ಲಕ್ನೋ: ಧಾರ್ಮಿಕ ಭಾವನೆಗಳನ್ನು ಕೆರಳಿಸಿದ ಆರೋಪ; ಉದಯನಿಧಿ ಸ್ಟಾಲಿನ್ ಮತ್ತು ಪ್ರಿಯಾಂಕ್ ಖರ್ಗೆ ವಿರುದ್ಧ ಎಫ್‌ಐಆರ್
ಲಕ್ನೋ: ಧಾರ್ಮಿಕ ಭಾವನೆಗಳನ್ನು ಕೆರಳಿಸಿದ ಆರೋಪದ ಮೇಲೆ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಸನಾತನ ಧರ್ಮವನ್ನು ನಿರ್ಮೂಲನೆ ಮಾಡಲು ಸ್ಟಾಲಿನ್ ಕರೆ ನೀಡಿದ್ದಕ್ಕಾಗಿ ಮತ್ತು ಅವರ ಹೇಳಿಕೆಯನ್ನು ಬೆಂಬಲಿಸಿದ್ದಕ್ಕಾಗಿ ಪ್ರಿಯಾಂಕ್ ಖರ್ಗೆ ವಿರುದ್ದ ಕೇಸು ದಾಖಲಿಸಲಾಗಿದೆ. ಮಂಗಳವಾರ ಉತ್ತರ ಪ್ರದೇಶದ ರಾಂಪುರದ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಐಪಿಸಿಯ ಸೆಕ್ಷನ್ 295 […]
ಚಂದಮಾಮನ ಮೇಲೆ ತಣ್ಣನೆ ಕುಳಿತಿರುವ ವಿಕ್ರಮನ ಚಿತ್ರ ಸೆರೆಹಿಡಿದು ಹಂಚಿಕೊಂಡ NASA!!
ವಾಷಿಗ್ಟಂನ್: ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾದ ಲೂನಾರ್ ರೆಕಾನೈಸೆನ್ಸ್ ಆರ್ಬಿಟರ್ (LRO) ಇತ್ತೀಚೆಗೆ ಭಾರತದ ಮಹತ್ವಾಕಾಂಕ್ಷಿ ಮಿಷನ್ ಚಂದ್ರಯಾನ-3 ರ ವಿಕ್ರಮ್ ಲ್ಯಾಂಡರ್‌ನ ಛಾಯಾಚಿತ್ರವನ್ನು ಸೆರೆಹಿಡಿದಿದೆ. ವಿಕ್ರಮ್ ಚಂದ್ರನ ದಕ್ಷಿಣ ಧ್ರುವದ ಬಳಿ ಯಶಸ್ವಿಯಾಗಿ ಸ್ಪರ್ಶಿಸಿದ ಮೊದಲ ಬಾಹ್ಯಾಕಾಶ ನೌಕೆಯಾಗಿದ್ದು, ಆಗಸ್ಟ್ 27 ರಂದು ಈ ಚಿತ್ರವನ್ನು LRO ತೆಗೆದಿದೆ. ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ Xನಲ್ಲಿ ಚಿತ್ರವನ್ನು ಹಂಚಿಕೊಂಡ ಬಾಹ್ಯಾಕಾಶ ಸಂಸ್ಥೆ NASA, “ಎಲ್‌ಆರ್‌ಒ ಬಾಹ್ಯಾಕಾಶ ನೌಕೆ ಇತ್ತೀಚೆಗೆ ಚಂದ್ರನ ಮೇಲ್ಮೈಯಲ್ಲಿ ಚಂದ್ರಯಾನ -3 ಲ್ಯಾಂಡರ್ ಅನ್ನು […]
ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ಅನುವು ನೀಡಿದ ಜಿಲ್ಲಾಡಳಿತ
ಉಡುಪಿ: ರಾ.ಹೆದ್ದಾರಿ 169 ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ, ಹೊರಡಿಸಿದ್ದ ಆದೇಶವನ್ನು ಹಿಂಪಡೆದು, ಭಾರೀ ವಾಹನಗಳ ಸಂಚಾರಕ್ಕೆ ಸದ್ರಿ ಮಾರ್ಗದಲ್ಲಿ ಅನುವು ಮಾಡಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಆದೇಶಿಸಿದ್ದಾರೆ.
ಉದಯನಿಧಿ ಹೇಳಿಕೆಯಿಂದ ಐ.ಎನ್.ಡಿ.ಐ.ಎ ಒಕ್ಕೂಟದ ಹಿಂದೂ ವಿರೋಧಿ ನೀತಿಯ ಅನಾವರಣ: ಯಶ್ ಪಾಲ್ ಸುವರ್ಣ
ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಪುತ್ರ, ಸಚಿವ ಉದಯನಿಧಿ ಸ್ಟಾಲಿನ್ ಭಾರತದ ಸಾಮಾಜಿಕ ವ್ಯವಸ್ಥೆಯ ಹೆಮ್ಮೆಯ ಪ್ರತೀಕವಾದ ಸನಾತನ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಸಮಸ್ತ ಹಿಂದೂ ಸಮಾಜಕ್ಕೆ ಅವಮಾನಿಸುವ ಮೂಲಕ ಐ.ಎನ್.ಡಿ.ಐ.ಎ ವಿಪಕ್ಷಗಳ ಒಕ್ಕೂಟದ ಹಿಂದೂ ವಿರೋಧಿ ನಿಲುವನ್ನು ಬಹಿರಂಗಪಡಿಸಿದ್ದಾರೆ. ತನ್ನ ಓಟ್ ಬ್ಯಾಂಕ್ ರಾಜಕೀಯಕ್ಕಾಗಿ ನಿರ್ದಿಷ್ಟ ಸಮುದಾಯದ ಓಲೈಕೆಗಾಗಿ ಹಿಂದೂ ದ್ವೇಷಿ ಹೇಳಿಕೆಯ ಮೂಲಕ ಸ್ಟಾಲಿನ್ ಸನಾತನ ಧರ್ಮವನ್ನು ಅಪಮಾನಿಸಿದ್ದಾರೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಕಿಡಿ ಕಾರಿದ್ದಾರೆ. ಈ ಹಿಂದೆ […]
ಮಣಿಪಾಲ: ಕೆ.ಎಂ.ಸಿ ಆಸ್ಪತ್ರೆಯಲ್ಲಿ ಪೆರೋರಲ್ ಎಂಡೋಸ್ಕೋಪಿಕ್ ಮೈಯೋಟೊಮಿ- ಎಂಡೋಸ್ಕೋಪಿಕ್ ಸರ್ಜರಿ ಕಾರ್ಯಾಗಾರ
ಮಣಿಪಾಲ: ಕೆ.ಎಂ.ಸಿ ಯ ಗ್ಯಾಸ್ಟ್ರೋಎಂಟರಾಲಜಿ ವಿಭಾಗವು ಸೆ. 2 ಮತ್ತು 3 ರಂದು ಎಂಡೋಸ್ಕೋಪಿಕ್ ಸರ್ಜರಿ-ಪೆರೋರಲ್ ಎಂಡೋಸ್ಕೋಪಿಕ್ ಮೈಯೋಟೊಮಿ ಕಾರ್ಯಾಗಾರವನ್ನು ಆಯೋಜಿಸಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಸುಧಾರಿತ ಎಂಡೋಸ್ಕೋಪಿಕ್ ಕಾರ್ಯವಿಧಾನಕ್ಕಾಗಿ ಮೊದಲ ತರಬೇತಿ ಕಾರ್ಯಾಗಾರವಾಗಿತ್ತು. ಅಚಾಲಾಸಿಯಾ ಕಾರ್ಡಿಯಾ, ಆಹಾರ ಸೇವಿಸುವಲ್ಲಿ ತೊಂದರೆ, ಅನ್ನನಾಳದ ಅಸ್ವಸ್ಥತೆಯನ್ನು ಪೆರೋರಲ್ ಎಂಡೋಸ್ಕೋಪಿಕ್ ಮೈಯೋಟೊಮಿ ಎಂಬ ಕಡಿಮೆ ಛೇದನದ, ಗಾಯ ರಹಿತ ಎಂಡೋಸ್ಕೋಪಿಕ್ ಶಸ್ತ್ರಚಿಕಿತ್ಸೆಯಿಂದ ನಿರ್ವಹಿಸಬಹುದು. ಈ ಕಾರ್ಯವಿಧಾನವು ಅಂದುಕೊಂಡಂತೆ ಯಶಸ್ವಿಯಾಗಿ ನಡೆದರೆ ರೋಗಿಯನ್ನು 48 ಗಂಟೆಗಳ ಒಳಗೆ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುತ್ತದೆ. ಬೆಂಗಳೂರು, […]