ಫುಟ್ಬಾಲ್ ಪಂದ್ಯಾಟ: ಶ್ರೀ ವೆಂ.ಪ.ವಿ ಪೂ. ಬಾಲಕರ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪುರ : ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಗ್ರೀನ್ ವ್ಯಾಲಿ ಪದವಿ ಪೂರ್ವ ಕಾಲೇಜು ಶಿರೂರು ಇವರ ಸಹಯೋಗದಲ್ಲಿ ಸೆ. 23 ರಂದು ನಡೆದ ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾಟ ದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನವನ್ನು ಪಡೆದು, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ದೈಹಿಕ ಶಿಕ್ಷಕ ರಾಘವೇಂದ್ರ ಗಾಣಿಗ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದು, ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು […]

ನಿಷೇಧಿತ ಖಲಿಸ್ತಾನಿ ಸಂಘಟನೆಯ ಉಗ್ರನ ಆಸ್ತಿ ಮುಟ್ಟುಗೋಲು ಹಾಕಿದ ಎನ್. ಐ.ಎ

ನವದೆಹಲಿ: ನಿಷೇಧಿತ ಖಲಿಸ್ತಾನಿ ಪರವಾದ ಸಿಖ್ಸ್ ಫಾರ್ ಜಸ್ಟಿಸ್ (SFJ) ನ ಸದಸ್ಯ, ಗೊತ್ತುಪಡಿಸಿದ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನುನ್ ಅವರ ಆಸ್ತಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮುಟ್ಟುಗೋಲು ಹಾಕಿಕೊಂಡಿದೆ. ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ (UAPA), 1967 ರ ಸೆಕ್ಷನ್ 33 (5) ಅಡಿಯಲ್ಲಿ ಪನ್ನುನ್‌ಗೆ ಸೇರಿದ ಸ್ಥಿರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಎನ್‌ಐಎ ವಿಶೇಷ ನ್ಯಾಯಾಲಯವನ್ನು ಸಂಪರ್ಕಿಸಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ಯುಎಪಿಎ ಸೆಕ್ಷನ್ 33(5) ಅಡಿಯಲ್ಲಿ ತಲೆಮರೆಸಿಕೊಂಡಿರುವ ಮತ್ತು ಆರೋಪಿಗಳ ಆಸ್ತಿಯನ್ನು […]

ಒಂಬತ್ತು ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ: ಹೈದರಾಬಾದ್-ಬೆಂಗಳೂರು ಮಾರ್ಗಕ್ಕೂ ರೈಲು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಮಧ್ಯಾಹ್ನ 12:30ಕ್ಕೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಒಂಬತ್ತು ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಲಿದ್ದಾರೆ. ಈ ರೈಲುಗಳ ಪ್ರಾರಂಭವು 11 ರಾಜ್ಯಗಳ ಧಾರ್ಮಿಕ ಮತ್ತು ಪ್ರವಾಸಿ ತಾಣಗಳನ್ನು ಸಂಪರ್ಕಿಸುತ್ತದೆ. ಪ್ರಧಾನಮಂತ್ರಿ ಕಚೇರಿಯ ಪತ್ರಿಕಾ ಪ್ರಕಟಣೆಯ ಪ್ರಕಾರ, ರಾಜಸ್ಥಾನ, ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ, ಬಿಹಾರ, ಪಶ್ಚಿಮ ಬಂಗಾಳ, ಕೇರಳ, ಒಡಿಶಾ, ಜಾರ್ಖಂಡ್ ಮತ್ತು ಗುಜರಾತ್ ಇವು ವಂದೇ ಭಾರತ್ ರೈಲುಗಳ ಪ್ರಾರಂಭದಿಂದ ಪ್ರಯೋಜನ ಪಡೆಯುವ ರಾಜ್ಯಗಳು. ಈ ವಂದೇ […]