜ್ಞಾ 60 ಕೆ. ಜಿ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾಳೆ. ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
ಶ್ರೀರಾಘವೇಂದ್ರ ಗುರುಸಾರ್ವಭೌಮರ 352 ನೇ ಆರಾಧನಾ ಮಹೋತ್ಸವ

ಉಡುಪಿ: ಶ್ರೀರಾಘವೇಂದ್ರ ಗುರುಸಾರ್ವಭೌಮರ 352 ನೇ ಆರಾಧನಾ ಮಹೋತ್ಸವ ಸಂದರ್ಭದಲ್ಲಿ ಉಡುಪಿ ರಥಬೀದಿಯಲ್ಲಿರುವ ಸರ್ತಿರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ತೀರ್ಥ ಶ್ರೀಪಾದರು ವಿಶೇಷ ಪೂಜೆ ನೆರವೇರಿಸಿದರು. ಶ್ರೀಕೃಷ್ಣಮಠದ ಚಂದ್ರ ಶಾಲೆಯಲ್ಲಿ ಶ್ರೀಕೃಷ್ಣ ದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು.