ಕಾಪು: ನೂತನ ಠಾಣಾಧಿಕಾರಿ ಅಬ್ದುಲ್ ಖಾದರ್ ಅವರಿಗೆ ಅಭಿನಂದನೆ

ಕಾಪು: ಕಾಪು ಪೊಲೀಸ್ ನೂತನ ಠಾಣಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಅಬ್ದುಲ್ ಖಾದರ್ ಇವರನ್ನು ಕಾಪು ಸಮಾಜ ಸೇವಾ ವೇದಿಕೆ ಪದಾಧಿಕಾರಿಗಳಾದ ಸಮಾಜ ಸೇವೆಯಲ್ಲಿ ರಾಷ್ಟ್ರಿಯ ಪ್ರಶಸ್ತಿ ಪಡೆದ ರೊ. ಫಾರೂಕ್ ಚಂದ್ರನಗರ, ರೊ. ದಿವಾಕರ ಬಿ ಶೆಟ್ಟಿ ಕಳತ್ತೂರು, ರೊ. ದಿವಾಕರ ಡಿ ಶೆಟ್ಟಿ ಅಭಿನಂದಿಸಿ ಸನ್ಮಾನಿಸಿದರು. ಕಾಪು ಕ್ರೈಂ ಠಾಣಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಪುರುಷೋತ್ತಮ್ ಇವರನ್ನು ಕೂಡ ಅಭಿನಂದಿಸಿ ಸನ್ಮಾನಿಸಲಾಯಿತು.
ಪದ್ಮಶ್ರೀ ಮಂಜಮ್ಮ ಜೋಗತಿ ಬದುಕೇ ಒಂದು ಜೀವನ ಪಾಠ: ಡಾ. ತಲ್ಲೂರು ಶಿವರಾಮ ಶೆಟ್ಟಿ

ಉಡುಪಿ: ತೃತೀಯ ಲಿಂಗಿಯಾಗಿ ನಿರಂತರ ಸಂಘರ್ಷ ಜೀವನ ನಡೆಸಿ, ತನ್ನಂತಹ ಶೋಷಿತರ ಧ್ವನಿಯಾದ ಪದ್ಮಶ್ರೀ ಪುರಸ್ಕೃತೆ ಡಾ.ಮಂಜಮ್ಮ ಜೋಗತಿ ಅವರ ಬದುಕೇ ಅವರಂತಹ ತೊಳಲಾಟದ ಮಂದಿಗೆ ಜೀವನ ಪಾಠವಾಗಿದೆ ಎಂದು ತಲ್ಲೂರು ಫ್ಯಾಮಿಲಿ ಟ್ರಸ್ಟ್ನ ಪ್ರವರ್ತಕ ಹಾಗೂ ರಂಗಭೂಮಿ ಉಡುಪಿ ಇದರ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಉಡುಪಿಯ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ತಲ್ಲೂರು ಫ್ಯಾಮಿಲಿ ಟ್ರಸ್ಟ್, ಕರ್ನಾಟಕ ಜಾನಪದ ಪರಿಷತ್ತು ಉಡುಪಿ ಜಿಲ್ಲಾ ಘಟಕ, ಜಾನಪದ ಸಾಹಿತ್ಯ ಸಾಂಸ್ಕೃತಿಕ ಪ್ರತಿಷ್ಠಾನ […]
ಕಾರ್ಕಳ: ಬಹುಮುಖ ಪ್ರತಿಭೆಯ ಶಿಕ್ಷಕಿ ಸೀಮಾ ಕಾಮತ್ ಅವರಿಗೆ ಚಾಣಕ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

ಕಾರ್ಕಳ: ನಿವೃತ್ತ ಶಿಕ್ಷಕ ಹಿರಿಯ ಸಾಹಿತಿ, ಯಕ್ಷಗಾನ ಕಲಾವಿದ, ಹರಿದಾಸ, ಜಿನದಾಸ, ತಾಳಮದ್ದಳೆ ಅರ್ಥದಾರಿ, ನಾಟಕಕಾರ, ಪ್ರಸಂಗಕರ್ತ ಕೀರ್ತಿಶೇಷ ಅಂಬಾತನಯ ಮುದ್ರಾಡಿಯವರ ಸ್ಮರಣಾರ್ಥ ಚಾಣಕ್ಯ ಎಜ್ಯುಕೇಶನ್ ಮತ್ತು ಕಲ್ಚರಲ್ ಅಕಾಡೆಮಿ ಹೆಬ್ರಿ ಇದರ ವತಿಯಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ನೀಡಲಾಗುವ ಉಡುಪಿ ಜಿಲ್ಲಾ ಮಟ್ಟದ ಚಾಣಕ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಈ ಬಾರಿ ಕಾರ್ಕಳ ಶ್ರೀ ಭುವನೇಂದ್ರ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಬಹುಮುಖ ಪ್ರತಿಭೆ ಸೀಮಾ ಕಾಮತ್ ಅವರು ಆಯ್ಕೆಯಾಗಿದ್ದಾರೆ. ಬಹುಮುಖ ಪ್ರತಿಭೆಯ ಶಿಕ್ಷಕಿ ಸೀಮಾ […]
ಉಡುಪಿ ಎಸ್ಪಿ ಅಕ್ಷಯ್ ಹಾಕೆ ಮಚ್ಚಿಂದ್ರ ವರ್ಗಾವಣೆ: ನೂತನ ಎಸ್ಪಿಯಾಗಿ ಡಾ. ಅರುಣ್ ಕೆ

ಉಡುಪಿ: ರಾಜ್ಯ ಸರ್ಕಾರ ಸೋಮವಾರ ರಾತ್ರಿ ಹಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಉಡುಪಿಯ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಮಚ್ಚೀಂದ್ರ ಅವರನ್ನು ವರ್ಗಾವಣೆ ಮಾಡಿದ್ದು, ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಲ್ಬುರ್ಗಿ ಪೊಲೀಸ್ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಡಾ. ಅರುಣ್ ಕೆ ಅವರನ್ನು ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಿಸಿದೆ.