ನ್ಯೂಸ್ ಪೇಪರ್ನಲ್ಲೇ 12 ಅಡಿ ಗಣೇಶನನ್ನು ಪ್ರತಿಷ್ಠಾಪಿಸಿ ಪರಿಸರ ಪ್ರೇಮ ಮೆರೆದ ಸಿದ್ದಗಂಗಾ ಶಾಲೆಯ ವಿದ್ಯಾರ್ಥಿಗಳು

ದಾವಣಗೆರೆ : ಸಿದ್ದಗಂಗಾ ಶಾಲೆಯ ನಿರ್ದೇಶಕ ಡಾ ಜಯಂತ್ ಅವರು ಪರಿಸರ ಸ್ನೇಹಿ ಗಣಪತಿ ನಿರ್ಮಾಣದ ಬಗ್ಗೆ ಮಾಹಿತಿ ನೀಡಿದ್ದಾರೆ. ದಾವಣಗೆರೆ ನಗರದ ಸಿದ್ದಗಂಗಾ ಶಾಲೆಯ ಮಕ್ಕಳು ನ್ಯೂಸ್ ಪೇಪರ್ನಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಿದ್ದಾರೆ. ಪಿಒಪಿ ಗಣೇಶನ ಮೂರ್ತಿಯ ಹಾವಳಿಯಲ್ಲಿ ಪರಿಸರ ಸ್ನೇಹಿ ಗಣೇಶಗಳ ನಿರ್ಮಾಣ ಕಡಿಮೆಯಾಗುತ್ತಿದೆ. ಆದರೆ ಪ್ರಧಾನಿ ನರೇಂದ್ರ ಮೋದಿಯವರು ಪರಿಸರ ಸ್ನೇಹಿ ಗಣೇಶಗಳಿಗೆ ಒತ್ತು ನೀಡಿ ಎಂದು ಕರೆ ನೀಡಿದ ಬೆನ್ನಲ್ಲೇ ನಗರದ ಸಿದ್ದಗಂಗಾ ಶಾಲೆಯ ಮಕ್ಕಳು ಅನುಪಯುಕ್ತ ನ್ಯೂಸ್ […]
ಗಣೇಶ ಹಬ್ಬ ಆಚರಣೆ: ಮದ್ಯ ಮಾರಾಟ ನಿಷೇಧ

ಉಡುಪಿ: ಜಿಲ್ಲೆಯಾದ್ಯಂತ ಗಣೇಶ ಹಬ್ಬದ ಆಚರಣೆ ಪ್ರಯುಕ್ತ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸೆಪ್ಟಂಬರ್ 19 ರಂದು ಜಿಲ್ಲೆಯಾದ್ಯಂತ ಹಾಗೂ ಸೆ. 21 ಮತ್ತು 23 ರಂದು ಉಡುಪಿ ನಗರ ವ್ಯಾಪ್ತಿಯಲ್ಲಿ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ & ರೆಸ್ಟೋರೆಂಟ್ ಮತ್ತು ವೈನ್ ಶಾಪ್‌ಗಳಲ್ಲಿ ಬೆಳಗ್ಗೆ 6 ರಿಂದ ರಾತ್ರಿ 12 ರ ವರೆಗೆ ಅಬಕಾರಿ ಸನ್ನದುಗಳನ್ನು ಮುಚ್ಚಲು ಆದೇಶಿಸಿ, ಮದ್ಯ ಮಾರಾಟ ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.
ನರೇಂದ್ರ ಮೋದಿಯವರಂತ ಆದರ್ಶ ವ್ಯಕ್ತಿತ್ವ ನಮ್ಮದಾಗಬೇಕು: ವಿಜಯ ಕೊಡವೂರು

ಉಡುಪಿ: ಪರ್ಯಾಯ ಕೃಷ್ಣಾಪುರ ಮಠ ಉಡುಪಿ, ಮೋದಿ ಉತ್ಸವ ಸಮಿತಿ ಉಡುಪಿ, ಡಾಟ್ ಪ್ರಿಂಟ್ ಉಡುಪಿ ಇವರ ಜಂಟಿ ಆಶ್ರಯದಲ್ಲಿ ನರೇಂದ್ರ ಮೋದಿ ಅವರ 73ನೇ ಜನ್ಮ ದಿನದ ಪ್ರಯುಕ್ತ ಮೋದಿ ಉತ್ಸವ -2023 ಕಾರ್ಯಕ್ರಮವು ರಾಜಾಂಗಣದಲ್ಲಿ ಸೆ. 17 ರಂದು ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕೆ ವಿಜಯ್ ಕೊಡವೂರು, ರಾಮನ ಆದರ್ಶದಂತೆ ಬದುಕಿದವರು ನರೇಂದ್ರ ಮೋದಿ. ರಾಮ ತಂದೆ ಮಾತಿಗೋಸ್ಕರ ಕಾಡಿಗೆ ಹೋಗಿ ಧರ್ಮ ಯುದ್ಧದ ಮುಖಾಂತರ ಜಯಿಸಿ ಬಂದರೆ, ನರೇಂದ್ರ ಮೋದಿ ರಾಷ್ಟ್ರೀಯ […]
ಪಂಚಮಿ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಶೇ.7% ಡಿವಿಡೆಂ ಡ್ ಘೋಷಣೆ

ಉಡುಪಿ: ಪಂಚಮಿ ಸೌಹಾರ್ದ ಸಹಕಾರಿ ಉಡುಪಿ ಇದರ 2022-23ನೇ ಸಾಲಿನ ವಾರ್ಷಿಕ ಮಹಾಸಭೆಯು ಕುಂಜಿಬೆಟ್ಟು ಶ್ರೀ ಕೃಷ್ಣ ಪ್ರಜ್ಞಾ ಪ್ರತಿಷ್ಠಾನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಸತ್ಯ ಪ್ರಸಾದ್ ಶಣೈ ಮಾತನಾಡಿ, 35 ಕೋ.ರೂ. ವ್ಯವಹಾರ ನಡೆಸಿದ ಸಂಘವು 10,75,747 ರೂ. ನಿವ್ವಳ ಲಾಭ ಗಳಿಸಿ, ಶೇ.7% ಪಾಲು ಮುನಾಫೆ ಘೋಷಿಸಿದೆ ಎಂದರು. ಸಂಸ್ಥೆಯು ಸುಸಜ್ಜಿತ ಹವಾನಿಯಂತ್ರಿತ ಕೊಠಡಿ ಹೊಂದಿದ್ದು ಈಗಾಗಲೇ RTGS & NEFT ಸೌಲಭ್ಯ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ವ್ಯವಹಾರಕ್ಕೆ ಸಂಬಂಧ […]
ಕನ್ನರ್ಪಾಡಿ: ಸೆ.19 ರಿಂದ 24 ರವರೆಗೆ 18 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

ಕನ್ನರ್ಪಾಡಿ: ಕನ್ನರ್ಪಾಡಿ-ಕಿನ್ನಿಮೂಲ್ಕಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 18 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವವು ಸೆ.19 ರಿಂದ 24 ರವರೆಗೆ ಕಿನ್ನಿಮೂಲ್ಕಿ ಸ್ವಾಗತ ಗೋಪುರದ ಬಳಿಯ ಗಣಪತಿ ಮೈದಾನದಲ್ಲಿ ನಡೆಯಲಿದೆ. ಸೆ.19 ರ ಸಂಜೆ 7 ಗಂಟೆಗೆ ಸಭಾಕಾರ್ಯಕ್ರಮ ನಡೆಯಲಿದ್ದು, ಕನ್ನರ್ಪಾಡಿ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಮುರಳೀಧರ ಬಲ್ಲಾಳ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಗಣೇಶೋತ್ಸವ ಸಮಿತಿ ಅಧ್ಯಕ್ಷ ಕೆ. ನಾರಾಯಣ್ ರಾವ್ ವಹಿಸಲಿದ್ದಾರೆ. ಗ್ರ. ಪಂ. ಉಪಾಧ್ಯಕ್ಷ ನವೀನ್ ಶೆಟ್ಟಿ, ಗಿರಿಜಾ ಹೆಲ್ತ್ ಕೇರ್ […]