ನೋಕಿಯಾ 5G ಸ್ಮಾರ್ಟ್‌ಫೋನ್ G-42 ಬಿಡುಗಡೆ : ಇಲ್ಲಿದೆ ಮಾಹಿತಿ
ನವದೆಹಲಿ: ಬ್ಯಾಟರಿ ಸೇರಿದಂತೆ ರಫ್ ಆಯಂಡ್ ಟಫ್ ಯೂಸ್ಗೆ ಹೆಸರುವಾಸಿಯಾಗಿರುವ ಖ್ಯಾತ ಕಂಪನಿ ನೋಕಿಯಾ ಇದೀಗ ಮತ್ತೊಂದು ಹೊಸ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆಗೊಳಿಸುವ ಮೂಲಕ ಮತ್ತೆ ಕಮ್ಬ್ಯಾಕ್ಗೆ ಸಿದ್ದವಾಗಿದೆ.ನೋಕಿಯಾದ ಹೆಚ್ಎಮ್ಡಿ ಗ್ಲೋಬಲ್ ಇಂದು ಭಾರತದಲ್ಲಿ G42 ಹೆಸರಿನ ನೋಕಿಯಾ 5G ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. G ಸರಣಿಯ ಈ ಸ್ಮಾರ್ಟ್‌ಫೋನ್ 6.56 ಇಂಚಿನ ಹೆಚ್ಡಿ ಡಿಸ್ಪ್ಲೇ, 90Hz ರಿಫ್ರೆಶ್ ರೇಟ್ ಜತೆಗೆ ಸ್ನ್ಯಾಪ್ಡ್ರಾಗನ್480+5G ಪ್ರೊಸೆಸರ್, ಹೈಬ್ರಿಡ್ಸಿಮ್ ಸ್ಲಾಟ್ ಹೊಂದಿರಲಿದೆ. ನೋಕಿಯಾ ಕಂಪನಿ ಅಗ್ಗದ ಬೆಲೆಯಲ್ಲಿ ಹೆಚ್ಚಿನ ವೈಶಿಷ್ಟ್ಯತೆಗಳನ್ನೊಳಗೊಂಡ […]
24 ಗಂಟೆಗಳಲ್ಲಿ 19 ಮಂದಿ ಸಾವು ; ಉತ್ತರ ಪ್ರದೇಶದಲ್ಲಿ ವರುಣಾರ್ಭಟ
ಲಕ್ನೋ (ಉತ್ತರ ಪ್ರದೇಶ): ರಾಜ್ಯದ ವಿವಿಧ ಪ್ರದೇಶಗಳಲ್ಲಿ ಸುರಿದ ಭಾರಿ ಮಳೆಯಿಂದ ಕಳೆದ 24 ಗಂಟೆಗಳ ಅವಧಿಯಲ್ಲಿ 19 ಜನರು ಸಾವನ್ನಪ್ಪಿದ್ದಾರೆ. ನಿರಂತರ ಮಳೆಯಿಂದ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಕೆಲವೆಡೆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.ಉತ್ತರ ಪ್ರದೇಶದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಮಳೆ ಸಂಬಂಧಿ ಪ್ರತ್ಯೇಕ ಅವಘಡಗಳಲ್ಲಿ ಹಲವರು ಸಾವಿಗೀಡಾಗಿದ್ದಾರೆ. ರಾಜ್ಯದ ಕೆಲವೆಡೆ ಮೇಲ್ಛಾವಣಿ ಕುಸಿತ, ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಪ್ರಕರಣಗಳು ವರದಿಯಾಗಿವೆ. ರಾಜಧಾನಿ ಲಕ್ನೋದ ಕೆಲವು ಪ್ರದೇಶಗಳು ಜಲಾವೃತಗೊಂಡಿವೆ. […]
ಈ ತಿಂಗಳ ಕೊನೆಯಲ್ಲಿ 3 ಸಿನಿಮಾಗಳು ತೆರೆಗೆ
ಸೆಪ್ಟೆಂಬರ್ 28ರಂದು ಬಹುನಿರೀಕ್ಷಿತ ಮೂರು ಸಿನಿಮಾಗಳು ಬಿಡುಗಡೆಯಾಗಲಿವೆ.ಭಾರತೀಯ ಚಿತ್ರರಂಗದಲ್ಲಿ ಇತ್ತೀಚೆಗಿನ ಕೆಲವು ವರ್ಷಗಳಲ್ಲಿ ಅತ್ಯುತ್ತಮ ಸಿನಿಮಾಗಳು ತೆರೆ ಕಾಣುತ್ತಿವೆ. ಕಾಂತಾರ, ಕೆಜಿಎಫ್, ಪಠಾಣ್, ಜೈಲರ್ ಹೀಗೆ ಸಾಕಷ್ಟು ಸಿನಿಮಾಗಳು ಪ್ರೇಕ್ಷಕರ ಮನರಂಜಿಸುವಲ್ಲಿ ಯಶಸ್ವಿಯಾಗಿವೆಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯುವಲ್ಲಿಯೂ ಸಫಲವಾಗಿವೆ. ವಿಶ್ವಾದ್ಯಂತ ಭಾರತದ ಸಿನಿಮಾಗಳು ತಿಂಗಳುಗಟ್ಟಲೆ ಪ್ರದರ್ಶನ ಕಾಣುತ್ತಿವೆ. ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾ ಇದೀಗ ಎಲ್ಲೆಡೆ ಧೂಳೆಬ್ಬಿಸುತ್ತಿದೆ. ಈ ನಡುವೆ ಇದೇ ತಿಂಗಳು ಮತ್ತೆ ಮೂರು ಸಿನಿಮಾಗಳು ಒಂದೇ ದಿನ ಸಿಲ್ವರ್ ಸ್ಟ್ಕೀನ್‌ನಲ್ಲಿ ಮಿಂಚಲು ಸಜ್ಜಾಗಿವೆ. […]
ಮಂಗಳೂರಿನಲ್ಲಿ ವಿದ್ಯಾರ್ಥಿನಿಯರಿಗೆ ಮೈತ್ರಿ ಮುಟ್ಟಿನ ಕಪ್ ವಿತರಣೆಗೆ ಚಾಲನೆ ಮುಂದಿನ ತಿಂಗಳು ರಾಜ್ಯಾದ್ಯಂತ ಯೋಜನೆ ಜಾರಿ
ಮಂಗಳೂರು: ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಪಿಯುಸಿವರೆಗಿನ ವಿದ್ಯಾರ್ಥಿನಿಯರಿಗೆ ನೀಡುವ ಮೈತ್ರಿ ಮುಟ್ಟಿನ ಕಪ್ ವಿತರಣೆ ಯೋಜನೆಗೆ ಮಂಗಳೂರಿನಲ್ಲಿ ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು.ಇಂದು ಒಂದೇ ದಿನ 15 ಸಾವಿರ ವಿದ್ಯಾರ್ಥಿನಿಯರಿಗೆ ಮಂಗಳೂರಿನಲ್ಲಿ ಮೆನ್ಸ್ಟ್ರುವಲ್ ಕಪ್ ವಿತರಣೆ ಮಾಡಲಾಯಿತು. ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಪ್ರತಿಯೊಬ್ಬ ವಿದ್ಯಾರ್ಥಿನಿಯರು ಮೈತ್ರಿ ಯೋಜನೆಯ ರಾಯಭಾರಿಗಳಾಗಿ, ಮುಟ್ಟಿನ ಕಪ್ ಹೆಚ್ಚು ಹೆಚ್ಚು ಬಳಕೆಗೆ ಪ್ರೇರಕರಾಗಬೇಕು. ಮೈತ್ರಿ ಯೋಜನೆ […]
ಭೂಕುಸಿತದಿಂದ ಜಮ್ಮು ಕಾಶ್ಮೀರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಾಲ್ವರು ಸಾವು
ಜಮ್ಮು ಮತ್ತು ಕಾಶ್ಮೀರ: ಇಲ್ಲಿನರಾಂಬನ್ ಜಿಲ್ಲೆಯ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು (ಮಂಗಳವಾರ) ಭೂಕುಸಿತ ಸಂಭವಿಸಿತು. ಪರಿಣಾಮ ಟ್ರಕ್‌ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ. ಆಗಸ್ಟ್ನಲ್ಲೂ ಸಂಭವಿಸಿತ್ತು ಗುಡ್ಡಕುಸಿತ: ಜಮ್ಮು ಮತ್ತು ಕಾಶ್ಮೀರದ ರಾಂಬನ್ ಪ್ರದೇಶದಲ್ಲಿ ಆಗಸ್ಟ್ 6ರಂದು ಗುಡ್ಡ ಕುಸಿತವಾಗಿತ್ತು. ಅಪಾರ ಪ್ರಮಾಣದ ಮಣ್ಣು ರಸ್ತೆ ಮೇಲೆ ಬೀಳುತ್ತಿರುವ ದೃಶ್ಯಗಳನ್ನು ಮೊಬೈಲ್ನಲ್ಲಿ ಪ್ರಯಾಣಿಕರು ಸೆರೆಹಿಡಿದಿದ್ದರು. ರಸ್ತೆ ಸಂಪೂರ್ಣ ಬಂದ್ ಆಗಿತ್ತು. ಯಾವುದೇ ಪ್ರಾಣಹಾನಿಯಾಗಿರಲಿಲ್ಲ. ಜುಲೈ ತಿಂಗಳಲ್ಲೂ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-44ರಲ್ಲಿ ಭಾರಿ ಮಳೆಯಿಂದಾಗಿ ಗುಡ್ಡದಿಂದ ಕಲ್ಲು, ಮಣ್ಣು ರಸ್ತೆ […]