ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ಸುಲ್ಕೋಡ್ ಯೋಜನೆಗೆ ವಿರೋಧ ವ್ಯಕ್ತಪಡಿಸಿದ ಗಡಿ ಭಾಗದ ಗ್ರಾಮಸ್ಥರು

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದ ನೂರಾರು ಗ್ರಾಮಸ್ಥರು ಮಹಾರಾಷ್ಟ್ರದ ಗಡಿ ಪ್ರದೇಶದಲ್ಲಿ ನೀರಾವರಿ ಯೋಜನೆಯನ್ನು ಕೈಗೆತ್ತಿಕೊಳ್ಳುವ ಪ್ರಸ್ತಾಪವನ್ನು ವಿರೋಧಿಸಿದರು. ಮಹಾರಾಷ್ಟ್ರದ ಗಡಿ ಭಾಗದಲ್ಲಿರುವ ಸಾಂಗ್ಲಿ, ಮೀರಜ್ ಮತ್ತು ಇಚಲಕರಂಜಿ ಜಿಲ್ಲೆಯ ಹಳ್ಳಿಗಳು ಮತ್ತು ಪಟ್ಟಣಗಳ ನಿವಾಸಿಗಳು ಮೂಲಭೂತ ಸೌಕರ್ಯಗಳನ್ನು ಪಡೆಯುವ ವಿಷಯದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿ ಗ್ರಾಮಗಳನ್ನು ಕರ್ನಾಟಕಕ್ಕೆ ವಿಲೀನಗೊಳಿಸಬೇಕೆಂದು ಒತ್ತಾಯಿಸಿದರು. ಅಸಮಾಧಾನದ ನಡುವೆ, ಮಹಾರಾಷ್ಟ್ರ ಸರ್ಕಾರವು ಸುಲ್ಕುಡ್ ಗ್ರಾಮದಲ್ಲಿ ದೂಧ ಗಂಗಾ ನದಿಗೆ ಬ್ಯಾರೇಜ್ ನಿರ್ಮಿಸುವ ಮೂಲಕ ಇಚಲಕರಂಜಿ ಜಿಲ್ಲೆಗೆ ನೀರು ಹರಿಸಲು […]
ಬೆಳ್ತಂಗಡಿ: ಸೌಜನ್ಯ ಪರ ನ್ಯಾಯಕ್ಕಾಗಿ ನಡೆದ ಹೋರಾಟದಲ್ಲಿ ಸಹಸ್ರಾರು ಜನ ಭಾಗಿ; ಸೆರಗೊಡ್ಡಿ ಬೇಡಿಕೆ ಇಟ್ಟ ದುಃಖತಪ್ತ ತಾಯಿ

ಬೆಳ್ತಂಗಡಿ: ಪ್ರಜಾಪ್ರಭುತ್ವ ವೇದಿಕೆ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ನೇತೃತ್ವದಲ್ಲಿ ಸೌಜನ್ಯ ಪರ ನ್ಯಾಯಕ್ಕಾಗಿ ನಡೆದ ಸಮಾವೇಶದಲ್ಲಿ ಸಹಸ್ರಾರು ಜನರು ಭಾಗವಹಿಸಿ ನ್ಯಾಯಕ್ಕಾಗಿ ಆಗ್ರಹಿಸಿದರು. ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ನೇತೃತ್ವದಲ್ಲಿ ಭಾನುವಾರದಂದು ನಡೆದ ಸಮಾವೇಶದಲ್ಲಿ ವಿವಿಧ ಸಂಘಟನೆಗಳ ಸದಸ್ಯರು ಭಾಗವಹಿಸಿ ತಪ್ಪಿತಸ್ಥರಿಗೆ ಶಿಕ್ಷೆ ದೊರಕಿಸುವಂತೆ ಆಗ್ರಹ ಮಾಡಿದರು. ಈ ಸಂದರ್ಭದಲ್ಲಿ ಸೌಜನ್ಯ ತಾಯಿ ಕುಸುಮಾವತಿ ನೆರದವರಲ್ಲಿ ಸೆರಗೊಡ್ಡಿ ನ್ಯಾಯ ಬೇಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ನನ್ನ ಮಗಳಿಗೆ […]