ಸೌಜನ್ಯ ಪ್ರಕರಣ: ಹೊಸದಾಗಿ ತನಿಖೆ ನಡೆಸುವಂತೆ ಕೋರಿರುವ ಪಿಐಎಲ್ ವಿಚಾರಣೆಗೆ ಹೈಕೋರ್ಟ್ ನಕಾರ

ಬೆಂಗಳೂರು: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಹೊಸ ತನಿಖೆ ಅಥವಾ ಮರು ತನಿಖೆಗೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ನಿರಾಕರಿಸಿದೆ. ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಕ್ರಿಮಿನಲ್ ಪ್ರೊಸೀಜರ್ ಕೋಡ್ (ಸಿಆರ್‌ಪಿಸಿ) ಅಡಿಯಲ್ಲಿ ಬಾಧಿತ ಪಕ್ಷ ಪರಿಣಾಮಕಾರಿ ಪರಿಹಾರವನ್ನು ಪಡೆದುಕೊಂಡಿದೆ ಮತ್ತು ಅದು ಸಾರ್ವಜನಿಕ ಗ್ರಹಿಕೆಯಂತೆ ಹೋಗಲು ಸಾಧ್ಯವಿಲ್ಲ ಎಂದು ಗಮನಿಸಿತು. ಬೆಂಗಳೂರಿನ ಗಿರೀಶ್ ಭಾರದ್ವಾಜ್, ಬೆಳ್ತಂಗಡಿಯ […]

ಕಾಪು: ಚಂದ್ರನಗರ ಬಟರ್‌ ಫ್ಲೈ ಗೆಸ್ಟ್ ಹೌಸ್ ಗೆ ಬೆಂಗಳೂರಿನ ಚಿತ್ರತಂಡದಿಂದ ಭೇಟಿ

ಕಾಪು ಸಮೀಪದ ಕಳತ್ತೂರು ಚಂದ್ರನಗರದಲ್ಲಿರುವ ಬಟರ್‌ ಫ್ಲೈ ಗೆಸ್ಟ್ ಹೌಸ್‌ಗೆ ಬೆಂಗಳೂರಿನ ಕನ್ನಡ ಚಿತ್ರರಂಗದ ತಂಡದವರು ಭೇಟಿ ನೀಡಿ ಶುಭಹಾರೈಸಿದರು. ಕನ್ನಡ ಚಿತ್ರದ ಚಿತ್ರೀಕರಣಕ್ಕೆ ಬಂದವರು ಕಳತ್ತೂರಿನ ಚಂದ್ರನಗರದ ಬಟರ್‌ ಫ್ಲೈ ಗೆಸ್ಟ್ ಹೌಸ್‌ಗೆ ಭೇಟಿ ನೀಡಿದರು. ಈ ಚಿತ್ರ ತಂಡದಲ್ಲಿ ಚಿತ್ರದ ನಾಯಕ ಶ್ರೀನಗರ ಕಿಟ್ಟಿ, ಕಥಾ ನಾಯಕಿ ಮೇಘನಾ ರಾಜ್, ಗುರು ಪ್ರಸಾದ್ ಹೆಗ್ಡೆ ಬೆಂಗಳೂರು, ಅರುಣ್ ಸಾಗರ್ ಮುಂತಾದವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಜನಸಂಪರ್ಕ್ ಜನಸೇವಾ ವೇದಿಕೆ ಅಧ್ಯಕ್ಷ ದಿವಾಕರ.ಬಿ.ಶೆಟ್ಟಿ ಹಾಗೂ ಬಟರ್ […]

ನನ್ನಜ್ಜ ಲೂವಿಸ್ ಕಣ್ಣಪ್ಪ ನನ್ನ ಬರವಣಿಗೆಗೆ ಪ್ರಥಮ ಪ್ರೇರಣೆ: ಶ್ಯಾಮಲಾ ಮಾಧವ

ಮಂಗಳೂರು: ನಾವೆಲ್ಲರೂ ಕಾನಾಟಿ (ಅರ್ಥಾತ್ ದಪ್ಪ ಕನ್ನಡಕ ಧರಿಸುವ) ಅಜ್ಜ ಎಂದೇ ಕರೆಯುತ್ತಿದ್ದ ನಮ್ಮಜ್ಜ ಲೂವಿಸ್ ಕಣ್ಣಪ್ಪನವರಿಂದಲೇ ನನ್ನ ಬರವಣಿಗೆಗೆ ಮೊದಲ ಪ್ರೇರಣೆ ದೊರೆಯಿತು. ಸ್ವಾತಂತ್ಯ ಪೂರ್ವದಲ್ಲಿ ಮದ್ರಾಸ್‌ವಿದ್ಯಾನಿಲಯದಿಂದ ಇಂಗ್ಲಿಷ್ ಸಾಹಿತ್ಯದಲ್ಲಿ ಎಮ್.ಎ. ಮತ್ತು ಎಲ್. ಟಿ. ಪದವಿ ಪಡೆದಿದ್ದ ಲೂವಿಸ್ ಕಣ್ಣಪ್ಪನವರು ಮಂಗಳೂರು ಹಂಪನಕಟ್ಟೆಯ ಸರಕಾರಿ ಕಾಲೇಜಿನಲ್ಲಿ (ಇಂದಿನ ವಿಶ್ವವಿದ್ಯಾನಿಲಯ ಕಾಲೇಜು) ಪ್ರಾಂಶುಪಾಲರಾಗಿ, ನಂತರ ದಕ್ಷಿಣ ಕನ್ನಡ ಜಿಲ್ಲೆಯ ಶಿಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಗಣಿತ ಹಾಗೂ ಲ್ಯಾಟಿನ್ ಭಾಷೆಯಲ್ಲಿ ಸಂತ ಅಲೋಶಿಯಸ್ ಕಾಲೇಜಿಗೆ ಪ್ರಪ್ರಥಮ ಬಾರಿ  […]

ಐತಿಹಾಸಿಕ ಭಾರತ-ಮಧ್ಯಪ್ರಾಚ್ಯ-ಯುರೋಪ್ ಆರ್ಥಿಕ ಕಾರಿಡಾರ್ ಗೆ ಯುಎಸ್ ಬೆಂಬಲ: ರೈಲು-ಜಲಮಾರ್ಗದ ಮೂಲಕ ಸಂಪರ್ಕ

ನವದೆಹಲಿ: ಯುಎಸ್ ಅಧ್ಯಕ್ಷ ಜೋ ಬೈಡನ್ ಮತ್ತು G20 ಪಾಲುದಾರರು ಭಾರತವನ್ನು ಮಧ್ಯಪ್ರಾಚ್ಯ ಮತ್ತು ಅಂತಿಮವಾಗಿ ಯುರೋಪ್‌ನೊಂದಿಗೆ ಸಂಪರ್ಕಿಸುವ ರೈಲು ಮತ್ತು ಶಿಪ್ಪಿಂಗ್ ಕಾರಿಡಾರ್‌ಗಾಗಿ ಶನಿವಾರ ಯೋಜನೆಗಳನ್ನು ರೂಪಿಸಲು ಯೋಜಿಸಿದ್ದಾರೆ. ಇದು ಚೀನಾದ ಬೆಲ್ಟ್ ಎಂಡ್ ರೋಡ್ ಯೋಜನೆಯನ್ನು ಎದುರಿಸಲು ಅಮೇರಿಕಾ ಸಂಯುಕ್ತ ಸಂಸ್ಥಾನದ ನಿರ್ಣಾಯಕ ನಿರ್ಧಾರವಾಗಿದೆ ಎನ್ನಲಾಗಿದೆ. ಅಧ್ಯಕ್ಷ ಬೈಡೆನ್ ಮತ್ತು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಸುಮಾರು ಒಂದು ಗಂಟೆಗಳ ಕಾಲ ಮಾತನಾಡಿದರು ಮತ್ತು ಅವರ ಚರ್ಚೆಯು ಮೂಲಸೌಕರ್ಯ ಮತ್ತು ಸಂವಹನಗಳಿಗೆ ಸಂಬಂಧಿಸಿದ “ಪ್ರಮುಖ […]

ಸಣ್ಣ ನೀರಾವರಿ ಯೋಜನೆ ಶೀಘ್ರ ಪೂರ್ಣಗೊಳಿಸಿ ಅಂತರ್ಜಲ ವೃದ್ಧಿಗೆ ಆದ್ಯತೆ: ಸಚಿವ ಬೋಸರಾಜು

ಉಡುಪಿ: ರಾಜ್ಯಾದ್ಯಂತ ಸಣ್ಣ ನೀರಾವರಿ ಇಲಾಖೆಯ ಮೂಲಕ ಕೈಗೊಂಡಿರುವ 15000 ಕೋಟಿ ರೂ. ಮೊತ್ತದ ಕಾಮಗಾರಿಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಿ ರಾಜ್ಯದಲ್ಲಿ ಅಂರ್ತಜಲ ವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದು ರಾಜ್ಯ ಸಣ್ಣ ನೀರಾವರಿ ಇಲಾಖೆ ಸಚಿವ ಬೋಸರಾಜು ಹೇಳಿದರು. ಅವರು ಶುಕ್ರವಾರ ಉಡುಪಿ ಜಿಲ್ಲೆಯ ಹೆಬ್ರಿ ಮತ್ತು ಶಿವಪುರದಲ್ಲಿ ಕಿಂಡಿ ಅಣೆಕಟ್ಟುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದರು. ರಾಜ್ಯದಲ್ಲಿ ಅಂತರ್ಜಲ ವೃದ್ದಿಗಾಗಿ ಸಣ್ಣ ನೀರಾವರಿ ಇಲಾಖೆಯಿಂದ ಚೆಕ್ ಡ್ಯಾಂ ನಿರ್ಮಾಣ, ಕಿಂಡಿ ಅಣೆಕಟ್ಟು ನಿರ್ಮಾಣ, ಕೆರೆಗಳಿಗೆ […]