ಗಂಗೊಳ್ಳಿ ಅಕ್ರಮ ಮರಳುಗಾರಿಕೆ ಅಡ್ಡೆ ಮೇಲೆ ದಾಳಿ: ಐವರ ಬಂಧನ

ಕುಂದಾಪುರ: ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮೋವಾಡಿಯಲ್ಲಿ ಅಕ್ರಮ ಮರಳುಗಾರಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ಕಾರ್ಮಿಕರನ್ನು ಬಂಧಿಸಿದ್ದಾರೆ. ಸೆ.12ರಂದು ಮೋವಾಡಿ ಪ್ರದೇಶದಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಅಡ್ಡೆಯ ಮೇಲೆ ಗಂಗೊಳ್ಳಿ ಠಾಣೆ ಪಿ.ಎಸ್.ಐ ಹರೀಶ್ ಆರ್. ಹಾಗೂ ಸಿಬ್ಬಂದಿ ತಂಡ ಈ ದಾಳಿ ನಡೆಸಿದೆ. ದಾಳಿಯಲ್ಲಿ ಉತ್ತರಪ್ರದೇಶದ ಮೈನೇಜರ್ (30), ಗುದ್ದು ಕುಮಾರ (20), ಜಿತೇಂದ್ರ ಕುಮಾರ್ (25), ದಿನೇಶ (22), ಮತ್ತು ಸ್ಥಳೀಯ ನಿವಾಸಿ ಆಲ್ಬನ್ (42) […]

ಕೇರಳದಲ್ಲಿ ನಿಪಾಹ್ ವೈರಸ್ ಸೋಂಕು ಹೆಚ್ಚಳ: ಹೈ ಅಲರ್ಟ್ ಘೋಷಿಸಿದ ಸರ್ಕಾರ

ಕೋಝಿಕ್ಕೋಡ್‌: ನಿಪಾಹ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಕೇರಳದಲ್ಲಿ ಕಂಡುಬರುವ ವೈರಸ್ ಸ್ಟ್ರೈನ್ ಬಾಂಗ್ಲಾದೇಶದ ರೂಪಾಂತರವಾಗಿದ್ದು ಅದು ಮನುಷ್ಯರಿಂದ ಮನುಷ್ಯನಿಗೆ ಹರಡುತ್ತದೆ ಮತ್ತು ಇದು ಕಡಿಮೆ ಸಾಂಕ್ರಾಮಿಕವಾಗಿದ್ದರೂ ಹೆಚ್ಚಿನ ಮರಣ ಪ್ರಮಾಣವನ್ನು ಹೊಂದಿದೆ ಎಂದು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ. ನಿಪಾಹ್ ಸೋಂಕಿನಿಂದ ಕೋಝಿಕ್ಕೋಡ್‌ನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಸಚಿವೆ ಮಂಗಳವಾರ ಖಚಿತಪಡಿಸಿದ್ದಾರೆ. ಒಬ್ಬ ವಯಸ್ಕ ಮತ್ತು ಒಂದು ಮಗು ಸೋಂಕಿಗೆ ಒಳಗಾಗಿದೆ ಮತ್ತು ಆಸ್ಪತ್ರೆಯಲ್ಲಿದೆ, ಮತ್ತು ಇದುವರೆಗೆ 130 […]

‘ಕಾವೇರಿ’ದ ನೀರು ಬಿಡುಗಡೆ ಕಾದಾಟ: ವಿಶೇಷ ತುರ್ತು ಸಭೆ ಕರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಪ್ರತಿದಿನ 5,000 ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯುಆರ್‌ಸಿ) ಕರ್ನಾಟಕಕ್ಕೆ ಮಂಗಳವಾರ ಶಿಫಾರಸು ಮಾಡಿದ ಹಿನ್ನೆಲೆಯಲ್ಲಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೆಪ್ಟೆಂಬರ್ 13 ರಂದು “ವಿಶೇಷ ತುರ್ತು ಸಭೆ”ಗೆ ಕರೆ ನೀಡಿದ್ದಾರೆ. ತುರ್ತು ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಕಾವೇರಿ ಜಲಾನಯನ ಪ್ರದೇಶದ ಸಚಿವರು, ಎಲ್ಲ ಪಕ್ಷಗಳ ಮಾಜಿ ಮುಖ್ಯಮಂತ್ರಿಗಳು, ರಾಜ್ಯ ಸಂಪುಟದ ಹಿರಿಯ ಸಚಿವರು, ಲೋಕಸಭೆ ಮತ್ತು ರಾಜ್ಯಸಭಾ ಸದಸ್ಯರು […]

ಅಕ್ಟೋಬರ್ 2 ರಂದು ಸಂಸತ್ತಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ಯುವಕರಿಗಾಗಿ ಭಾಷಣ ಸ್ಪರ್ಧೆ

ಅಕ್ಟೋಬರ್ 2 ರಂದು ನಮ್ಮ ದೇಶದ ಇಬ್ಬರು ಮಹಾನ್ ರಾಷ್ಟ್ರೀಯ ನಾಯಕರಾದ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ಧೂರ್ ಶಾಸ್ತ್ರೀಜಿ ಅವರ ಜನ್ಮ ದಿನ. ಈ ರಾಷ್ಟ್ರೀಯ ನಾಯಕರ ಗೌರವಾರ್ಥವಾಗಿ ಲೋಕಸಭೆಯಲ್ಲಿ ಅಕ್ಟೋಬರ್ 2 ರಂದು ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ಈ ಕಾರ್ಯಕ್ರಮವು ನೆಹರು ಯುವ ಕೇಂದ್ರ ಸಂಘಟನೆಯ 25 ಯುವಜನರ ಭಾಗವಹಿಸುವಿಕೆಗೆ ಸಾಕ್ಷಿಯಾಗಲಿದೆ. ನೆಹರು ಯುವ ಕೇಂದ್ರ ಸಂಘಟನೆಯ 25 ಯುವಜನರನ್ನು ಆಯ್ಕೆ ಮಾಡಲು ದೇಶಾದ್ಯಂತ ಜಿಲ್ಲಾ, ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಭಾಷಣ ಸ್ಪರ್ಧೆಯನ್ನು ನಡೆಸಲು […]

ಉಡುಪಿ: ಬಿ.ಐ.ಇ.ಆರ್.ಟಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಉಡುಪಿ: 2023-24ನೇ ಸಾಲಿನಲ್ಲಿ ಉಡುಪಿ ಜಿಲ್ಲೆಯಲ್ಲಿ ಸಮಗ್ರ ಶಿಕ್ಷಣ ಯೋಜನೆಯಡಿ ಪ್ರಾಥಮಿಕ ಶಾಲಾ ಹಂತದ ಖಾಲಿ ಇರುವ ಬಿ.ಐ.ಇ.ಆರ್.ಟಿ ಹುದ್ದೆಗಳಿಗೆ ನೇರ ಗುತ್ತಿಗೆ ಆಧಾರದ ಮೇಲೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಉಪ ಯೋಜನಾ ಸಮನ್ವಯ ಅಧಿಕಾರಿ, ಉಪ ನಿರ್ದೇಶಕರ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಕಚೇರಿಯನ್ನು ಇದೇ ಸೆ.15ರೊಳಗೆ ಸೂಕ್ತ ದಾಖಲೆಗಳೊಂದಿಗೆ ಸಂಪರ್ಕಿಸಬಹುದು ಎಂದು ಸಮಗ್ರ ಶಿಕ್ಷಣ ಅಭಿಯಾನದ ಉಪನಿರ್ದೇಶಕರು(ಆಡಳಿತ) ಹಾಗೂ ಪದನಿಮಿತ್ತ ಜಿಲ್ಲಾ ಯೋಜನೆ […]