ಶ್ರೀ ಶಾರದಾ ಟ್ರೈನಿಂಗ್ ಇನ್ಸ್ಟಿಟ್ಯೂಟ್ ನಲ್ಲಿ ಮಾಂಟೆಸ್ಸರಿ ನತ್ತು ನರ್ಸರಿ ಟೀಚರ್ ಟ್ರೈನಿಂಗ್ ಕೋರ್ಸ್ ಪ್ರವೇಶಾತಿಗೆ ಸೆ.30 ಕೊನೆ ದಿನ

ಮಣಿಪಾಲ: ಶ್ರೀ ಶಾರದಾ ಟ್ರೈನಿಂಗ್ ಇನ್ಸ್ಟಿಟ್ಯೂಟ್, ಮಣಿಪಾಲದಲ್ಲಿ ಮಹಿಳೆಯರಿಗೆ ಮಾಂಟೆಸ್ಸರಿ ನತ್ತು ನರ್ಸರಿ ಟೀಚರ್ ಟ್ರೈನಿಂಗ್ ಕೋರ್ಸ್ ನ (2023-24) ಪ್ರವೇಶಾತಿ ಪ್ರಕ್ರಿಯೆ ಆರಂಭವಾಗಿದ್ದು, ಪಿಯುಸಿ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿದ ಮಹಿಳಾ ಅಭರ್ಥಿಗಳು ಈ ತರಬೇತಿಗೆ ಪ್ರವೇಶ ಪಡೆದುಕೊಳ್ಳಬಹುದು. ಕೇವಲ ಕೆಲವೇ ಸೀಟುಗಳು ಲಭ್ಯವಿದ್ದು, ಆಸಕ್ತರು ಶ್ರೀ ಶಾರದಾ ಟ್ರೈನಿಂಗ್ ಇನ್ಸ್ಟಿಟ್ಯೂಟ್, ಡಿ.ಸಿ ಆಫೀಸ್ ಬಳಿ, ಕ್ರಿಸಟಲ್ ಬಿಝ್ ಹಬ್ ಕಾಂಪ್ಲೆಕ್ಸ್, 1 ನೇ ಮಹಡಿಯಲ್ಲಿರುವ ಸಂಸ್ಥೆಯ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ಕಾರ್ಯಾಗಾರ

ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಸೆ. 20 ರಂದು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಭಾರತೀಯ ಸೇನೆ, ನೌಕಾ ಪಡೆ, ವಾಯುಪಡೆ ಹಾಗೂ ಸಿವಿಲ್ ಸರ್ವಿಸ್ ಗಳಿಗೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಭಾರತೀಯ ಸೇನೆಯ short service commission- 54 ನೇ ಕೋರ್ಸ್ ಗೆ ಆಯ್ಕೆಗೊಂಡಿರುವ ಭರತ್ ಬಾಬು ದೇವಾಡಿಗ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಗ್ರಷ್ಮಿಶ್ ಕುಂದರ್ ಹಾಗೂ ರಾಷ್ಟ್ರೀಯ ಕರಾಟೆ ಪಟು ಅಜಯ್ ದೇವಾಡಿಗ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಶ್ರದ್ಧಾ ವಂದಿಸಿ, ಸಾನಿಕ […]

ಬೈಂದೂರು: ಮಹಿಳೆ ನಾಪತ್ತೆ

ಉಡುಪಿ: ಬೈಂದೂರು ತಾಲೂಕು ಹಾಲ್ಕಲ್, ಜಡ್ಕಲ್ ಗ್ರಾಮದ ತುಂಬೆ ಮಕ್ಕಿ ನಿವಾಸಿ ಮೈತ್ರಿ (23) ಎಂಬ ಮಹಿಳೆಯು ಸೆಪ್ಟಂಬರ್ 20 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 3 ಇಂಚು ಎತ್ತರ, ದುಂಡು ಮುಖ, ಎಣ್ಣೆಗಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಹಾಗೂ ಮರಾಠಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-258233, ಮೊ.ನಂ9480805460, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08254-251031, […]

ಆಧುನಿಕ ಶಿಕ್ಷಣ ವ್ಯವಸ್ಥೆಯ ಸುತ್ತ ಸುತ್ತುವ ಬನ್-ಟೀ ಚಿತ್ರ ಇಂದು ರಾಜ್ಯಾದಂತ ಬಿಡುಗಡೆ

‘ಕಾರ್ಮೋಡ ಸರಿದು’ ಚಿತ್ರದ ಮೂಲಕ 2019ರಲ್ಲಿ ಚಂದನವನಕ್ಕೆ ಪದಾರ್ಪಣೆ ಮಾಡಿದ್ದ ಸಂಕಲನಕಾರ-ನಿರ್ದೇಶಕ ಉದಯ್ ಕುಮಾರ್, ಬನ್-ಟೀ ಎಂಬ ಚಿತ್ರ ನಿರ್ದೇಶಿಸಿದ್ದು ಇಂದು ರಾಜ್ಯಾದ್ಯಂತ ತೆರೆಕಾಣಲಿದೆ. ಚಿತ್ರದಲ್ಲಿ ಹೊಸಬರಿಗೆ ಅವಕಾಶ ನೀಡಲಾಗಿದೆ. ಬನ್-ಟೀ ಉದಯ್ ಕುಮಾರ್ ಅವರ ಏಳು ವರ್ಷದ ಕನಸು. ಜನರಿಗೆ ತಿನ್ನಲು ಬೇರೇನೂ ಸಿಗದಿದ್ದಾಗ ಬನ್ ಮತ್ತು ಚಹಾವನ್ನು ಆಶ್ರಯಿಸುತ್ತಾರೆ ಮತ್ತು ಇದು ಅನೇಕರಿಗೆ ಮುಖ್ಯ ಆಹಾರವಾಗಿದೆ. ಚಿತ್ರದ ವಿಶಿಷ್ಟ ಶೀರ್ಷಿಕೆಯು ಕುತೂಹಲವನ್ನು ಹುಟ್ಟುಹಾಕುತ್ತದೆ. ಇದು ನಾವು ಅದನ್ನು ಆರಿಸಿಕೊಳ್ಳಲು ಒಂದು ಪ್ರಮುಖ ಕಾರಣವಾಗಿದೆ ಎಂದು […]

ಶೆಫಿನ್ಸ್ ಇಂಗ್ಲಿಷ್ ಅಪೆಕ್ಸ್ – 3ನೇ ಬ್ಯಾಚ್ ಸ್ಪರ್ಧೆ: ಉದಯ್ ಕೊಠಾರಿಯವರಿಗೆ ಶೆಫಿನ್ಸ್ ಕ್ರಿಯಾಶೀಲ ಶಿಕ್ಷಕ ಪ್ರಶಸ್ತಿ – 2023

ಉಡುಪಿ: ಸ್ಪೋಕನ್ ಇಂಗ್ಲಿಷ್ ಕಲಿಸುವ ಮೂಲಕ ಕನ್ನಡ ಮಾಧ್ಯಮ ಶಾಲೆ ಉಳಿಸಿ ಆಂದೋಲನ ಅಂಗವಾಗಿ ಶೆಫಿನ್ಸ್ ನಿಂದ ಕುಂದಾಪುರದಲ್ಲಿ ಅತಿಥಿ ಹಾಗೂ ಗೌರವ ಶಿಕ್ಷಕರ ತರಬೇತಿಯನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಯೆಡಾಡಿ- ಮತ್ಯಾಡಿಯಲ್ಲಿ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಕುಂದಾಪುರ ತಾಲೂಕಿನ 8 ಶಾಲೆಯ 20 ಶಿಕ್ಷಕರು ಭಾಗವಹಿಸಿದ್ದು, ಅವರ ನಡುವೆ ಶೆಫಿನ್ಸ್ ಕ್ರಿಯಾಶೀಲ ಶಿಕ್ಷಕ ಪ್ರಶಸ್ತಿಗಾಗಿ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಎಲ್ಲಾ ಅತಿಥಿ/ ಗೌರವ ಶಿಕ್ಷಕರೂ ತಾವು ಪಾಠ ಮಾಡುವ ವಿಷಯದಲ್ಲಿ ಬಹಳ ಅದ್ಭುತವಾಗಿ ಬಹಳಷ್ಟು ಶೈಕ್ಷಣಿಕ […]