ಗಣೇಶ ಚತುರ್ಥಿಯಂದೇ ಹೊಸ ಸಂಸತ್ ಭವನದೊಳಗೆ ಪ್ರವೇಶ: ಪ್ರಧಾನಿ ಮೋದಿ

ನವದೆಹಲಿ: ನಾಳೆ ಗಣೇಶ ಚತುರ್ಥಿಯಂದು ಹೊಸ ಸಂಸತ್ತಿಗೆ ತೆರಳಲಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಣಪತಿಯನ್ನು ವಿಘ್ನಹರ್ತ ಎಂದೂ ಕರೆಯುತ್ತಾರೆ, ಈಗ ದೇಶದ ಅಭಿವೃದ್ಧಿಗೆ ಯಾವುದೇ ಅಡೆತಡೆಗಳಿಲ್ಲ ನಿರ್ವಿಘ್ನ ರೂಪದಿಂದ ಭಾರತವು ತನ್ನ ಎಲ್ಲಾ ಕನಸು ಎಲ್ಲ ಸಂಕಲ್ಪಗಳನ್ನು ಪರಿಪೂರ್ಣಗೊಳಿಸಲಿದೆ. ಗಣೇಶ್ ಚತುರ್ಥಿಯ ದಿನದಂದು ನವ ಪಯಣ ಹೊಸ ಭಾರತ ಎಲ್ಲಾ ಕನಸುಗಳನ್ನು ಚರಿತಾರ್ಥಗೊಳಿಸಲಿದೆ. ಸಂಸತ್ತಿನ ಈ ಅಧಿವೇಶನವು ಚಿಕ್ಕದಾಗಿರಬಹುದು, ಆದರೆ ಬಹಳ ಪ್ರಮುಖವಾಗಿದೆ ಎಂದು ಅವರು ಮಾಧ್ಯಮಗಳಿಗೆ ಹೇಳಿದರು. #WATCH | Prime Minister […]

ಗಣೇಶ ಹಬ್ಬಕ್ಕೆ ಭರದ ಸಿದ್ದತೆ: ಈ ಬಾರಿ 463 ಪೆಂಡಲ್​ಗಳಲ್ಲಿ ರಾರಾಜಿಸಲಿದ್ದಾನೆ ಗಣೇಶ!!

ಉಡುಪಿ: ಜಿಲ್ಲೆಯಾದ್ಯಂತ ಗಣೇಶ ಹಬ್ಬಕ್ಕೆ ಭರದ ಸಿದ್ದತೆಗಳು ನಡೆಯುತ್ತಿವೆ. ಪ್ರಮುಖ ಗಣೇಶೋತ್ಸವ ಸಮಿತಿಗಳಾದ ಕೊಡವೂರು ಗಣೇಶೋತ್ಸವ ಸಮಿತಿ 55ನೇ ವರ್ಷ, ಕಡಿಯಾಳಿ ಸಾರ್ವಜನಿಕ ಗಣೇಶೋತ್ಸವ ಸಮಿತಿ 57ನೇ ವರ್ಷ, ಪರ್ಕಳ ಸಾರ್ವಜನಿಕ ಗಣೇಶೋತ್ಸವ 56ನೇ ವರ್ಷ, ಬಾರ್ಕೂರು ಪಟ್ಟಾಭಿರಾಮ ದೇವಳದ 56ನೇ ವರ್ಷದ ಗಣೇಶೋತ್ಸವವನ್ನು ಆಚರಿಸುತ್ತಿವೆ. ಉಳಿದಂತೆ ಅಂಬಲಪಾಡಿ ಗಣೇಶೋತ್ಸವ ಸಮಿತಿ, ಮಣಿಪಾಲ ಸಿಂಡಿಕೇಟ್​ ಬ್ಯಾಂಕ್​ ಗೋಲ್ಡನ್​ ಜ್ಯುಬಿಲಿ ಹಾಲ್​, ಪಡುಬಿದ್ರಿ, ಅಂಬಾಗಿಲು, ಕಾರ್ಕಳ, ಗೋಳಿಅಂಗಡಿ, ಕುಂದಾಪುರ, ಸೋಮೇಶ್ವರ ಸೇರಿದಂತೆ ಎಲ್ಲೆಡೆ ಗಣೇಶೋತ್ಸವಕ್ಕೆ ತಯಾರಿ ನಡೆಯುತ್ತಿದೆ. ಒಟ್ಟು […]

ಪ್ರಧಾನಿ ಮೋದಿ ಕಾರ್ಯವೈಖರಿ ಎಲ್ಲರಿಗೂ ಆದರ್ಶ: ಯಶ್​ಪಾಲ್​ ಸುವರ್ಣ

ಉಡುಪಿ: ಭಾರತವನ್ನು ವಿಶ್ವಗುರುವಾಗಿಸುವ ಪಣತೊಟ್ಟು ಹಗಲಿರುಳು ಶ್ರಮಿಸುತ್ತಾ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಶಕ್ತಿ ತುಂಬುವ ನರೇಂದ್ರ ಮೋದಿಯವರ ಕಾರ್ಯವೈಖರಿ ಎಲ್ಲರಿಗೂ ಆದರ್ಶ ಎಂದು ಶಾಸಕ ಯಶ್​ಪಾಲ್​ ಸುವರ್ಣ ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಅಂಗವಾಗಿ ತಮ್ಮ ಕಚೇರಿಯಲ್ಲಿ ನಗರದ ವಿವಿಧ ರುದ್ರಭೂಮಿಯಲ್ಲಿ ಸೇವೆ ಸಲ್ಲಿಸುತ್ತಿರುವ ಸೇವಕರನ್ನು ಸನ್ಮಾನಿಸಿ ಅವರು ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ, ನಿತ್ಯಾನಂದ ಒಳಕಾಡು ಹಾಗೂ ನಗರಸಭೆ ಮಾಜಿ ಆಧ್ಯಕ್ಷ ಕಿರಣ್​ ಕುಮಾರ್​ ಉಪಸ್ಥಿತರಿದ್ದರು.

ಸೆ. 20 ರಂದು ಧನಂಜಯ ಟವರ್ಸ್ ನಲ್ಲಿ ನೇರ ಸಂದರ್ಶನ

ಉಡುಪಿ: ಜಿಲ್ಲಾ ಕೈಗಾರಿಕಾ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಸೆಪ್ಟಂಬರ್ 20 ರಂದು ಬೆಳಗ್ಗೆ 10.30 ಕ್ಕೆ ಹರ್ಷ ರಿಟೇಲ್ ಪ್ರೈಲಿ, ಧನಂಜಯ ಟವರ್ಸ್, ಅಜ್ಜರಕಾಡು, ಕಿತ್ತೂರು ರಾಣಿ ಚೆನ್ನಮ್ಮ ರಸ್ತೆ, ಉಡುಪಿ ಇಲ್ಲಿ ನೇರ ಸಂದರ್ಶನ ನಡೆಯಲಿದೆ. ಎಮ್.ಬಿ.ಎ, ಬಿ.ಇ, ಇಂಜಿನಿಯರಿಂಗ್, ಐ.ಟಿ.ಐ, ಡಿಪ್ಲೋಮಾ ಮತ್ತು ಇತರೆ ಯಾವುದೇ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿ ಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ […]

ಮೂವರು ಉಪಮುಖ್ಯಮಂತ್ರಿಗಳ ನೇಮಕ ಊಹಾಪೋಹ: ಹೈಕಮಾಂಡ್ ನಿರ್ಧಾರಕ್ಕೆ ಬದ್ದ ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಮೂವರು ಉಪಮುಖ್ಯಮಂತ್ರಿಗಳ ನೇಮಕಕ್ಕೆ ಸಂಪುಟದ ಒಳಗಿನಿಂದ ಧ್ವನಿ ಎತ್ತುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರದಂದು ಹೈಕಮಾಂಡ್ ಈ ಬಗ್ಗೆ ಅಂತಿಮವಾಗಿ ನಿರ್ಧರಿಸುತ್ತದೆ ಮತ್ತು ನಿರ್ಧಾರವನ್ನು ಪಾಲಿಸುವುದಾಗಿ ಹೇಳಿದ್ದಾರೆ. ಕರ್ನಾಟಕದಲ್ಲಿ ಇನ್ನೂ ಮೂರು ಡಿಸಿಎಂಗಳನ್ನು ಹೊಂದುವ ಆಲೋಚನೆಯನ್ನು ಸಹಕಾರ ಸಚಿವ ಕೆ ಎನ್ ರಾಜಣ್ಣ ಶನಿವಾರ ತೇಲಿಬಿಟ್ಟಿದ್ದರು ಮತ್ತು 2024 ರ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಹೈಕಮಾಂಡ್ ಜೊತೆ ಚರ್ಚಿಸುವುದಾಗಿ ಹೇಳಿದ್ದರು. ಇದು ಸಚಿವರ ವೈಯಕ್ತಿಕ ಅಭಿಪ್ರಾಯವಾಗಿದ್ದು, ಇದನ್ನು ಪಕ್ಷದ […]