ಟೇಬಲ್ ಟೆನ್ನಿಸ್​ನಲ್ಲಿ ಪ್ರಿ-ಕ್ವಾರ್ಟರ್​ಗೆ ಪ್ರವೇಶ : ಪ್ರಾಥಮಿಕ ಲೀಗ್​ ಪಂದ್ಯದಲ್ಲಿ ಭಾರತಕ್ಕೆ ಸುಲಭ ಗೆಲುವು..

ಹ್ಯಾಂಗ್‌ಝೌ (ಚೀನಾ): ಇಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಟೇಬಲ್ ಟೆನ್ನಿಸ್ ಸ್ಪರ್ಧೆಗಳಲ್ಲಿ ಭಾರತದ ಪುರುಷ ಮತ್ತು ಮಹಿಳಾ ತಂಡಗಳು ತಮ್ಮ ಗುಂಪಿನಲ್ಲಿನ ಪ್ರಾಥಮಿಕ ಸುತ್ತಿನ ಪಂದ್ಯಗಳಲ್ಲಿ ಗೆಲುವಿನ ಓಟವನ್ನು ಅಜೇಯವಾಗಿ ಮುಂದುವರಿಸಿದ್ದು, ಸತತ ಗೆಲುವಿನಿಂದ ಪ್ರಿ ಕ್ವಾರ್ಟರ್ ಫೈನಲ್‌ಗೆ ಲಗ್ಗೆ ಇಟ್ಟಿವೆ.ಗೊಂಗ್ಶು ಕೆನಾಲ್ ಸ್ಪೋರ್ಟ್ಸ್ ಪಾರ್ಕ್ ಜಿಮ್ನಾಷಿಯಂನಲ್ಲಿ ಇಂದು (ಶನಿವಾರ) ನಡೆದ ಎಫ್ ಗುಂಪಿನ ಪ್ರಾಥಮಿಕ ಪಂದ್ಯದಲ್ಲಿ ಭಾರತದ ಪುರುಷರು ತಜಕಿಸ್ತಾನವನ್ನು 3-0 ಗೋಲುಗಳಿಂದ ಸೋಲಿಸಿದರೆ, ಮಹಿಳೆಯರು ನೆರೆಯ ನೇಪಾಳವನ್ನು 3-0 ಅಂತರದಿಂದ ಸೋಲಿಸಿದರು. ಏಷ್ಯನ್ ಗೇಮ್ಸ್​ನಲ್ಲಿ […]

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನದಿ ನೀರು ಬಿಟ್ಟಿರುವುದನ್ನು ವಿರೋಧಿಸಿ ವಿವಿಧೆಡೆ ಪ್ರತಿಭಟನೆ

ಬೆಂಗಳೂರು: ರಾಜ್ಯ ಬರದ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಜಯ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ಬೆಂಗಳೂರಿನ ಫ್ರೀಡಂ ಪಾರ್ಕ್‌ ರಸ್ತೆಗಳಲ್ಲಿ ಉರುಳು ಸೇವೆ ಮಾಡಿ ಪ್ರತಿಭಟನೆ ನಡೆಸಿದರು. ”ರಾಜ್ಯ ಸಂಕಷ್ಟದಲ್ಲಿ ಇದ್ದಾಗ ನೀರು ಬಿಡಬೇಡಿ, ಯಾವುದೇ ಸಮಸ್ಯೆಗೂ ಸರ್ಕಾರದೊಂದಿಗೆ ನಾವು ಇದ್ದೇವೆ ಎಂದರೂ ರಾಜಕಾರಣಿಗಳು ತಮ್ಮ ಬೇಳೆ ಬೇಯಿಸಿಕೊಳ್ಳುವ ಉದ್ದೇಶದಿಂದ ತಮಿಳುನಾಡಿಗೆ ನೀರು ಹರಿಸುತ್ತಿದ್ದಾರೆ. ಸರ್ವಪಕ್ಷಗಳ ಸಭೆಯಲ್ಲಿ ರೈತರನ್ನು, ಕನ್ನಡಪರ ಸಂಘಟನೆಗಳನ್ನು ಹೊರಗಿಟ್ಟು ತೀರ್ಮಾನ ತೆಗೆದುಕೊಂಡಿದ್ದಾರೆ. ಯಾವುದೇ ಪಕ್ಷವೂ ಅಧಿಕಾರದಲ್ಲಿದ್ದಾಗ ರಾಜ್ಯದ ಪರ […]

ಕೇರಳ ಹೈಕೋರ್ಟ್​ ಆದೇಶ : ಪೋಕ್ಸೋ ಆರೋಪಿಗಳಿಗೂ ನಿರೀಕ್ಷಣಾ ಜಾಮೀನು

ಎರ್ನಾಕುಲಂ (ಕೇರಳ) : ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಕೇರಳ ಹೈಕೋರ್ಟ್​ ಇಂದು ಆದೇಶ ನೀಡಿದೆ.ಪೋಕ್ಸೊ ಪ್ರಕರಣಗಳಲ್ಲಿ ಪ್ರಾಥಮಿಕ ಹಂತದ ಸಾಕ್ಷ್ಯಾಧಾರಗಳಿಲ್ಲದಿದ್ದಲ್ಲಿ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಕೊಡಬಹುದು ಎಂದು ಕೇರಳ ಹೈಕೋರ್ಟ್​ ಆದೇಶ ನೀಡಿದೆ. ಸುಳ್ಳು ಆರೋಪದ ಮೇಲೆ ಅಮಾಯಕರ ವಿರುದ್ಧ ಪ್ರಕರಣ ದಾಖಲಾದ ಹಲವು ಪ್ರಕರಣಗಳು ನಮ್ಮ ಕಣ್ಣ ಮುಂದಿವೆ. ಇಂತಹ ಸಂದರ್ಭಗಳಲ್ಲಿ ವಾಸ್ತವಾಂಶಗಳನ್ನು ಪರಿಶೀಲಿಸಿ ನಿರ್ಧಾರ ಕೈಗೊಳ್ಳಬೇಕು. ತಪ್ಪಿತಸ್ಥರನ್ನು ಶಿಕ್ಷಿಸುವುದಷ್ಟೇ ಅಲ್ಲ. ಜೊತೆಗೆ ಅಮಾಯಕರನ್ನೂ ರಕ್ಷಿಸುವುದು ಮುಖ್ಯವಾಗುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. […]

ಎನ್‌ಐಎ : ಖಲಿಸ್ತಾನಿ ಉಗ್ರ ಪನ್ನುಗೆ ಸೇರಿದ ಕೃಷಿ ಭೂಮಿ, ಮನೆ ಮುಟ್ಟುಗೋಲು

ಚಂಡೀಗಢ (ಪಂಜಾಬ್​): ಖಲಿಸ್ತಾನ ಪರ ನಾಯಕ, ನಿಷೇಧಿತ ಸಿಖ್​ ಫಾರ್ ಜಸ್ಟಿಸ್ (ಎಸ್‌ಎಫ್‌ಜೆ) ಸಂಘಟನೆಯ ಮುಖ್ಯಸ್ಥ ಗುರುಪತ್​ವಂತ್​ ಸಿಂಗ್​ ಪನ್ನುವಿಗೆ ಸೇರಿದ ಸ್ಥಿರಾಸ್ತಿಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮುಟ್ಟುಗೋಲು ಹಾಕಿದೆ.ಶನಿವಾರ ಚಂಡೀಗಢ ಮತ್ತು ಅಮೃತಸರದಲ್ಲಿ ಸ್ಥಿರಾಸ್ತಿಗಳ ಜಪ್ತಿ ನೋಟಿಸ್​ಅನ್ನು ಎನ್‌ಐಎ ಅಂಟಿಸಿದೆ.ಪಂಜಾಬ್​ನ ಅಮೃತಸರ ಹಾಗೂ ಚಂಡೀಗಢದಲ್ಲಿ ಖಲಿಸ್ತಾನಿ ಉಗ್ರ ಗುರುಪತ್​ವಂತ್​ ಸಿಂಗ್​ ಪನ್ನುವಿಗೆ ಸೇರಿದ ಕೃಷಿ ಭೂಮಿ ಹಾಗೂ ಮನೆಯನ್ನು ಎನ್‌ಐಎ ಮುಟ್ಟುಗೋಲು ಹಾಕಿದೆ. ”ಎನ್‌ಐಎ ಪ್ರಕರಣದಲ್ಲಿ ಘೋಷಿತ ಅಪರಾಧಿ ಗುರುಪತ್​ವಂತ್​ ಸಿಂಗ್​ ಪನ್ನು ಒಡೆತನದ […]

ತಮಿಳುನಾಡು ಸಿಎಂ ಸ್ಟಾಲಿನ್ ಘೋಷಣೆ : ಸರ್ಕಾರಿ ಗೌರವಗಳೊಂದಿಗೆ ಅಂಗಾಂಗ ದಾನಿಗಳ ಅಂತ್ಯಸಂಸ್ಕಾರ

ಚೆನ್ನೈ (ತಮಿಳುನಾಡು): ತಮ್ಮ ಅಂಗಾಂಗಗಳನ್ನು ದಾನ ಮಾಡುವವರ ಅಂತ್ಯಕ್ರಿಯೆಯನ್ನು ಇನ್ಮುಂದೆ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಪ್ರಕಟಿಸಿದ್ದಾರೆ.”ತಮ್ಮ ಅಂಗಾಂಗಗಳನ್ನು ದಾನ ಮಾಡುವ ಹಾಗೂ ಅನೇಕ ಪ್ರಾಣಗಳನ್ನು ಉಳಿಸುವವರ ತ್ಯಾಗವನ್ನು ಗೌರವಿಸುವ ಸಲುವಾಗಿ, ಸಾವಿಗೂ ಮುನ್ನ ತಮ್ಮ ಅಂಗಾಂಗಗಳನ್ನು ದಾನ ಮಾಡುವವರ ಅಂತ್ಯಕ್ರಿಯೆಯನ್ನು ಸರ್ಕಾರಿ ಗೌರವಗಳೊಂದಿಗೆ ನಡೆಸಲಾಗುವುದು” ಎಂದು ಮುಖ್ಯಮಂತ್ರಿ ಸ್ಟಾಲಿನ್​ ಪ್ರಕಟಿಸಿದ್ದಾರೆ. ಇದೇ ವೇಳೆ, ”ಅಂಗಾಂಗ ದಾನದ ಮೂಲಕ ನೂರಾರು ರೋಗಿಗಳಿಗೆ ಮರುಜೀವ ನೀಡುವಲ್ಲಿ ತಮಿಳುನಾಡು ದೇಶದಲ್ಲೇ ಅಗ್ರಸ್ಥಾನದಲ್ಲಿದೆ” ಎಂದು […]