ಕರ್ನಾಟಕ @ 50: ಕನ್ನಡ ನಾಡು-ನುಡಿ ಬಿಂಬಿಸುವ ಲಾಂಛನ ಮಾದರಿ ತಯಾರಿಸಲು ಆಹ್ವಾನ

ಉಡುಪಿ: ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣವಾಗಿ 50 ವರ್ಷ ಪೂರ್ಣಗೊಳ್ಳಲಿರುವ ಸುವರ್ಣ ಮಹೋತ್ಸವದ ಸುಸಂದರ್ಭದಲ್ಲಿ ಕರ್ನಾಟಕ ಸಂಭ್ರಮ 50 ಹೆಸರಾಗಲಿ ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಶೀರ್ಷಿಕೆಯಡಿ ರಾಜ್ಯಾದ್ಯಂತ ವರ್ಷಪೂರ್ತಿ ವೈವಿಧ್ಯಮಯವಾಗಿ, ವರ್ಣಮಯವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಇದಕ್ಕೊಂದು ವಿಶೇಷ ಮೆರಗು ನೀಡಲು ರಾಜ್ಯ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಉದ್ದೇಶಿಸಿದೆ. ಈ ಕಾರ್ಯಕ್ರಮ ಸಂಭ್ರಮವನ್ನು ಹೆಚ್ಚಿಸಲು ಕನ್ನಡ ನಾಡು-ನುಡಿ ಸಂಸ್ಕೃತಿಯನ್ನು ಬಿಂಬಿಸುವ ವಿಶಿಷ್ಟವಾದ ಲಾಂಛನ (ಲೋಗೋ)ವನ್ನು ಬಳಸಲು ತೀರ್ಮಾನಿಸಲಾಗಿದ್ದು, ಆಸಕ್ತರಿಂದ ಸುಂದರವಾದ […]

ಸೆ. 27 ರಂದು ಪ್ರವಾಸೋದ್ಯಮ ದಿನಾಚರಣೆ: ಹೋಟೆಲ್- ರೆಸ್ಟೋರೆಂಟ್‌ಗಳಿಗೆ ಸಲಹೆ ನೀಡಿದ ಪ್ರವಾಸೋದ್ಯಮ ಇಲಾಖೆ

ಉಡುಪಿ: ಜಿಲ್ಲೆಯಲ್ಲಿ ಸೆಪ್ಟಂಬರ್ 27 ರಂದು ಟೂರಿಸಂ ಎಂಡ್ ಗ್ರೀನ್ ಇನ್ವೆಸ್ಟ್ಮೆಂಟ್ (ಪ್ರವಾಸೋದ್ಯಮ ಮತ್ತು ಹಸಿರು ಹೂಡಿಕೆಗಳು) ಎಂಬ ಸಂದೇಶದೊಂದಿಗೆ ಪ್ರಸಕ್ತ ಸಾಲಿನ ವಿಶ್ವ ಪ್ರವಾಸೋದ್ಯಮ ದಿನವನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆ, ಜಿಲ್ಲೆಗಳಲ್ಲಿನ ಹೋಟೆಲ್, ರೆಸಾರ್ಟ್ ಮತ್ತು ಹೋಮ್‌ಸ್ಟೇ ಗಳಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಸ್ವಚ್ಛತೆ, ಪರಿಸರ ಮಾಲಿನ್ಯ ತಡೆಗಟ್ಟಲು ಹಾಗೂ ನೈರ್ಮಲ್ಯ ಶುಚಿತ್ವದ ಬಗ್ಗೆ ಅರಿವು ಮೂಡಿಸುವುದು ಸೇರಿದಂತೆ ಇನ್ನಿತರೆ ಪರಿಸರ ಸ್ನೇಹಿ ಚಟುವಟಿಕೆಗಳನ್ನು ಪ್ರಸ್ತುತಿ ಪಡಿಸಲು ಎಲ್ಲಾ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಈ ಕೆಳಕಂಡ […]

ಪಿಂಚಣಿ ಪಾವತಿ ಖಾತೆಗೆ ಕಡ್ಡಾಯ ಆಧಾರ್ ಜೋಡಣೆ: ಸೆ. 30 ಕೊನೆ ದಿನ

ಉಡುಪಿ: ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ನಿರ್ದೇಶನಾಲಯದ ನಿರ್ದೇಶನದಂತೆ ಮಾಸಿಕ ಪಿಂಚಣಿ ಯೋಜನೆಗಳಾದ ವೃದ್ಯಾಪ್ಯ ವೇತನ, ಅಂಗವಿಕಲ ವೇತನ, ವಿಧವಾ ವೇತನ, ಸಂಧ್ಯಾ ಸುರಕ್ಷಾ ವೇತನ, ಮನಸ್ಸಿನಿ ಮತ್ತು ಮೈತ್ರಿ ಯೋಜನೆಗಳಡಿ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳ ಮಾಸಿಕ ಪಿಂಚಣಿ ವಿತರಣೆಯನ್ನು ಖಜಾನೆ-2 ತಂತ್ರಾಂಶದ ಮೂಲಕ ಆಧಾರ್ ಆಧಾರಿತ ನೇರ ಹಣ ಸಂದಾಯ ಯೋಜನೆಯಡಿಯಲ್ಲಿ ಫಲಾನುಭವಿಗಳ ಬ್ಯಾಂಕ್ ಅಥವಾ ಅಂಚೆ ಉಳಿತಾಯ ಖಾತೆಗೆ ನೇರವಾಗಿ ಜಮ ಮಾಡುವ ವ್ಯವಸ್ಥೆಯಡಿ ತರಲು ತೀರ್ಮಾನಿಸಲಾಗಿದ್ದು, ಈ ಯೋಜನೆಯಡಿ ಎಲ್ಲಾ ಪಿಂಚಣಿದಾರರು ಪಿಂಚಣಿ […]

ಶ್ರೀಕೃಷ್ಣ ಮಠದಲ್ಲಿ ಗಣೇಶ ವಿಸರ್ಜನೆ

ಉಡುಪಿ: ಪರ್ಯಾಯ ಶ್ರೀ‌ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು, ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು ಹಾಗೂ ಶೀರೂರು ಮಠಾಧೀಶರಾದ ಶ್ರೀವೇದವರ್ಧನತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಶ್ರೀಗಣೇಶ ವಿಸರ್ಜನೆಯು ಗುರುವಾರದಂದು ಮಧ್ವಸರೋವರದಲ್ಲಿ ನಡೆಯಿತು. ಈ ಸಂದರ್ಭ ಚೆಂಡೆ ವಾದ್ಯ, ಹುಲಿಕುಣಿತದ ಜೊತೆ ಮೆರವಣಿಗೆ ನಡೆಯಿತು.

ಮಂಗಳೂರು: ಸಂತ ಮದರ್‌ ತೆರೆಸಾರ 26ನೇ ಸಂಸ್ಮರಣಾ ದಿನ ನಿಮಿತ್ತ ವಿಚಾರ ಸಂಕಿರಣ

ಮಂಗಳೂರು: ಸಮಾಜದ ಸ್ವಾಸ್ಥ್ಯಕ್ಕಾಗಿ ಮೈತ್ರಿಯ ಭಾವನೆ ಅಗತ್ಯ ಎಂದು ಸಾಹಿತಿ, ವಿಮರ್ಶಕ ಪ್ರೊ.ಕೆ.ಫಣಿರಾಜ್ ಪ್ರತಿಪಾದಿಸಿದರು. ನಗರದ ಪುರಭವನದಲ್ಲಿ ಗುರುವಾರ ಸಂತ ಮದರ್‌ ತೆರೆಸಾರ 26ನೇ ಸಂಸ್ಮರಣಾ ದಿನದ ಪ್ರಯುಕ್ತ ಸಂತ ಮದರ್‌ ತೆರೆಸಾ ವಿಚಾರ ವೇದಿಕೆಯ ಆಶ್ರಯದಲ್ಲಿ ‘ವೈವಿಧ್ಯ ಭಾರತದಲ್ಲಿ ಪ್ರೀತಿಯ ಸೆಲೆಗಳು’ ಎಂಬ ತತ್ವದಡಿ ನಡೆದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದ್ವೇಷ ಎನ್ನುವುದು ಬಹಳ ಸರಳವಾದ ವಿಷಯ, ಪ್ರೀತಿಯೆಂಬುವುದು ಸರಳವಲ್ಲ. ಅಧಿಕಾರಕ್ಕಾಗಿ, ಹಣಕ್ಕಾಗಿ ವೇಷ ಮಾಡುವುದು ಸುಲಭ, ಅದಕ್ಕೆ ಪ್ರಚೋದನೆ ನೀಡಲು ಹಲವರಿದ್ದಾರೆ. […]