ಎತ್ತರ ಜಿಗಿತ: ಶ್ರೀ ವೆಂ. ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಿನನ್ ರಾಜ್ಯ ಮಟ್ಟಕ್ಕೆ ಆಯ್ಕೆ
ಕುಂದಾಪುರ : ಉಡುಪಿ ಜಿಲ್ಲಾ ಅಮೆಚೂರ್ ಅಸೋಸಿಯೇಶನ್ ಅವರು 18 ವರ್ಷದೊಳಗಿನವರಿಗಾಗಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಸಿನನ್ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಯನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.
ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ: ಅರ್ಜಿ ಆಹ್ವಾನ
ಉಡುಪಿ: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ “ಮಹಾತ್ಮಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ ಪ್ರಸಕ್ತ ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸಾರ್ವಜನಿಕ ಜೀವನದಲ್ಲಿ ಮಹಾತ್ಮಗಾಂಧೀಜಿಯವರ ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿರುವ ಕನಿಷ್ಠ 60 ವರ್ಷಗಳಾಗಿರುವ ವ್ಯಕ್ತಿಗಳು ಅಥವಾ 25 ವರ್ಷಗಳು ತುಂಬಿರುವ ಸೇವಾ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವುದು. ಪ್ರಶಸ್ತಿಯನ್ನು ಆಯ್ಕೆ ಮಾಡಲು ಆಯ್ಕೆ ಸಮಿತಿಯನ್ನು ರಚಿಸಲಾಗುವುದು. 2023 […]
ಪಾರ್ಟಿ ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ರೂಪಾಯಿ ಪಂಗನಾಮ ಹಾಕಿದ ಆರೋಪ: ವಾಗ್ಮಿ ಚೈತ್ರಾ ಕುಂದಾಪುರ ಸಿಸಿಬಿ ಪೊಲೀಸ್ ವಶಕ್ಕೆ
ಉಡುಪಿ: ಹಿಂದೂ ಸಂಘಟನೆಯ ಪ್ರಖರ ವಾಗ್ಮಿ ಚೈತ್ರಾ ಕುಂದಾಪುರ ಇವರನ್ನು ಸಿಸಿಬಿ ಬೆಂಗಳೂರು ವಿಭಾಗದ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ ಕಳೆದ ಕೆಲ ಸಮಯದಿಂದ ತಲೆಮರೆಸಿಕೊಂಡಿದ್ದ ಚೈತ್ರ ಕುಂದಾಪುರ ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿದ್ದಾಗ ಬೆಂಗಳೂರಿನ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಬೈಂದೂರಿನ ಬಿಜೆಪಿ ಮುಖಂಡ ಹಾಗೂ ಸಮಾಜ ಸೇವಕರೊಬ್ಬರಿಗೆ ವಿಧಾನಸಭಾ ಚುನಾವಣೆಗಾಗಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಸಂಗಡಿಗರೊಂದಿಗೆ ಸೇರಿಕೊಂಡು ಸುಮಾರು ಏಳು ಕೋಟಿ […]