ಜಿಂಬಾಬ್ವೆ ಕ್ರಿಕೆಟಿಗ ಹೀತ್ ಸ್ಟ್ರೀಕ್ ಕ್ಯಾನ್ಸರ್​ನಿಂದ ಬಳಲಿ ನಿಧನ

ಬುಲವಾಯೊ: ಜಿಂಬಾಬ್ವೆ ಕ್ರಿಕೆಟ್​​ ಪರ ಟೆಸ್ಟ್​​ನಲ್ಲಿ ಶತಕ ವಿಕೆಟ್​ ಗಳಿಸಿದ ದಿಗ್ಗಜ ಆಲ್​ರೌಂಡರ್​ ಆಟಗಾರ ಹೀತ್ ಸ್ಟ್ರೀಕ್ ನಿಧನರಾಗಿದ್ದಾರೆಕ್ಯಾನ್ಸರ್​ನಿಂದ ಬಳಲುತ್ತಿದ್ದ ಅವರು 49ನೇ ವಯಸ್ಸಿಗೆ ಇಹಲೋಕವನ್ನು ತ್ಯಜಿಸಿದ್ದಾರೆ. ಹೀತ್ ಸ್ಟ್ರೀಕ್ ಮರಣದ ಸುದ್ದಿಯಲ್ಲಿ ಅವರ ಪತ್ನಿ ನಾಡಿನ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​​ ಮಾಡುವ ಮೂಲಕ ತಿಳಿಸಿದ್ದಾರೆ. ಜಿಂಬಾಬ್ವೆಯ ಮಾಜಿ ನಾಯಕನ ಅಗಲಿಕೆಗೆ ಕ್ರಿಕೆಟ್​ ಜಗತ್ತು ಕಂಬನಿ ಮಿಡಿದಿದೆ..ಜಿಂಬಾಬ್ವೆ ಕ್ರಿಕೆಟ್​ ತಂಡದ ಮಾಜಿ ನಾಯಕ ಹೀತ್ ಸ್ಟ್ರೀಕ್ ಕ್ಯಾನ್ಸರ್​ನಿಂದಾಗಿ ನಿಧನರಾಗಿದ್ದಾರೆ. ಹೀತ್ ಸ್ಟ್ರೀಕ್ ಪತ್ನಿ ನಾಡಿನ್ ತಮ್ಮ ಫೇಸ್​ […]

ಶಿವಮೊಗ್ಗದಲ್ಲಿ ಶಿಕ್ಷಕಿ ವರ್ಗಾವಣೆ : ವಿದ್ಯಾರ್ಥಿಗಳಿಗೆ ಪಾಕಿಸ್ತಾನಕ್ಕೆ ಹೋಗಿ ಎಂದು ಗದರಿದ ಆರೋಪ

ಶಿವಮೊಗ್ಗ: ವಿದ್ಯಾರ್ಥಿಗಳಿಗೆ ಪಾಕಿಸ್ತಾನಕ್ಕೆ ಹೋಗಿ ಎಂದು‌ ಗದರಿದ್ದಾರೆಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಮೇಲೆ ಶಾಲೆಯ ಶಿಕ್ಷಕಿಯನ್ನು ಬೇರೆಡೆ ವರ್ಗಾವಣೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ನಗರದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ.ವಿದ್ಯಾರ್ಥಿಗಳಿಗೆ ಪಾಕಿಸ್ತಾನಕ್ಕೆ ಹೋಗಿ ಎಂದು ಗದರಿದ್ದಾರೆಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಕಿಯನ್ನು ವರ್ಗಾವಣೆ ಮಾಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಇಲ್ಲಿನ ಶಿಕ್ಷಕಿಯೊಬ್ಬರು ಪಾಠ ಮಾಡುವಾಗ ಪಾಠ ಕೇಳದ ವಿದ್ಯಾರ್ಥಿಗಳಿಗೆ ಸರಿಯಾಗಿ ಪಾಠ ಕೇಳುವಂತೆ ತಿಳಿಸಿದ್ದಾರೆ. ಇದಕ್ಕೆ […]

ಉತ್ತರಕನ್ನಡದ ವಿವಿಧ ಗ್ರಂಥಾಲಯಗಳಿಗೆ ಅರ್ಜಿ ಆಹ್ವಾನ: ಲೈಬ್ರರಿ ಮೇಲ್ವಿಚಾರಕರ ಹುದ್ದೆ..

ಕಾರವಾರ : ಉತ್ತರಕನ್ನಡ ಜಿಲ್ಲೆಯಲ್ಲಿ ವಿವಿಧ ತಾಲೂಕಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಲವು ಗ್ರಂಥಾಲಯ ಮೇಲ್ವಿಚಾರಕರ ಹುದ್ದೆ ಖಾಲಿ ಇದ್ದು, ಇವುಗಳನ್ನು ಭರ್ತಿ ಮಾಡುವ ಸಂಬಂಧ ಖಾಲಿ ಇರುವ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.ಉತ್ತರಕನ್ನಡ ಜಿಲ್ಲೆಯ ವಿವಿಧ ಗ್ರಂಥಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ ಅರ್ಜಿ ನಮೂನೆ ಹಾಗೂ ಮೀಸಲಾತಿ ಮತ್ತು ಸಮತಳ ಮೀಸಲಾತಿ ವಿವರಗಳನ್ನು ಆಯಾ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಪಡೆದುಕೊಳ್ಳುವುದು ಹಾಗೂ ಭರ್ತಿ ಮಾಡಿದ ಅರ್ಜಿಗಳನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕಚೇರಿಗೆ […]

ಇಂಗ್ಲೆಂಡ್​ ಮಣಿಸಿ ದಾಖಲೆ ಬರೆದ ಶ್ರೀಲಂಕಾ ವನಿತೆಯರು

ಲಂಡನ್ (ಯುಕೆ): ಇಂಗ್ಲೆಂಡ್​ ಪ್ರವಾಸದಲ್ಲಿರುವ ಶ್ರೀಲಂಕಾದ ವನಿತೆಯರ ತಂಡ ಆಂಗ್ಲರನ್ನು ಅವರ ನೆಲದಲ್ಲೇ ಮಣಿಸಿ ದಾಖಲೆ ಬರೆದಿದೆ.ಇಂಗ್ಲೆಂಡ್​​ ವಿರುದ್ಧದ ಎರಡನೇ ಟಿ20 ಪಂದ್ಯವನ್ನು ಸಿಂಹಳದ ವನಿತೆಯರ ತಂಡ ಗೆದ್ದುಕೊಂಡಿತು. ಈ ಮೂಲಕ ಆಂಗ್ಲರ ವಿರುದ್ಧ ಟಿ20ಯ ಮೊದಲ ಜಯ ಇದಾಗಿದೆ. ಇದು 11ನೇ ಬಾರಿಯ ಇಂಗ್ಲೆಂಡ್​ ಮತ್ತು ಲಂಕಾ ಮುಖಾಮಖಿಯಾಗಿದ್ದವು. ಇದರಲ್ಲಿ 40 ಬಾಲ್​ ಉಳಿಸಿಕೊಂಡು ಜಯ ದಾಖಲಿಸಿದೆ. ಉಭಯ ತಂಡಗಳ ನಡುವೆ ನಡೆಯುತ್ತಿರುವ ಮೂರು ಪಂದ್ಯಗಳ ಸರಣಿ 1-1ರಲ್ಲಿ ಸಮಬಲ ಸಾಧಿಸಿವೆ ಇಂಗ್ಲೆಂಡ್​ ವನಿತೆಯರ ತಂಡವನ್ನು […]

6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ, ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ..

ಬೆಂಗಳೂರು: ರಾಜ್ಯದ ಉತ್ತರ ಒಳನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 7ನೇ ತಾರೀಖಿನವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಈ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಅಲರ್ಟ್ ನೀಡಿದೆ. ಮುಖ್ಯವಾಗಿ ಉತ್ತರ ಒಳನಾಡಿನ ಆರು ಜಿಲ್ಲೆಗಳಿಗೆ ಮುಂದಿನ 24 ಗಂಟೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಸೆ. 3 ಮತ್ತು 4 ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೀದರ್, ಕಲಬುರಗಿ ಜಿಲ್ಲೆಗಳಿಗೆ ಇಂದು […]