ಜನಸಾಮಾನ್ಯರ ಅಹವಾಲುಗಳಿಗೆ ಸ್ಪಂದಿಸುವುದು ಸರ್ಕಾರದ ಕರ್ತವ್ಯ: ಲಕ್ಷ್ಮೀ ಆರ್. ಹೆಬ್ಬಾಳ್ಕರ್
ಉಡುಪಿ: ಜನಸಾಮಾನ್ಯರ ಕೆಲಸ ಕಾರ್ಯಗಳಿಗೆ ಸ್ಪಂದಿಸಿ, ಅವರುಗಳ ಆಶೋತ್ತರಗಳನ್ನು ಈಡೇರಿಸುವುದು ಸರ್ಕಾರ ಹಾಗೂ ಅಧಿಕಾರಿಗಳ ಆದ್ಯ ಕರ್ತವ್ಯವಾಗಿದೆ. ಜನರು ನಮ್ಮನ್ನು ನಂಬಿ ಸರ್ಕಾರ ನಡೆಸಲು ಅವಕಾಶ ನೀಡಿದ್ದಾರೆ. ಚುನಾವಣಾ ಪೂರ್ವದಲ್ಲಿ ಅವರಿಗೆ ನೀಡಿರುವ ಭರವಸೆಗಳನ್ನುಹಂತಹಂತವಾಗಿ ನೂರು ದಿನಗಳಲ್ಲಿ ಈಡೇರಿಸುವ ಕಾರ್ಯವನ್ನು ಮಾಡುತ್ತಾ ಬಂದಿದ್ದೇವೆ. ಅದರ ಜೊತೆಯಲ್ಲಿ ಜನರ ಕುಂದು ಕೊರತೆಗಳನ್ನು ಆಲಿಸಿ, ಪರಿಹರಿಸಲು ಜನತಾ ದರ್ಶನ ಕಾರ್ಯಕ್ರಮವನ್ನು ಇಡೀ ರಾಜ್ಯದಲ್ಲಿ ಏಕಕಾಲದಲ್ಲಿ ನಡೆಸಲಾಗುತ್ತಿದೆ. ಇದರ ಭಾಗವಾಗಿ ಇಂದು ಜಿಲ್ಲಾ ಮಟ್ಟದಲ್ಲಿ ಆಯೋಜಿಸಿದ್ದೇವೆ. ಜನರ ಸಮಸ್ಯೆಗಳನ್ನು ಆಲಿಸಿ, ಅವುಗಳಿಗೆ […]
29 ಕೋಟಿ ರೂ. ವೆಚ್ಚದಲ್ಲಿ ಕೇಂದ್ರೀಯ ವಿದ್ಯಾಲಯದ ನೂತನ ಕಟ್ಟಡ ನಿರ್ಮಾಣ: ಸಂಸದೆ ಶೋಭಾ ಕರಂದ್ಲಾಜೆ
ಉಡುಪಿ: ರಾಷ್ಟ್ರಕ್ಕೆ ಮಾದರಿಯಾಗುವ ವಿದ್ಯಾಸಂಸ್ಥೆಯನ್ನು ನಿರ್ಮಾಣ ಮಾಡುವ ನಿಟ್ಟಿನಲ್ಲಿ ಉಡುಪಿಯ ಪ್ರಗತಿನಗರದಲ್ಲಿ10 ಎಕ್ರೆ ಜಾಗದಲ್ಲಿ ಸುಮಾರು 29 ಕೋಟಿ ರೂ. ವೆಚ್ಚದಲ್ಲಿ ಕೇಂದ್ರೀಯ ವಿದ್ಯಾಲಯದ ನೂತನ ಕಟ್ಟಡವನ್ನು ಒಂದೂವರೆ ವರ್ಷದ ಒಳಗಾಗಿ ನಿರ್ಮಾಣ ಮಾಡಲಾಗುವುದು ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಸೋಮವಾರದಂದು ನಗರದ ಅಲೆವೂರು ಗ್ರಾಮದ ಪ್ರಗತಿನಗರದ ಸ್ಕೌಟ್ಸ್ ಮತ್ತು ಗೈಡ್ಸ್ ಭವನದ ಎದುರು ಉಡುಪಿಯ ಕೇಂದ್ರೀಯ ವಿದ್ಯಾಲಯ ಶಾಲೆಯ ನೂತನ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿ […]
ಕುಂದಾಪುರ: ಯಡ್ಯಾಡಿ-ಮತ್ಯಾಡಿ ಸರಕಾರಿ ಶಾಲೆಯಲ್ಲಿ ಶೆಫಿನ್ಸ್ ವತಿಯಿಂದ ಉಚಿತ ಸ್ಪೋಕನ್ ಇಂಗ್ಲಿಷ್ ತರಬೇತಿ
ಕುಂದಾಪುರ: ಕನ್ನಡ ಮಾಧ್ಯಮ ಶಾಲೆ ಉಳಿಸಿ ಆಂದೋಲನದಡಿಯಲ್ಲಿ ಶೆಫಿನ್ಸ್ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ತಾಲೂಕಿನ ಹುಣ್ಸೆಮಕ್ಕಿ ಕ್ಲಸ್ಟರ್‌ನ ಯಡ್ಯಾಡಿ-ಮತ್ಯಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಸ್ಪೋಕನ್ ಇಂಗ್ಲಿಷ್ ತರಬೇತಿಯನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಲಯನ್ ಅರುಣ್ ಕುಮಾರ್ ಹೆಗಡೆ ಮಾತನಾಡಿ, ಶಾಲಾ ಮುಖ್ಯೋಪಾಧ್ಯಾಯರು ಶೆಫಿನ್ಸ್ ಇನ್‌ಸ್ಟಿಟ್ಯೂಟ್‌ನ ಪ್ರಭಾವಕ್ಕೆ ಒಳಗಾಗಿ ಆಂಗ್ಲ ಭಾಷೆಯಲ್ಲಿ ಸ್ವಾಗತ ಭಾಷಣ ಮಾಡಿರುವುದು ಸಂತಸ ತಂದಿದೆ ಎಂದರು. ಟ್ರಸ್ಟ್‌ನ 04 ದಿನಗಳ ತರಬೇತಿಯು ಎಷ್ಟು […]
ಮನೆ ರಿಪೇರಿಗೆ ಅರಣ್ಯ ಇಲಾಖೆಯಿಂದ ಆಕ್ಷೇಪ: ಸ್ಥಳ ಪರಿಶೀಲನೆಗೆ ಆದೇಶಿಸಿದ ಉಸ್ತುವಾರಿ ಸಚಿವೆ
ಉಡುಪಿ: ಸೋಮವಾರ ನಡೆದ ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಉಡುಪಿ ತಾಲೂಕಿನ 80 ಬಡಗಬೆಟ್ಟು ಗ್ರಾಮದ ಮಾಧವ ವಾಗ್ಲೆಯವರು 5 ಸೆಂಟ್ಸ್ ಜಮೀನಿನಲ್ಲಿ ಹಳೆಯ ಮನೆ ಹೊಂದಿದ್ದು, ತಮ್ಮ ಹೆಸರಿಗೆ ಖಾತೆ, ಪಹಣಿ ಹೊಂದಿ ಅಲ್ಲಿಯೇ ವಾಸಿಸುತ್ತಿದ್ದು, ಮನೆಯ ರಿಪೇರಿಗೆ ಸ್ಥಳೀಯ ಗ್ರಾಮ ಪಂಚಾಯತಿಗೆ ಅರ್ಜಿ ಸಲ್ಲಿಸಿದಾಗ ಅರಣ್ಯ ಇಲಾಖೆಯ ಮೀಸಲು ಅರಣ್ಯ ವ್ಯಾಪ್ತಿಯಲ್ಲಿ ಬರುತ್ತದೆ ಎಂದು ಆಕ್ಷೇಪಣೆ ಇದೆ ಎಂದು ಅನುಮತಿ ನೀಡಿರುವುದಿಲ್ಲ ಎಂದು ತಮ್ಮ ಸಮಸ್ಯೆಯನ್ನು ಅಹವಾಲು ಮೂಲಕ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ […]
ಮಂಚಿ ಕೋಡಿ ಸರಕಾರಿ ಶಾಲೆಯಲ್ಲಿ ಶೆಫಿನ್ಸ್ ವತಿಯಿಂದ ಉಚಿತ ಸ್ಪೋಕನ್ ಇಂಗ್ಲಿಷ್ ತರಬೇತಿ ಉದ್ಘಾಟನೆ
ಮಣಿಪಾಲ: ಇಲ್ಲಿನ ಮಂಚಿ ಕೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಶೆಫಿನ್ಸ್ ಎಜುಕೇಶನಲ್ ಅಂಡ್ ಚಾರಿಟೇಬಲ್ಟ್ರಸ್ಟ್ ಇವರು ಕನ್ನಡ ಮಾಧ್ಯಮ ಶಾಲೆ ಉಳಿಸಿ ಆಂದೋಲನದಡಿಯಲ್ಲಿ ನಡೆಸುತ್ತಿರುವ ಉಚಿತ ಸ್ಪೋಕನ್ ಇಂಗ್ಲಿಷ್ ತರಬೇತಿಯನ್ನು ಉದ್ಘಾಟಿಸಲಾಯಿತು. ವರ್ಷಾಂತ್ಯದವರೆಗೆ ನಡೆಯಲಿರುವ ಈ ತರಬೇತಿಯನ್ನು ರೋಟರಿ ಮಣಿಪಾಲವು ಪ್ರಾಯೋಜಿಸುತ್ತಿದೆ. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆವಹಿಸಿ ಕಾರ್ಯಕ್ರಮ ಉದ್ಘಾಟಿಸಿದ ರೋಟರಿ ಮಣಿಪಾಲದ ಅಧ್ಯಕ್ಷ ರೊ. ಶ್ರೀಪತಿ ಮಾತನಾಡಿ ತಾವು ಹತ್ತು ವರ್ಷದ ಮೊದಲು ಇದೇ ಶಾಲೆಯ ಆವರಣದಲ್ಲಿ ನೆಟ್ಟು ಇದೀಗ ತುಂಬ ಫಲ ಕೊಡುತ್ತಿರುವ […]