ವ್ಯಾಪಾರ ಮತ್ತು ಭದ್ರತಾ ಸಂಬಂಧಗಳನ್ನು ವಿಸ್ತರಿಸಲು ಭಾರತ ಮತ್ತು ಸೌದಿ ಅರೇಬಿಯಾ ಒಪ್ಪಿಗೆ
ನವದೆಹಲಿ: ಭಾರತ ಮತ್ತು ಸೌದಿ ಅರೇಬಿಯಾ ಸೋಮವಾರ ವ್ಯಾಪಾರ ಮತ್ತು ಭದ್ರತಾ ಸಂಬಂಧಗಳನ್ನು ವಿಸ್ತರಿಸಲು ಒಪ್ಪಿಕೊಂಡಿವೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಸೌದಿ ಅರೇಬಿಯಾದ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ನವದೆಹಲಿಯಲ್ಲಿ ಭೇಟಿಯಾಗಿದ್ದಾರೆ ಮತ್ತು ಭಾರತ-ಸೌದಿ ಅರೇಬಿಯಾ ಸ್ಟ್ರಾಟೆಜಿಕ್ ಪಾಲುದಾರಿಕೆ ಮಂಡಳಿಯ ಸಭೆಯ ಅಧ್ಯಕ್ಷತೆ ವಹಿಸಿದ್ದಾರೆ. ಇಂಧನ ಭದ್ರತೆ, ವ್ಯಾಪಾರ, ರಕ್ಷಣೆಯಲ್ಲಿ ಹೂಡಿಕೆ, ಆರೋಗ್ಯ ರಕ್ಷಣೆ ಮತ್ತು ಆಹಾರ ಭದ್ರತೆಯವರೆಗಿನ ವಿಷಯಗಳ ಕುರಿತು ಉಭಯ ನಾಯಕರು ಚರ್ಚಿಸಿದರು ಎಂದು ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರ […]
ಡಾ. ಟಿಎಂಎ ಪೈ ಆಸ್ಪತ್ರೆಯಲ್ಲಿ ಖ್ಯಾತ ಹೃದ್ರೋಗ ತಜ್ಞ ಡಾ. ಪದ್ಮನಾಭ್ ಕಾಮತ್ ಸಮಾಲೋಚನೆಗೆ ಲಭ್ಯ
ಉಡುಪಿ:ಕೆಎಂಸಿ ಮಂಗಳೂರಿನ ಹೆಸರಾಂತ ಹೃದ್ರೋಗ ತಜ್ಞ ಡಾ. ಪದ್ಮನಾಭ್ ಕಾಮತ್ ಅವರು ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯಲ್ಲಿ ಬುಧವಾರ, ಸೆಪ್ಟೆಂಬರ್ 20 ರಿಂದ ವಿಶೇಷ ಹೃದ್ರೋಗ ಸಮಾಲೋಚನೆಗಳನ್ನು ಒದಗಿಸಲಿದ್ದಾರೆ. ಅವರು ಪ್ರತಿ ತಿಂಗಳ ಮೂರನೇ ಬುಧವಾರದಂದು ಬೆಳಿಗ್ಗೆ 9.30 ರಿಂದ 12.30 ರವರೆಗೆ ಸಮಾಲೋಚನೆಗೆ ಲಭ್ಯವಿರುತ್ತಾರೆ. ಈ ವ್ಯವಸ್ಥೆಯು ಉಡುಪಿಯ ಸಮುದಾಯಕ್ಕೆ ಡಾ. ಕಾಮತ್ ಅವರ ತಜ್ಞ ಹೃದ್ರೋಗ ಆರೈಕೆಯನ್ನು ಪಡೆದುಕೊಳ್ಳಲು ಅನುವು ಮಾಡಿಕೊಡುತ್ತದೆ. ಹೃದಯ ಹಾಗೂ ರಕ್ತನಾಳದ ಆರೋಗ್ಯದ ಪ್ರಾಮುಖ್ಯತೆಯನ್ನು ಗುರುತಿಸುವುದು: ಹೃದಯ ಹಾಗೂ […]
ಪರಶುರಾಮ ಥೀಮ್ ಪಾರ್ಕ್ ಬಗ್ಗೆ ಯಾವುದೇ ತನಿಖೆಗೆ ಸಂಪೂರ್ಣ ಬೆಂಬಲ: ವಿ ಸುನಿಲ್ ಕುಮಾರ್
ಕಾರ್ಕಳ: ಇಲ್ಲಿನ ಬೈಲೂರು ಉಮಿಕಲ್ ಬೆಟ್ಟದ ಮೇಲೆ ನಿರ್ಮಿಸಿರುವ ಪರಶುರಾಮ ಥೀಮ್ ಪಾರ್ಕಿನಲ್ಲಿ ಯಾವುದೇ ರೀತಿಯ ಅಕ್ರಮ ನಡೆದಿದ್ದರೆ ಜಿಲ್ಲಾಡಳಿತ ಯಾವುದೇ ರೀತಿಯ ತನಿಖೆ ಮಾಡಲಿ ನಾನು ಬೆಂಬಲ ನೀಡುತ್ತೇನೆ ಎಂದು ಶಾಸಕ ವಿ ಸುನಿಲ್ ಕುಮಾರ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವಾಸಕ್ಕಾಗಿ ಜಿಲ್ಲೆಗೆ ಭೇಟಿ ನೀಡುವ ಪ್ರವಾಸಿಗರು ಪರಶುರಾಮ ಥೀಮ್ ಪಾರ್ಕಿಗೂ ಭೇಟಿ ನೀಡಬೇಕು, ಕಾರ್ಕಳ ಪ್ರವಾಸಿ ತಾಣವಾಗಿ ಬೆಳೆಯಬೇಕು ಇದರಿಂದ ಆರ್ಥಿಕತೆ ಬೆಳೆಯಬೇಕು ಎನ್ನುವ ಕಾರಣಕ್ಕಾಗಿ ಥೀಮ್ ಪಾರ್ಕನ್ನು ಮಾಡಲಾಗಿದೆ. ಅಭಿವೃದ್ದಿಯನ್ನು ಸಹಿಸದ […]
ಮಂಗಳೂರು: ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನ 112ನೇ ಶಾಖೆ ಉದ್ಘಾಟನೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ112ನೇ ಶಾಖೆಯು ಸ್ಯಾಂಡ್ ಪಿಟ್ ಬೆಂಗ್ರೆಯಲ್ಲಿ ಕಾರ್ಯಾರಂಭಗೊಂಡಿದ್ದು ಇದರ ಉದ್ಘಾಟನೆಯನ್ನು ದೀಪ ಬೆಳಗಿಸುವ ಮೂಲಕ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ನಡೆಸಿದರು. ಬಳಿಕ ಮಾತನಾಡಿದ ಅವರು, ಬೆಂಗ್ರೆಯ ಜನರು ಬ್ಯಾಂಕ್ ಕೆಲಸ ಕಾರ್ಯಗಳಿಗೆ ಹೋಗಬೇಕಿದ್ದರೆ ಪಣಂಬೂರು, ಕೂಳೂರು, ಸ್ಟೇಟ್ ಬ್ಯಾಂಕ್ ಕಡೆಗೆ ಬಸ್ಸು ಇಲ್ಲವೇ ದೋಣಿಯ ಮೂಲಕ ಸಂಚಾರ ನಡೆಸಬೇಕಿತ್ತು. ಇದರಿಂದ ಸಮಯ ಮತ್ತು ಹಣ ಎರಡೂ ವ್ಯರ್ಥವಾಗುತ್ತಿತ್ತು. ಈ ಸಂದರ್ಭದಲ್ಲಿ ಬೆಂಗ್ರೆಯ […]
ಕಾಪು: ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಬಿಜೆಪಿ ರೈತ ಮೋರ್ಚಾ ವತಿಯಿಂದ ಪ್ರತಿಭಟನೆ
ಕಾಪು: ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ರೈತ ಮೋರ್ಚಾ ವತಿಯಿಂದ ಸೋಮವಾರದಂದು ಕಾಪು ಮಂಡಲ ಬಿಜೆಪಿ ಕಚೇರಿಯ ಬಳಿ “ಬೃಹತ್ ಪ್ರತಿಭಟನೆ” ನಡೆಯಿತು. ಪ್ರತಿಭಟನೆಯಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಕಾಪು ಮಂಡಲ ಬಿಜೆಪಿ ರೈತ ಮೋರ್ಚಾದ ಕಾರ್ಯಕರ್ತರು ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿ ವಿರೋಧಿಸಿ ಧಿಕ್ಕಾರ ಕೂಗಿದರು. ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ […]