ಮಂಗಳೂರು: ಯುನೈಟೆಡ್ ಟೊಯೋಟಾದಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳಿಗೆ ಸೆ.16 ರಂದು ನೇರ ಸಂದರ್ಶನ
ಮಂಗಳೂರು: ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಯುನೈಟೆಡ್ ಟೊಯೋಟಾ, ಮಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಯುನೈಟೆಡ್ ಟೊಯೋಟಾದಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳಿಗೆ ಸೆ.16 ಶನಿವಾರದಂದು ಬೆಳಿಗ್ಗೆ 10.30 ರಿಂದ ಅಪರಾಹ್ನ 1.30ರವರೆಗೆ ಯಾವುದೇ ಪದವಿ, ಐ.ಟಿ.ಐ ಮೋಟಾರ್ ಮೆಕ್ಯಾನಿಕ್ ಅಥವಾ ಡಿಪ್ಲೋಮಾ ಆಟೋಮೊಬೈಲ್ ಇಂಜಿನಿಯರಿಂಗ್ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಮಹಾನಗರ ಪಾಲಿಕೆ ಕಟ್ಟಡ, ಲಾಲ್‌ಭಾಗ್, ಮಂಗಳೂರು ಇಲ್ಲಿ ನೇರ ಸಂದರ್ಶನವನ್ನು ಆಯೋಜಿಸಲಾಗಿರುತ್ತದೆ ಎಂದು ಪಕಟಣೆ ತಿಳಿಸಿದೆ. ಕೆಲಸದ […]
ಮೇಕ್ ಇನ್ ಇಂಡಿಯಾ ಯೋಜನೆಗೆ ರಷ್ಯಾ ಅಧ್ಯಕ್ಷರ ಶ್ಲಾಘನೆ: ಮೋದಿ ಸರಿಯಾದ ಕೆಲಸ ಮಾಡುತ್ತಿದ್ದಾರೆ ಎಂದ ಪುತಿನ್
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ವ್ಲಾಡಿವೋಸ್ಟಾಕ್‌ನಲ್ಲಿ ನಡೆದ 8ನೇ ಈಸ್ಟರ್ನ್ ಎಕನಾಮಿಕ್ ಫೋರಮ್ (EEF) ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನೀತಿಗಳನ್ನು ಶ್ಲಾಘಿಸಿದರು. ಮೇಕ್ ಇನ್ ಇಂಡಿಯಾ ಕಾರ್ಯಕ್ರಮವನ್ನು ಉತ್ತೇಜಿಸುವಲ್ಲಿ ಪ್ರಧಾನಿ ಮೋದಿ “ಸರಿಯಾದ ಕೆಲಸ” ಮಾಡುತ್ತಿದ್ದಾರೆ ಎಂದು ಪುಟಿನ್ ಹೇಳಿದರು. 8 ನೇ ಇಇಎಫ್‌ನಲ್ಲಿ ಅವರ ಭಾಷಣದ ಸಮಯದಲ್ಲಿ, ಅವರು ದೇಶೀಯವಾಗಿ ಉತ್ಪಾದಿಸುವ ಆಟೋಮೊಬೈಲ್‌ಗಳನ್ನು ಬಳಸಿಕೊಳ್ಳುವ ಪ್ರಾಮುಖ್ಯತೆಯನ್ನು ಒತ್ತಿಹೇಳುವ ಮೂಲಕ ರಷ್ಯಾದ ನಿರ್ಮಿತ ಕಾರುಗಳ ಬಗ್ಗೆ ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಪ್ರಧಾನಿ ಮೋದಿಯವರ ನೇತೃತ್ವದಲ್ಲಿ […]
ರಾಜಸ್ಥಾನ: ನಿಂತಿದ್ದ ಬಸ್ ಗೆ ಡಿಕ್ಕಿ ಹೊಡೆದ ಟ್ರಕ್, ಕನಿಷ್ಠ 11 ಸಾವು; 12 ಜನ ಗಾಯಾಳು
ಭರತ್‌ಪುರ: ರಾಜಸ್ಥಾನದ ಭರತ್‌ಪುರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್‌ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ ಮತ್ತು 12 ಮಂದಿ ಗಾಯಗೊಂಡಿದ್ದಾರೆ. ಬಸ್ ರಾಜಸ್ಥಾನದ ಪುಷ್ಕರ್‌ನಿಂದ ಉತ್ತರ ಪ್ರದೇಶದ ವೃಂದಾವನಕ್ಕೆ ತೆರಳುತ್ತಿದ್ದಾಗ ಮುಂಜಾನೆ 4.30 ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೇತುವೆ ಮೇಲೆ ಬಸ್ ಕೆಟ್ಟು ನಿಂತಿದ್ದಾಗ ಈ ಘಟನೆ ನಡೆದಿದೆ. ಬಸ್ ಚಾಲಕ ಮತ್ತು ಕೆಲವು ಪ್ರಯಾಣಿಕರು ಬಸ್‌ನ ಹಿಂದೆ ನಿಂತಿದ್ದ ಸಂದರ್ಭದಲ್ಲಿ ವೇಗವಾಗಿ ಬಂದ ಟ್ರಕ್ ವಾಹನಕ್ಕೆ […]
ಸೆ.15ರಂದು ಅಜ್ಜರಕಾಡು ಕ್ರೀಡಾಂಗಣದಲ್ಲಿ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮ: ವಿದ್ಯಾಕುಮಾರಿ
ಉಡುಪಿ: ಭಾರತದ ಸಂವಿಧಾನದ ತತ್ವಗಳನ್ನು ತಮ್ಮ ಜೀವನ ಮತ್ತು ಕರ್ತವ್ಯಗಳಲ್ಲಿ ಅಳವಡಿಸಿಕೊಂಡು ಪೀಠಿಕೆಗೆ ಬದ್ಧರಾಗುವ ಉದ್ದೇಶದಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸೆ.15ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲೆಯಾದ್ಯಂತ ಸಂವಿಧಾನ ಪೀಠಿಕೆಯನ್ನು ಒಟ್ಟಾಗಿ ಓದುವ ಬೃಹತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ವಿದ್ಯಾಕುಮಾರಿ.ಕೆ ಅವರು ತಿಳಿಸಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಭಾರತದ ಸಂವಿಧಾನದ ಪೀಠಿಕೆಯನ್ನು ಓದುವ ಜಿಲ್ಲಾ ಮಟ್ಟದ ಕಾರ್ಯಕ್ರಮವು ಉಡುಪಿಯ ಅಜ್ಜರಕಾಡಿನ ಜಿಲ್ಲಾ ಕ್ರೀಡಾಂಗಣದಲ್ಲಿ […]
ಪರಿಸರ ಮಾಲಿನ್ಯ ಉಂಟುಮಾಡುವ ಗಣೇಶ ವಿಗ್ರಹ ಮಾರಾಟ ನಿಷೇಧ: ತಪ್ಪಿದಲ್ಲಿ ಕಾನೂನು ಕ್ರಮ
ಉಡುಪಿ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಜಿಲ್ಲೆಯ ಕೆಲವು ಪ್ರದೇಶಗಳಲ್ಲಿರುವ ಗಣಪತಿ ವಿಗ್ರಹಗಳ ತಯಾರಿಕಾ ಘಟಕ ಹಾಗೂ ಮಾರಾಟ ಮಾಡುವ ಮಳಿಗೆಗಳನ್ನು ಪರಿವೀಕ್ಷಿಸಿದಾಗ ನಿಷೇಧಿತ ಪ್ಲಾಸ್ಟರ್ ಆಫ್ ಪ್ಯಾರಿಸ್ ನಿಂದ ವಿಗ್ರಹಗಳನ್ನು ತಯಾರಿಸುತ್ತಿರುವುದು ಹಾಗೂ ಬಣ್ಣ ಲೇಪಿತವಾದ ವಿಗ್ರಹಗಳನ್ನು ಮಾರಾಟಕ್ಕೆ ಇಟ್ಟಿರುವುದನ್ನು ಗಮನಿಸಿರುತ್ತಾರೆ. ಸದರಿ ವಿಷಯದ ಬಗ್ಗೆ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಉಪಯೋಗಿಸಿ ತಯಾರಿಸುತ್ತಿರುವ ವಿಗ್ರಹಗಳು ಬಣ್ಣ ಲೇಪಿತವಾದ ಹಾಗೂ ಈಗಾಗಲೇ ತಯಾರಿಸಿ ಅಥವಾ ಇತರೆ ರಾಜ್ಯಗಳಿಂದ ಅಮದು […]