ಸನಾತನ ಧರ್ಮ ನಿರ್ಮೂಲನೆ ಹೇಳಿಕೆ: ಉದಯನಿಧಿ ಮತ್ತು ಇತರರ ವಿರುದ್ದ ನೋಟೀಸ್ ಜಾರಿ ಮಾಡಿದ ಸುಪ್ರೀಂ ಕೋರ್ಟ್

ನವದೆಹಲಿ: ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಬೇಲಾ ಎಂ ತ್ರಿವೇದಿ ಅವರ ಸುಪ್ರೀಂ ಕೋರ್ಟ್ ಪೀಠವು ಡೆಂಗ್ಯೂ, ಮಲೇರಿಯಾ ಮತ್ತು ಕರೋನಾ ಮುಂತಾದ ಕಾಯಿಲೆಗಳೊಂದಿಗೆ ಹೋಲಿಸಿ ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವಂತೆ ಕರೆ ನೀಡಿದ ಉದಯನಿಧಿ ಸ್ಟಾಲಿನ್, ತಮಿಳುನಾಡು ಸರ್ಕಾರ ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿದೆ. ಸನಾತನ ಧರ್ಮವನ್ನು ವಿರೋಧಿಸುವ ಬದಲು ಸನಾತನ ಧರ್ಮವನ್ನು ನಿರ್ಮೂಲನೆ ಮಾಡಿ ಎಂದು ಸಮ್ಮೇಳನವನ್ನು ಕರೆದಿದ್ದಕ್ಕಾಗಿ ಸಂಘಟಕರನ್ನು ಅಭಿನಂದಿಸುತ್ತೇನೆ ಎಂದು ಉದಯನಿಧಿ ಹೇಳಿದ್ದರು. ನಾವು ನಿರ್ಮೂಲನೆ ಮಾಡಬೇಕಾದ ಕೆಲವು ವಿಷಯಗಳಿವೆ […]
ರಾಜ್ಯ ಮಟ್ಟದ ಮ್ಯಾರಥಾನ್: ನಂದಿನಿಗೆ ಪ್ರಥಮ ಸ್ಥಾನ

ಪ್ರಸಕ್ತ ಸಾಲಿನ ಯುವಜನೋತ್ಸವ ಅಂಗವಾಗಿ ರೆಡ್ ರಿಬ್ಬನ್ ರನ್ ಯೂತ್ ಫಾರ್ ಹೆಚ್.ಐ.ವಿ ಏಡ್ಸ್ ಕುರಿತು ಶುಕ್ರವಾರ ನಡೆದ ರಾಜ್ಯ ಮಟ್ಟದ ಮ್ಯಾರಥಾನ್ ಕಾರ್ಯಕ್ರಮದ ಮಹಿಳೆಯರ ವಿಭಾಗದಲ್ಲಿ ಜಿಲ್ಲೆಯ ನಿಟ್ಟೆ ಡಾ. ಎನ್.ಎಸ್.ಎ.ಎಮ್ ಪಿ.ಯು ಕಾಲೇಜಿನ ವಿದ್ಯಾರ್ಥಿನಿ ನಂದಿನಿ ಪ್ರಥಮ ಸ್ಥಾನ ಪಡೆದಿರುತ್ತಾರೆ. ನಗದು ಬಹುಮಾನವಾಗಿ ಇವರಿಗೆ 25,000 ರೂ, ಗಳನ್ನು ನೀಡಲಾಗಿದ್ದು, ಅಕ್ಟೋಬರ್ 6 ರಂದು ಗೋವಾದಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಯುವಜನೋತ್ಸವ ಕಾರ್ಯಕ್ರಮದ ಅಂಗವಾಗಿ ರೆಡ್ ರಿಬ್ಬನ್ ರನ್ ಯೂತ್ ಫಾರ್ ಹೆಚ್.ಐ.ವಿ ಏಡ್ಸ್ […]
ಸೆ.25 ರಂದು ರಜತಾದ್ರಿಯಲ್ಲಿ ಉಸ್ತುವಾರಿ ಸಚಿವರಿಂದ ಜನತಾ ದರ್ಶನ ಕಾರ್ಯಕ್ರಮ: ಸಾರ್ವಜನಿಕರಿಂದ ಅಹವಾಲು ಸ್ವೀಕಾರ

ಉಡುಪಿ: ರಾಜ್ಯದ ವಿವಿಧ ಭಾಗಗಳಿಂದ ನಾಗರೀಕರು ಬೆಂಗಳೂರಿಗೆ ಆಗಮಿಸಿ ಹಲವಾರು ರೀತಿ ಸಮಸ್ಯೆಗಳ ಕುರಿತು ಮಾನ್ಯ ಮುಖ್ಯಮಂತ್ರಿಗಳನ್ನು ಭೇಟಿ ನೀಡಿ, ಅಹವಾಲುಗಳನ್ನು ಸಲ್ಲಿಸುತ್ತಿದ್ದು, ಸದ್ರಿ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ ಸೂಕ್ತ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ಪ್ರತಿಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತೀ ತಿಂಗಳು “ಜನತಾದರ್ಶನ” ಕಾರ್ಯಕ್ರಮವನ್ನು ಹಮ್ಮಿಕೊಂಡು ಜನರ ಅಹವಾಲುಗಳನ್ನು ಆಲಿಸಿ ಸಮಸ್ಯೆಗಳಿಗೆ ಪರಿಹಾರೋಪಾಯಗಳನ್ನು ಒದಗಿಸುವ ಸಲುವಾಗಿ ಮಾನ್ಯ ಮುಖ್ಯಮಂತ್ರಿಯವರು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸೆಪ್ಟಂಬರ್ 25 ರಂದು ಏಕಕಾಲದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ […]
ಫುಟ್ಬಾಲ್ ಪಂದ್ಯಾಟ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕುಂದಾಪುರ: ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಗುರುಕುಲ ಪದವಿ ಪೂರ್ವ ಕಾಲೇಜು ವಕ್ವಾಡಿ, ಕುಂದಾಪುರ ಇವರ ಸಹಯೋಗದಲ್ಲಿ ಸೆ. 22 ರಂದು ನಡೆದ ಫುಟ್ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ದೈಹಿಕ ಶಿಕ್ಷಣ ನಿರ್ದೇಶಕ ರಾಘವೇಂದ್ರ ಗಾಣಿಗ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.
ಚೈತ್ರಾ ಜೊತೆ ಕುಂದಾಪುರ ಹೆಸರು ಬಳಸದಂತೆ ನಿರ್ಬಂಧ ಹೇರಲು ಕೋರ್ಟ್ ಗೆ ಅರ್ಜಿ

ಉಡುಪಿ: ಬಹುಕೋಟಿ ವಂಚನೆ ಪ್ರಕರಣದಲ್ಲಿ ಆರೋಪಿಯಾಗಿರುವ ಚೈತ್ರಾ ಜೊತೆ ಕುಂದಾಪುರದ ಹೆಸರನ್ನು ಬಳಸದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಬೇಕು ಎಂದು ಕೋರಿ ಕುಂದಾಪುರ ಮೂಲದ ಆದರೆ ಬೆಂಗಳೂರಿನ ಹನುಮಂತ ನಗರದಲ್ಲಿ ವಾಸವಾಗಿರುವ ಉದ್ಯಮಿ ಗಣೇಶ್ ಶೆಟ್ಟಿ ನಗರ ಸಿವಿಲ್ ನ್ಯಾಯಾಲಯಕ್ಕೆ ಅರ್ಜಿ ಹಾಕಿದ್ದಾರೆ. ಉಡುಪಿ ಜಿಲ್ಲೆಯ ಪ್ರಮುಖ ಪಟ್ಟಣವಾದ ಕುಂದಾಪುರವು 10-11 ಶತಮಾನದ ಆಲುಪ ರಾಜ ಕುಂದವರ್ಮನ ಆಳ್ವಿಕೆಯಲ್ಲಿದ್ದು. ಇತಿಹಾಸ ಪ್ರಸಿದ್ದ ಕುಂದೇಶ್ವರ ದೇವಸ್ಥಾನ ನಿರ್ಮಿಸಿದ ಖ್ಯಾತಿ ಇದೆ. ಅಲ್ಲದೆ ನಗರದ ಬೆಳವಣಿಗೆಯಲ್ಲಿ ಕದಂಬ, ಚಾಲುಕ್ಯ, ಹೊಯ್ಸಳ, ವಿಜಯನಗರ […]