ಉಡುಪಿ: ಆನ್ ಲೈನ್ ಮಾರಾಟ ವೇದಿಕೆಯಲ್ಲಿ ಸರಕು ಮಾರಲು ಹೋಗಿ 1.28 ಲಕ್ಷ ರೂಪಾಯಿ ಕಳೆದುಕೊಂಡ ಮಹಿಳೆ

ಉಡುಪಿ: ಆನ್ ಲೈನ್ ವೇದಿಕೆ OLX ಮೂಲಕ ತನ್ನ ವಸ್ತುಗಳನ್ನು ಮಾರಾಟ ಮಾಡಲು ಬಯಸಿದ್ದ ಮಹಿಳೆಯೊಬ್ಬರು ಆನ್‌ಲೈನ್ ವಂಚನೆಯಲ್ಲಿ 1.28 ಲಕ್ಷ ರೂಪಾಯಿಗಳನ್ನು ಕಳೆದುಕೊಂಡಿರುವ ಘಟನೆ ವರದಿಯಾಗಿದೆ. ಉಷಾ ಕಿರಣ್ ಎಂಬುವರು ವಂಚನೆಗೊಳಗಾದ ಮಹಿಳೆ. ಇವರು ಆಗಸ್ಟ್ 27 ರಂದು OLX ಮೂಲಕ ತಾನು ಮಾರಾಟ ಮಾಡಲು ಬಯಸಿದ್ದ ಸರಕುಗಳ ವಿವರಗಳನ್ನು ಒದಗಿಸಿದ್ದರು. ಸರಕು ಖರೀದಿಸಲು ಆಸಕ್ತಿ ತೋರಿದ ವ್ಯಕ್ತಿಯೊಬ್ಬ ಉಷಾ ಅವರ ಮೊಬೈಲ್ ಸಂಖ್ಯೆಯನ್ನು ಪಡೆದುಕೊಂಡಿದ್ದಾನೆ. ಬಳಿಕ ಮಹಿಳೆಯೊಬ್ಬರು ಮೊಬೈಲ್ ಸಂಖ್ಯೆ 8602485583 ನಿಂದ ದೂರವಾಣಿ […]

ರಾಜ್ಯ ರಾಜಧಾನಿಯ ಮೊದಲ ಮಹಿಳಾ ಯಕ್ಷಗಾನ ತಂಡಕ್ಕೆ ಬೆಳ್ಳಿ ಹಬ್ಬದ ಸಂಭ್ರಮ

ಬೆಂಗಳೂರು: ರಾಜಧಾನಿಯಲ್ಲಿ ಹುಟ್ಟಿಕೊಂಡ ಮೊದಲ ಯಕ್ಷಗಾನ ಮಹಿಳಾ ತಂಡ ‘ಕರ್ನಾಟಕ ಮಹಿಳಾ ಯಕ್ಷಗಾನ (ರಿ) ಬೆಂಗಳೂರು’ ಈ ಸಂಸ್ಥೆಯ ಬೆಳ್ಳಿ ಮಹೋತ್ಸವ ಕಾರ್ಯಕ್ರಮ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಬಹಳ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ ಖಾದರ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಂಗಳೂರು ಮೀಡಿಯಾ ಅಲೂಮ್ನಿ ಅಸೋಸಿಯೇಷನ್ ವತಿಯಿಂದ ಚಿಂತನ-ಮಂಥನ ಕಾರ್ಯಕ್ರಮ ನಡೆಯಿತು. ನಂತರ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಕೋಟ ಶಿವರಾಮ ಕಾರಂತರು ನಿರ್ದೇಶಿಸಿದ ಯಕ್ಷಗಾನ ಬ್ಯಾಲೆ ಪ್ರದರ್ಶನ ಎಲ್ಲರ ಮನಸೂರೆಗೊಳಿಸಿತು. ಕನ್ನಡ […]

ಕೋಡಿ ಬೆಂಗ್ರೆ ಗ್ರಾಮದಲ್ಲಿ ಕಸ ಸಂಗ್ರಹಣೆಗೆ ವಿನೂತನ ವ್ಯವಸ್ಥೆ: ಬಾರ್ಜ್ ಮೂಲಕ ಕಸ ಸಂಗ್ರಹಿಸುತ್ತಿರುವ ಸ್ವಚ್ಛವಾಹಿನಿ

ಕುಂದಾಪುರ: ವ್ಯವಸ್ಥಿತ ರೀತಿಯಲ್ಲಿ ಘನ ಮತ್ತು ದ್ರವ ತ್ಯಾಜ್ಯ ಸಂಗ್ರಹಣೆ ಮತ್ತು ಅವುಗಳ ವೈಜ್ಞಾನಿಕ ವಿಲೇವಾರಿಯಲ್ಲಿ ರಾಜ್ಯದಲ್ಲೇ ಮಾದರಿ ಜಿಲ್ಲೆಯಾಗಿ ಗುರುತಿಸಿಕೊಂಡಿರುವ ಉಡುಪಿ ಜಿಲ್ಲೆಯಲ್ಲಿನ ಎಲ್ಲಾ 155 ಗ್ರಾಮ ಪಂಚಾಯತ್ ಗಳಲ್ಲಿ ಕಸ ಸಂಗ್ರಹಣೆಗಾಗಿ ಸ್ವಚ್ಛವಾಹಿನಿ ಹೆಸರಿನ ಕಸ ಸಂಗ್ರಹಣೆಯ ವಾಹನಗಳು ಕಾರ್ಯನಿರ್ವಹಿಸುತ್ತಿದ್ದು, ಬ್ರಹ್ಮಾವರ ತಾಲೂಕಿನ ಕೋಡಿ ಗ್ರಾಮ ಪಂಚಾಯತ್ ವತಿಯಿಂದ ಕೋಡಿಬೆಂಗ್ರೆ ಗ್ರಾಮಕ್ಕೆ ಬಾರ್ಜ್ ಮೂಲಕ ವಾಹನ ತೆರಳಿ ಒಣತ್ಯಾಜ್ಯ ಸಂಗ್ರಹ ಮಾಡುವುದರ ಮೂಲಕ ಯಾವುದೇ ಸಂದರ್ಭದಲ್ಲಿ, ಯಾವುದೇ ಗ್ರಾಮ ಕಸದ ಸಮಸ್ಯೆಗೆ ಒಳಗಾಗದಂತೆ ಸ್ವಚ್ಛ […]

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಸಿಎ ಕೋರ್ಸ್ ಕುರಿತು ಮಾಹಿತಿ ಕಾರ್ಯಾಗಾರ

ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಸೆ.11 ರಂದು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಸಿಎ ಕೋರ್ಸ್ ನ ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಕುಂದಾಪುರದ ಸಿಎ ವಸಂತ ಶಾನುಭಾಗ್, ಸಿ ಎ ಪರೀಕ್ಷೆ ತೆಗೆದುಕೊಳ್ಳಲು ಬೇಕಾದ ಶೈಕ್ಷಣಿಕ ಅರ್ಹತೆ ಮತ್ತು ಉತ್ತೀರ್ಣರಾಗಲು ಅನುಸರಿಸಬೇಕಾದ ಕ್ರಮಗಳು ಹಾಗೂ ಸಿಎ ಕೋರ್ಸ್ ನ ವಿಶೇಷತೆಗಳ ಕುರಿತು ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲೆ ರಾಗಿಣಿ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿಗಳಾದ ಸಂಜನಾ ಸ್ವಾಗತಿಸಿ, ವಿನಯ್ ಶಾನುಭಾಗ್ ವಂದಿಸಿ, […]

ಕಂಪನಿ ಸೆಕ್ರೆಟರಿ ಪರೀಕ್ಷೆಯಲ್ಲಿ ರ‍್ಯಾಂಕ್ ಗಳಿಸಿದ ವಿದ್ಯಾರ್ಥಿನಿಯರಿಗೆ ಸನ್ಮಾನ

ಉಡುಪಿ: ಶ್ರೀ ಲಕ್ಷ್ಮೀ ವೆಂಕಟೇಶ ದೇವಳದ ಎದುರುಗಡೆ ಇರುವ ತೆಂಕಪೇಟೆ ಗೆಳೆಯರ ಬಳಗ ವತಿಯಿಂದ ಶನಿವಾರದಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಇವರನ್ನು ಅಭಿನಂದಿಸಿ ಸನ್ಮಾನಿಸಲಾಯಿತು. ಬಳಿಕ ಕಂಪನಿ ಸೆಕ್ರೆಟರಿ ಪರೀಕ್ಷೆಯಲ್ಲಿ ರ‍್ಯಾಂಕ್ ಗಳಿಸಿದ ಮೂವರು ವಿದ್ಯಾರ್ಥಿಗಳಾದ ಕುಮಾರಿ ಕೆ. ಪ್ರತೀಕ್ಷಾ ಪೈ, ಕುಮಾರಿ ಎಮ್. ಪದ್ಮಶ್ರೀ ಪೈ, ಕುಮಾರಿ ಸಹನಾ ಕಾಮತ್ ಇವರನ್ನು ಶಾಸಕ ಯಶ್ ಪಾಲ್ ಸುವರ್ಣ ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಿದರು. ಮುಖ್ಯ ಅತಿಥಿ ಕೆ. ಅಶೋಕ್ ಕಾಮತ್, ಕೆ. […]