ಅಕ್ಟೋಬರ್ 1 ರಿಂದ ದೇಶಾದ್ಯಂತ ಜನನ ಪ್ರಮಾಣ ಪತ್ರ ಹೊಸ ಕಾಯಿದೆ ಜಾರಿ: ಒಂದೇ ದಾಖಲೆಯಾಗಿ ಬಳಸಲು ಅನುಮತಿ

ಹೊಸದಿಲ್ಲಿ: ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಕಾಯಿದೆ, 2023 ಅಕ್ಟೋಬರ್ 1 ರಿಂದ ದೇಶಾದ್ಯಂತ ಜಾರಿಗೆ ಬರಲಿದೆ. ಜನನ ಮತ್ತು ಮರಣ ನೋಂದಣಿ (ತಿದ್ದುಪಡಿ) ಕಾಯಿದೆ, 2023 ರ ಪ್ರಕಾರ ಶಿಕ್ಷಣ ಸಂಸ್ಥೆಗೆ ಪ್ರವೇಶ, ಚಾಲನಾ ಪರವಾನಗಿ ನೀಡಿಕೆ, ಮತದಾರರ ಪಟ್ಟಿ, ಆಧಾರ್ ಸಂಖ್ಯೆ, ಮದುವೆ ನೋಂದಣಿ, ಸರ್ಕಾರಿ ಕೆಲಸ ಅಥವಾ ನೇಮಕಾತಿಗಾಗಿ ಜನನ ಪ್ರಮಾಣಪತ್ರವನ್ನು ಒಂದೇ ದಾಖಲೆಯಾಗಿ ಬಳಸಲು ಅನುಮತಿಸುತ್ತದೆ. ಗೃಹ ಸಚಿವಾಲಯದ ಅಧೀನದಲ್ಲಿರುವ ರಿಜಿಸ್ಟ್ರಾರ್ ಜನರಲ್ ಕಚೇರಿ ತನ್ನ ಹೇಳಿಕೆಯಲ್ಲಿ, “ಜನನ ಮತ್ತು […]

ಜೆಡಿಎಸ್-ಬಿಜೆಪಿ ಮೈತ್ರಿಗೆ ಉಡುಪಿ ಜಿಲ್ಲಾ ಜೆಡಿಎಸ್ ಒಪ್ಪಿಗೆ: ಯೋಗೀಶ್ ಶೆಟ್ಟಿ

ಉಡುಪಿ: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠರು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವುದಾಗಿ ಘೋಷಿಸಿದ್ದು, ಈ ನಿರ್ಣಯಕ್ಕೆ ಉಡುಪಿ ಜಿಲ್ಲಾ ಜೆಡಿಎಸ್ ಘಟಕ ಸರ್ವಾನುಮತದ ಒಪ್ಪಿಗೆ ಸೂಚಿಸಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ ತಿಳಿಸಿದ್ದಾರೆ. ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ಉಡುಪಿ ಜಿಲ್ಲಾ ಕಚೇರಿಯಲ್ಲಿ ಇಂದು ತುರ್ತು ಸಭೆ ನಡೆಸಿ, ವರಿಷ್ಠರ ನಿರ್ಣಯಕ್ಕೆ ಜಿಲ್ಲಾ ಘಟಕದಿಂದ ಸರ್ವಾನುಮತದ ಒಪ್ಪಿಗೆ ಸೂಚಿಸಲಾಗಿದೆ. ಈ ನಿರ್ಣಯವನ್ನು ಪಕ್ಷದ ವರಿಷ್ಠರಿಗೆ ರವಾನಿಸಲಾಗುತ್ತದೆ. ಪಕ್ಷದ ಹಿತದೃಷ್ಟಿಯಿಂದ […]

ನಿಪಾ ವೈರಸ್ ಪ್ರಕರಣ: ಕೋಝಿಕ್ಕೋಡ್ ನಲ್ಲಿ ಮೊಬೈಲ್ ಲ್ಯಾಬ್ ಸ್ಥಾಪನೆ; ಗಡಿ ಭಾಗದಲ್ಲಿಅಲರ್ಟ್ ಘೋಷಣೆ

ಕೋಝಿಕ್ಕೋಡ್: ಕೇರಳದಲ್ಲಿ ನಿಪಾ ವೈರಸ್ ಪ್ರಕರಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಗುರುವಾರ ರಾಜ್ಯಾದ್ಯಂತ ತನ್ನ ಅಧಿಕಾರಿಗಳಿಗೆ ನಿಪಾ ವೈರಸ್ (NiV) ಕುರಿತು ಸಲಹೆಯನ್ನು ನೀಡಿದೆ. ಕೇರಳದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಐದು ಪಾಸಿಟಿವ್ ಪ್ರಕರಣಗಳು ಮತ್ತು ಎರಡು ಸಾವು ವರದಿಯಾಗಿದೆ. ಇದರೊಂದಿಗೆ ಕರ್ನಾಟಕ ಕೇರಳ ಗಡಿ ಜಿಲ್ಲೆಯಾದ ದಕ್ಷಿಣ ಕನ್ನಡ ಮತ್ತು ದೇಶಾದ್ಯಂತ ವೈರಸ್ ಬಗ್ಗೆ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಕೋಝಿಕ್ಕೋಡ್ ನಲ್ಲಿ ಮೊಬೈಲ್ ಲ್ಯಾಬ್ ಸೌಲಭ್ಯ ಸ್ಥಾಪಿಸಲಾಗಿದೆ. ಇದರಿಂದ ಪುಣೆಯ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿಗೆ ಕಳುಹಿಸದೆಯೇ […]

ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದಲ್ಲಿ ಆಪ್ತ ಸಮಾಲೋಚಕರ ಹುದ್ದೆ ಖಾಲಿ

ಉಡುಪಿ: ಜಿಲ್ಲೆಯ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದಲ್ಲಿ ಖಾಲಿ ಇರುವ ಆಪ್ತ ಸಮಾಲೋಚಕರ 1 ಹುದ್ದೆಗೆ (ಎಂ.ಎಸ್.ಡಬ್ಲ್ಯೂ) ಗೌರವಧನದ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಅರ್ಹ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ, ಪೋಲಿಸ್ ವರಿಷ್ಠಾಧಿಕಾರಿಗಳ ಕಚೇರಿ ಬಳಿ, ಬನ್ನಂಜೆ, ಉಡುಪಿ ದೂ.ಸಂ. 0820-2526394 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದ ಯೋಜನಾ ಸಂಯೋಜಕರು ಪ್ರಕಟಣೆಯಲ್ಲಿ […]

ವಿಚಾರಣೆಗೆ ಸಹಕರಿಸದ ಚೈತ್ರಾಳಿಂದ ಹೈಡ್ರಾಮ: ಹೈರಾಣಾದ ಸಿಸಿಬಿ ಪೊಲೀಸರು

ಬೆಂಗಳೂರು: ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಉದ್ಯಮಿ ಗೋವಿಂದ ಪೂಜಾರಿಗೆ 5 ಕೋಟಿ ರೂ. ವಂಚನೆ ಮಾಡಿದ ಪ್ರಕರಣದಲ್ಲಿ ಒಂದನೇ ಆರೋಪಿಯಾಗಿ ಬಂಧನಕ್ಕೆ ಒಳಗಾಗಿರುವ ಚೈತ್ರಾ ಕುಂದಾಪುರ ಸಿಸಿಬಿ ಪೊಲೀಸರ​ ವಿಚಾರಣೆಗೆ ಸಹಕರಿಸುತ್ತಿಲ್ಲ ಎಂಬ ವಿಷಯ ವರದಿಯಾಗಿದೆ. ವಿಚಾರಣೆ ವೇಳೆ ಹೈಡ್ರಾಮಾ ಮಾಡುತ್ತಿರುವ ಚೈತ್ರಾ ನಾನೇನು ಮಾಡಿಲ್ಲ, ಎಲ್ಲವೂ ಸ್ವಾಮೀಜಿಗೆ ಗೊತ್ತು ಎಂದು ಮಾತ್ರ ಹೇಳುತ್ತಿದ್ದಾಳೆ. ಅಲ್ಲದೆ ಪ್ರತಿಯೊಂದಕ್ಕೂ ಅಳುವುದು ಮತ್ತು ಕೂಗಾಡುತ್ತಿದ್ದಾಳೆ. ಹಾಗಾಗಿ ಇದುವರೆಗೂ ಒಂದು ಪುಟ ಹೇಳಿಕೆಯನ್ನೂ ದಾಖಲು ಮಾಡಲು ಸಾಧ್ಯವಾಗಿಲ್ಲ ಎಂದು […]