ಸೆ. 24 ರಂದು ರಜತಾದ್ರಿಯಲ್ಲಿ ಹಿರಿಯ ನಾಗರಿಕರಿಗೆ ಸಾಧನ ಸಲಕರಣೆ ವಿತರಣಾ ಕಾರ್ಯಕ್ರಮ

ಉಡುಪಿ : ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ಹಿರಿಯ ನಾಗರಿಕರಿಗೆ ಉಚಿತವಾಗಿ ಸಾಧನ ಸಲಕರಣೆಗಳ ವಿತರಣಾ ಕಾರ್ಯಕ್ರಮವು ಸೆಪ್ಟಂಬರ್ 24 ರಂದು ಬೆಳಗ್ಗೆ 11 ಗಂಟೆಗೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಅಟಲ್ ಬಿಹಾರಿ […]

ಕಾವೇರಿ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನಿರ್ಧಾರಕ್ಕೆ ತಲೆಬಾಗಬೇಕಾಗಿದೆ: ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ರಾಜ್ಯದ ಮುಖ್ಯಮಂತ್ರಿಗಳು ಮೂರು ದಿನ ದೆಹಲಿಯಲ್ಲಿದ್ದು ಕಾವೇರಿ ನೀರು ಹಂಚಿಕೆ ಕುರಿತಾಗಿ ಚರ್ಚೆ ಮಾಡಿದ್ದಾರೆ. ಕಾವೇರಿ ನದಿ ನೀರು ಹಂಚಿಕೆಯಲ್ಲಿ ರಾಜ್ಯ ಸರ್ಕಾರದ ನಿಲುವು ಬಹಳ ಸ್ಪಷ್ಟವಾಗಿದೆ. ಸುಪ್ರೀಂ ಕೋರ್ಟ್ ನ ಆದೇಶವನ್ನು ನಾವು ಪಾಲಿಸಬೇಕಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಅವರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮಳೆಗಾಗಿ ಪ್ರಾರ್ಥಿಸಬೇಕು. ರಾಜ್ಯಕ್ಕೆ ಅನ್ಯಾಯ ಆಗಬಾರದು ಎಂಬುದು ನನ್ನ ನಿಲುವಾಗಿದೆ. ಕಾಂಗ್ರೆಸ್ ಜನಪರವಾಗಿದ್ದು,‌ ಜನರನ್ನು ಬಿಟ್ಟು ಬೇರೆ ಏನು ಮಾಡಲು ಸಾಧ್ಯವಿಲ್ಲ. ನೀರಾವರಿ […]

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ: ತೋಟಗಾರಿಕೆ ಬೆಳೆಗಳಿಗೆ ಸೂಕ್ಷ್ಮ ನೀರಾವರಿಗಾಗಿ ಸಹಾಯಧನ ಸೌಲಭ್ಯ

ಉಡುಪಿ: ತೋಟಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೂಕ್ಷ್ಮ ನೀರಾವರಿ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆಗಳಿಗೆ ಸೂಕ್ಷ್ಮ ನೀರಾವರಿ ಅಳವಡಿಸಲು ಇಚ್ಛಿಸುವ ಎಲ್ಲಾ ವರ್ಗದ ರೈತರು ಅರ್ಜಿ ಸಲ್ಲಿಸಬಹುದಾಗಿದ್ದು, ತರಕಾರಿ ಹಾಗೂ ಹೂವಿನ ಬೆಳೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ತೋಟಗಾರಿಕೆ ಬೆಳೆಗಳಿಗೆ ಗರಿಷ್ಟ 5 ಹೆ. ಪ್ರದೇಶಕ್ಕೆ ಹಾಗೂ ತರಕಾರಿ ಮತ್ತು ಹೂವಿನ ಬೆಳೆಗಳಿಗೆ ಗರಿಷ್ಟ 2 ಹೆ. ವರೆಗೆ ಹನಿ/ತುಂತುರು ನೀರಾವರಿ ಅಳವಡಿಸಿಕೊಳ್ಳಲು ಈ ಕೆಳಗಿನಂತೆ ಸಹಾಯಧನ ನೀಡಲಾಗುವುದು. […]

ಸೆ. 26 ರಿಂದ ಅ. 25 ರ ವರೆಗೆ 4 ನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮ

ಉಡುಪಿ: ಕಾಲು ಬಾಯಿ ರೋಗವು ಜಾನುವಾರುಗಳಿಗೆ ಮಾರಣಾಂತಿಕ ಕಾಯಿಲೆಯಾಗಿದ್ದು, ಈ ರೋಗ ನಿಯಂತ್ರಣಕ್ಕಾಗಿ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ 4 ನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮವನ್ನು ಸೆಪ್ಟಂಬರ್ 26 ರಿಂದ ಅಕ್ಟೋಬರ್ 25 ರ ವರೆಗೆ ಜಿಲ್ಲಾದ್ಯಂತ ಹಮ್ಮಿಕೊಳ್ಳಲಾಗುತ್ತಿದ್ದು ಜಾನುವಾರು ಮಾಲೀಕರು ಇದರ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಜಿಲ್ಲಾಡಳಿತ ತಿಳಿಸಿದೆ.

ಖನಿಜ ಸಾಗಾಣಿಕೆ ವಾಹನಗಳಿಗೆ ಒನ್ ಸ್ಟೇಟ್ ಒನ್ ಜಿ.ಪಿ.ಎಸ್ ನೋಂದಣಿ ಕಡ್ಡಾಯ

ಉಡುಪಿ: ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ವತಿಯಿಂದ ಜಿಲ್ಲಾ ವ್ಯಾಪ್ತಿಯಲ್ಲಿ ಅನಧಿಕೃತ ಉಪಖನಿಜ ಮತ್ತು ಮುಖ್ಯ ಖನಿಜಗಳ ಸಾಗಾಣಿಕೆಯನ್ನು ತಡೆಗಟ್ಟುವ ಸಲುವಾಗಿ ಸರ್ಕಾರವು ಒನ್ ಸ್ಟೇಟ್ ಒನ್ ಜಿ.ಪಿ.ಎಸ್ ತಂತ್ರಾಂಶವನ್ನು ಅಭಿವೃದ್ಧಿಪಡಿಸಿದ್ದು, ಅದರನ್ವಯ ಜಿಲ್ಲಾ ವ್ಯಾಪ್ತಿಯಲ್ಲಿ ಉಪಖನಿಜ ಮತ್ತು ಮುಖ್ಯ ಖನಿಜಗಳ ಸಾಗಾಣಿಕೆ ಮಾಡುವ ಎಲ್ಲಾ ವಾಹನಗಳು, ಲಾರಿ ಹಾಗೂ ಟಿಪ್ಪರ್‌ಗಳಿಗೆ ಜಿ.ಪಿ.ಎಸ್ ಅಳವಡಿಸಿಕೊಂಡು ಒನ್ ಸ್ಟೇಟ್ ಒನ್ ಜಿ.ಪಿ.ಎಸ್ ತಂತ್ರಾಂಶದಲ್ಲಿ ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು. ನೋಂದಣಿ ಕುರಿತು ಹೆಚ್ಚಿನ ಮಾಹಿತಿಗಾಗಿ ಕಂಟ್ರೋಲ್ ರೂಮ್ ದೂರವಾಣಿ ಸಂಖ್ಯೆ: […]