ಮೊರಾಕೊದಲ್ಲಿ 6.8 ತೀವ್ರತೆಯ ಪ್ರಬಲ ಭೂಕಂಪ: 300 ಜನ ಸಾವನ್ನಪ್ಪಿರುವ ಅಂದಾಜು

ಶುಕ್ರವಾರ ತಡರಾತ್ರಿ ಮೊರಾಕೊದಲ್ಲಿ 6.8 ತೀವ್ರತೆಯ ಪ್ರಬಲವಾದ ಅಪ್ಪಳಿಸಿದ ನಂತರ ಸುಮಾರು 300 ಜನರು ಸಾವನ್ನಪ್ಪಿದ್ದಾರೆ ಎಂದು ದೇಶದ ಆಂತರಿಕ ಸಚಿವಾಲಯ ತಿಳಿಸಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಅಲ್ ಜಜೀರಾ ಸುದ್ದಿ ಸಂಸ್ಥೆಯ ಪ್ರಕಾರ, ಭೂಕಂಪದ ಕೇಂದ್ರವು ಮರ್ರೆಕೇಶ್‌ನ ಪಶ್ಚಿಮಕ್ಕೆ 72 ಕಿಲೋಮೀಟರ್ ದೂರದಲ್ಲಿದ್ದು, ಇದು ಇಲ್ಲಿನ ಪ್ರಮುಖ ಆರ್ಥಿಕ ಕೇಂದ್ರವಾಗಿದೆ. UNESCO ವಿಶ್ವ ಪರಂಪರೆಯ ತಾಣವಾಗಿರುವ ಹಳೆಯ ನಗರವನ್ನು ಸುತ್ತುವರೆದಿರುವ ಕೆಂಪು ಗೋಡೆಗಳು ಸಹ ಹಾನಿಗೊಳಗಾಗಿವೆ. #WATCH : Moment of […]
ಜಿಲ್ಲೆಯಾದ್ಯಂತ ಸಂಭ್ರಮದ ಮೋಂತಿ ಫೆಸ್ಟ್ ಆಚರಣೆ

ಉಡುಪಿ: ಪೂಜ್ಯ ವರ್ಜಿನ್ ಮೇರಿ (ಮೋಂತಿ ಫೆಸ್ಟ್) ಜನ್ಮದಿನವನ್ನು ಸೆಪ್ಟೆಂಬರ್ 8 ರಂದು ಜಿಲ್ಲೆಯಾದ್ಯಂತ ಶ್ರದ್ಧಾಭಕ್ತಿ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಕರಾವಳಿ ಜಿಲ್ಲೆಗಳಲ್ಲಿ ವಾಸಿಸುವ ಕೊಂಕಣಿ ಮಾತನಾಡುವ ಕ್ಯಾಥೋಲಿಕ್ ಸಮುದಾಯದಲ್ಲಿ ಸೆಪ್ಟೆಂಬರ್ 8 ವಿಶೇಷ ಮಹತ್ವವನ್ನು ಹೊಂದಿದೆ ಏಕೆಂದರೆ ಈ ದಿನವನ್ನು ‘ಹೊಸ ಅಕ್ಕಿ’ ದಿನವಾಗಿಯೂ ಆಚರಿಸಲಾಗುತ್ತದೆ. ಕ್ರಿಶ್ಚಿಯನ್ನರು ತಮ್ಮ ತಮ್ಮ ಚರ್ಚ್‌ಗಳಲ್ಲಿ ಒಟ್ಟು ಸೇರಿ ಪ್ರಾರ್ಥನೆ ಸಲ್ಲಿಸಿದರು. ಮಕ್ಕಳು ಮೇರಿ ಮಾತೆಗೆ ಹೂಗಳನ್ನು ಅರ್ಪಿಸಿದರು. ಚರ್ಚ್‌ನ ಧರ್ಮಗುರುಗಳು ಹೊಸ ಭತ್ತವನ್ನು ಆಶೀರ್ವದಿಸಿ ಚರ್ಚ್‌ನೊಳಗೆ ಮೆರವಣಿಗೆಯಲ್ಲಿ ಕೊಂಡೊಯ್ದರು. […]
ಶ್ರೀಕೃಷ್ಣ ಜನ್ಮಾಷ್ಟಮಿ ಸಮಾರೋಪ ಸಮಾರಂಭ; ಸ್ಪರ್ಧಿಗಳಿಗೆ ಬಹುಮಾನ ವಿತರಣೆ

ಉಡುಪಿ: ಶ್ರೀಕೃಷ್ಣ ಜನ್ಮಾಷ್ಟಮಿ ಅಷ್ಟದಿನೋತ್ಸವದ ಸಮಾರೋಪ ಸಮಾರಂಭವು ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ನಡೆಯಿತು. ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರತೀರ್ಥ ಸ್ವಾಮೀಜಿ ಮಾತನಾಡಿ, ಶ್ರೀಕೃಷ್ಣನನ್ನು ಪ್ರತಿಷ್ಠಾಪಿಸಿದ ಆಚಾರ್ಯ ಮಧ್ವರು ಮತ್ತು ಶ್ರೀವಾದಿರಾಜತೀರ್ಥರು ಹಾಕಿಕೊಟ್ಟ ಪರಂಪರೆಯನ್ನು ಮುಂದುವರೆಸಿಕೊಂಡು ದೇವರ ಪೂಜೆಯನ್ನು ವಿವಿಧ ಮುಖಗಳಲ್ಲಿ ಮಾಡುವುದಷ್ಟೇ ನಮ್ಮ ಕೆಲಸ. ಅದನ್ನೂ ಶ್ರೀಕೃಷ್ಣನೇ ಮಾಡಿಸುತ್ತಿದ್ದಾನೆ ಎಂದರು. ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು ಹಾಗೂ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ತೀರ್ಥ ಶ್ರೀಪಾದರು ಆಶೀರ್ವಚನ ನೀಡಿದರು. ಬೆಂಗಳೂರಿನ ವಿದ್ವಾನ್ ಬ್ರಹ್ಮಣ್ಯ ಆಚಾರ್ಯ ‘ದಾಸರು ಕಂಡಂತೆ ಶ್ರೀಕೃಷ್ಣ’ಕುರಿತು […]
ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಉದ್ಘಾಟನೆ

ಉಡುಪಿ: ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ನೂತನ ಶಾಖೆಯು ಎಂಜಿಎಂ ಕಾಲೇಜಿನ ಎದುರುಗಡೆ ಇರುವ ಶ್ರೀ ಗಣೇಶ್ ಬಿಲ್ಡಿಂಗ್ ನ ನೆಲಮಹಡಿಯಲ್ಲಿ ಸೆ.8 ರಂದು ಉದ್ಘಾಟನೆಯಾಯಿತು. ಕರ್ನಾಟಕ ವಿಧಾನಸಭೆಯ ಸಭಾಪತಿ ಯು.ಟಿ ಖಾದರ್ ಸೊಸೈಟಿ ಉದ್ಘಾಟನೆ ನಡೆಸಿ ಮಾತನಾಡಿ, ಹೊಚ್ಚ ಹೊಸದಾಗಿ ಪ್ರಾರಂಭವಾಗಿರುವ ಸೊಸೈಟಿ ಸರ್ವ ಧರ್ಮೀಯರ ಸಹಕಾರದೊಂದಿಗೆ ಕಾರ್ಯ ನಿರ್ವಹಿಸಿ ಎಲ್ಲರ ಪ್ರೀತಿ ವಿಶ್ವಾಸಕ್ಕೆ ಪಾತ್ರವಾಗಲಿ. ಹತ್ತು ಕೈಗಳು ಒಂದೇ ಮನಸ್ಸಿನಿಂದ ಕೆಲಸ ಮಾಡಿದರೆ ಯಶಸ್ಸು ನಿಶ್ಚಿತ. ಸಹಕಾರ ಕ್ಷೇತ್ರವು ಸಮಾಜದಲ್ಲಿನ ವಿವಿಧ […]