ಸೆ. 21 ರಂದು ಮ್ಯಾಟ್ರಿಕ್ಸ್ ಆಟೋ ವೆಂಚರ್ಸ್ ನಲ್ಲಿ ನೇರ ಸಂದರ್ಶನ

ಉಡುಪಿ: ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಸೆಪ್ಟಂಬರ್ 21 ರಂದು ಬೆಳಗ್ಗೆ 10.30 ಕ್ಕೆ ಮ್ಯಾಟ್ರಿಕ್ಸ್ ಆಟೋ ವೆಂಚರ್ಸ್ (ಹೋಂಡಾ ಟು ವಿಲ್ಲರ್), ಮ್ಯಾಟ್ರಿನ್ ದಿಯಾ, ಶಿವಳ್ಳಿ, ಕುಂಜಿಬೆಟ್ಟು, ಉಡುಪಿ ಇಲ್ಲಿ ನೇರ ಸಂದರ್ಶನ ನಡೆಯಲಿದೆ. ಐ.ಟಿ.ಐ, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿ ಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ […]

ಉದ್ಯಮಿಗೆ 5 ಟಿಕೆಟ್ ಕೋಟಿ ವಂಚನೆ ಪ್ರಕರಣ: ಒಡಿಶಾದಲ್ಲಿ ಹಾಲಶ್ರೀ ಸ್ವಾಮೀಜಿಯ ಬಂಧನ

ಬೆಂಗಳೂರು: ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬೈಂದೂರು ಕ್ಷೇತ್ರದಲ್ಲಿ ಬಿಜೆಪಿಯಿಂದ ಎಂಎಲ್‌ಎ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ನಂಬಿಸಿದ ಚೈತ್ರ ಕುಂದಾಪುರ, ಕೋಟ್ಯಂತರ ರೂ. ಪಡೆದು ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಒಡಿಶಾ ರಾಜ್ಯದಲ್ಲಿ ಬಂಧಿಸಿದ್ದಾರೆ. ಪ್ರಕರಣದ ಮೂರನೇ ಆರೋಪಿಯಾಗಿರುವ ವಿಜಯನಗರ ಜಿಲ್ಲೆಯ ಹಿರೇಹಡಗಲಿ ತಾಲೂಕಿನ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಒಡಿಶಾದ ಕಟಕ್‌ನಲ್ಲಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಚಲಿಸುತ್ತಿದ್ದ ರೈಲಿನಲ್ಲೇ ಹಾಲಶ್ರೀಯನ್ನು ಬಂಧಿಸಿರುವ ಪೊಲೀಸರು ಅಲ್ಲಿಂದ ಬೆಂಗಳೂರಿಗೆ ಕರೆ […]

ಕೆನಡಾ ಏಟಿಗೆ ಭಾರತ ಎದಿರೇಟು: ಕೆನಡಾದ ರಾಜತಾಂತ್ರಿಕ ಅಧಿಕಾರಿ ದೇಶ ತೊರೆಯುವಂತೆ ಭಾರತ ತಾಕೀತು

ಹೊಸದಿಲ್ಲಿ: ಜೂನ್‌ನಲ್ಲಿ ನಡೆದ ಖಲಿಸ್ತಾನಿ ಪ್ರತ್ಯೇಕತಾವಾದಿ ನಾಯಕನ ಹತ್ಯೆಗೆ ಭಾರತದ “ಸಂಭಾವ್ಯ” ಸಂಬಂಧವನ್ನು ಉಲ್ಲೇಖಿಸಿ ಕೆನಡಾ ತನ್ನ ದೇಶವನ್ನು ತೊರೆಯುವಂತೆ ಭಾರತೀಯ ಅಧಿಕಾರಿಯನ್ನು ಕೆನಡಾ ಕೇಳಿದ ಕೆಲವೇ ಗಂಟೆಗಳ ನಂತರ ಕೆನಡಾದ ರಾಜತಾಂತ್ರಿಕರನ್ನು ದೇಶದಿಂದ ಹೊರಹಾಕುವುದಾಗಿ ಭಾರತ ಘೋಷಿಸಿದೆ. ಭಾರತದಲ್ಲಿರುವ ಕೆನಡಾದ ಹೈಕಮಿಷನರ್ ಅವರನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ (MEA) ಕರೆಸಲಾಯಿತು ಮತ್ತು ಹಿರಿಯ ಕೆನಡಾದ ರಾಜತಾಂತ್ರಿಕರನ್ನು ಹೊರಹಾಕುವ ನಿರ್ಧಾರದ ಬಗ್ಗೆ ತಿಳಿಸಲಾಯಿತು. ಜೂನ್‌ನಲ್ಲಿ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತದ ಪಾತ್ರವಿದೆ ಎಂಬ […]

ಹೊಸ ಸಂಸತ್ ಭವನಕ್ಕೆ ಶ್ರೀಗಣೇಶ: ಅಧಿವೇಶನಕ್ಕೂ ಮುನ್ನ ಕ್ಯಾಬಿನೆಟ್ ಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಅಂಗೀಕಾರ

ನವದೆಹಲಿ: ಈ ವರ್ಷದ ಮೇ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ ಹೊಸ ಸಂಸತ್ ಭವನದಲ್ಲಿ ಮೊದಲ ಅಧಿವೇಶನ ಇಂದು ಪ್ರಾರಂಭವಾಯಿತು. ನೂತನ ಸಂಸತ್ ಭವನದ ಮೊದಲ ಹಾಗೂ ಐತಿಹಾಸಿಕ ಅಧಿವೇಶನ ಇದಾಗಿದೆ. ನಾನು ಭಾರತದ ಸಂಸದರು ಮತ್ತು ಜನರನ್ನು ಅಭಿನಂದಿಸುತ್ತೇನೆ ಎಂದು ಪ್ರಧಾನಿ ಮೋದಿ ಸದನವನ್ನುದ್ದೇಶಿಸಿ ಹೇಳಿದರು. PM @narendramodi acknowledges Samvatsari a cherished tradition. On this day of 'Micchami Dukkadam,' he extends apologies to anyone he […]

ಸ್ಪೋಕನ್ ಇಂಗ್ಲಿಷ್ ಕಲಿಸುವ ಮೂಲಕ ಕನ್ನಡ ಮಾಧ್ಯಮ ಶಾಲೆ ಉಳಿಸಿ ಆಂದೋಲನ ; ಶೆಫಿನ್ಸ್ ನಿಂದ ಕುಂದಾಪುರದಲ್ಲಿ ಅತಿಥಿ ಶಿಕ್ಷಕರ ತರಬೇತಿ ಸಂಪನ್ನ

ಉಡುಪಿ: ರಾಜ್ಯ ಮಟ್ಟದ ಅಮೃತ್ ಸಮ್ಮಾನ್ ಪ್ರಶಸ್ತಿ ಪುರಸ್ಕೃತ ಮನೋಜ್ ಕಡಬ ನೇತೃತ್ವದಲ್ಲಿ ಉಡುಪಿಯ ಶೆಫಿನ್ಸ್ ಎಜುಕೇಶನಲ್ ಅಂಡ್ ಚಾರಿಟೆಬಲ್ ಟ್ರಸ್ಟ್ ನಡೆಸುತ್ತಿರುವ ‘ಸ್ಪೋಕನ್ ಇಂಗ್ಲಿಷ್ ಕಲಿಸುವ ಮೂಲಕ ಕನ್ನಡ ಮಾಧ್ಯಮ ಶಾಲೆ ಉಳಿಸಿ ಆಂದೋಲನ’ ದ ಮೊದಲ ಹೆಜ್ಜೆಯಾದ ಅತಿಥಿ ಹಾಗೂ ಗೌರವ ಶಿಕ್ಷಕರ 4 ದಿನಗಳ ನೇರ ತರಬೇತಿಯ ಮೂರನೇ ಬ್ಯಾಚ್ ನ್ನು ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿ ಅಶೋಕ್ ನಾಯಕ್ ಇವರ ವಿಶೇಷ ಕಾಳಜಿಯಂತೆ ಸರಕಾರಿ ಹಿರಿಯ […]