ಸ್ಮಾರ್ಟ್ ಸಿಟಿ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು : ಇಂದೋರ್ ದೇಶದ ಅತ್ಯಂತ ಸ್ವಚ್ಛ ನಗರಿ
ಇಂದೋರ್ (ಮಧ್ಯಪ್ರದೇಶ) : ಸತತ 6ನೇ ಬಾರಿ ದೇಶದ ‘ಅತ್ಯಂತ ಸ್ವಚ್ಛ ನಗರಿ’ ಎಂಬ ಖ್ಯಾತಿ ಮಧ್ಯಪ್ರದೇಶದ ಇಂದೋರ್ ಪಾಲಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪ್ರಶಸ್ತಿಯನ್ನು ಬುಧವಾರ ನೀಡಿದರು.ಗುಜರಾತ್‌ನ ಸೂರತ್ ನಗರ ದ್ವಿತೀಯ, ಉತ್ತರಪ್ರದೇಶದ ಆಗ್ರ ತೃತೀಯ ಸ್ಥಾನ ಪ್ರಶಸ್ತಿ ಪಡೆಯಿತು. 2023 ನೇ ಸಾಲಿನ ದೇಶದ ಸ್ಮಾರ್ಟ್ ಸಿಟಿ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ನೀಡಿದ್ದು, ರಾಜ್ಯವಾರು ಪೈಕಿ ಮಧ್ಯಪ್ರದೇಶ ಮೊದಲ ಸ್ಥಾನ ಪಡೆದುಕೊಂಡಿದೆ.ಮಧ್ಯಪ್ರದೇಶದ ಇಂದೋರ್ ದೇಶದ ಅತ್ಯಂತ […]
ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ : ರಾಷ್ಟ್ರಧ್ವಜ ತಯಾರಿಸುವ ಸಂಘಕ್ಕೆ
ಧಾರವಾಡ : ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ಸಂಘ ಕಾರ್ಯ ನಿರ್ವಹಿಸುತ್ತಿದೆ. ರಾಜ್ಯ ಸರ್ಕಾರದಿಂದ ಕೊಡಮಾಡುವ ಪ್ರಶಸ್ತಿಗೆ ಬಾಜನವಾಗಿದ್ದು, ಅಕ್ಟೋಬರ್ 2ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪ್ರಶಸ್ತಿ ಪ್ರದಾನ ನಡೆಯಲಿದೆ. ಐದು ಲಕ್ಷ ರೂ. ನಗದು ಒಳಗೊಂಡ ಪ್ರಶಸ್ತಿ ಇದಾಗಿದೆ. ವಿಶ್ರಾಂತ ನ್ಯಾಯಮೂರ್ತಿ ಬಿ ವೀರಪ್ಪ ಅಧ್ಯಕ್ಷತೆ ಸಮಿತಿಯಿಂದ ಪ್ರಶಸ್ತಿ ಆಯ್ಕೆಯಾಗಿದೆ. ರಾಷ್ಟ್ರಧ್ವಜ ತಯಾರಿಸುವ ಸಂಘಕ್ಕೆ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಧಾರವಾಡ ತಾಲೂಕಿನ ಗರಗ ಕ್ಷೇತ್ರೀಯ ಸೇವಾ ಸಂಘಕ್ಕೆ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಸಿಕ್ಕಿದೆ. ಪ್ರಶಸ್ತಿಗೆ […]
ಗೂಗಲ್ : ಆಂಡ್ರಾಯ್ಡ್ ಬಳಕೆದಾರರಿಗೆ ಭೂಕಂಪ ಮುನ್ನೆಚ್ಚರಿಕೆ ವ್ಯವಸ್ಥೆ ಜಾರಿ
ನವದೆಹಲಿ : ಭಾರತದಲ್ಲಿನ ಆಂಡ್ರಾಯ್ಡ್ ಬಳಕೆದಾರರಿಗಾಗಿ ಭೂಕಂಪದ ಮುನ್ನೆಚ್ಚರಿಕೆ ನೀಡುವ ವ್ಯವಸ್ಥೆಯನ್ನು ಗೂಗಲ್ ಬುಧವಾರದಿಂದ ಜಾರಿಗೊಳಿಸಿದೆ.ಭೂಕಂಪವಾದಾಗ ಜನರು ಸುರಕ್ಷಿತವಾಗಿ ಹಾಗೂ ತ್ವರಿತವಾಗಿ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಮುನ್ನೆಚ್ಚರಿಕೆ ನೀಡುವಂತೆ ಈ ವ್ಯವಸ್ಥೆಯನ್ನು ರೂಪಿಸಲಾಗಿದ್ದು, ಇದು ಆಂಡ್ರಾಯ್ಡ್ ಸ್ಮಾರ್ಟ್ಪೋನ್ ಬಳಕೆದಾರರಿಗೆ ಲಭ್ಯವಿರುತ್ತದೆ. ವಿಶ್ವದಲ್ಲಿ ಸಂಭವಿಸುವ ನೈಸರ್ಗಿಕ ವಿಕೋಪಗಳ ಪೈಕಿ ಭೂಕಂಪಗಳ ಪಾಲು ದೊಡ್ಡದಾಗಿದೆ. ಭೂಕಂಪ ಸಂಭವಿಸಿದಾಗ ತಕ್ಷಣ ನೀಡುವ ಎಚ್ಚರಿಕೆಯು ಜನ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಹಾಗೂ ಇತರರನ್ನು ಕೂಡ ರಕ್ಷಿಸಲು ಬಹಳ ಉಪಯುಕ್ತವಾಗುತ್ತದೆ.ಆಂಡ್ರಾಯ್ಡ್ ಬಳಕೆದಾರರಿಗೆ ಭೂಕಂಪದ ಮುನ್ನೆಚ್ಚರಿಕೆ […]
ಗುಜರಾತ್‌ನ ರೋಬೋಟಿಕ್ಸ್ ಗ್ಯಾಲರಿಯಲ್ಲಿ ರೋಬೋಟ್ ನೀಡಿದ ಚಹಾ ಸವಿದ ಪ್ರಧಾನಿ ಮೋದಿ
ಅಹಮದಾಬಾದ್: ಗುಜರಾತ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ರೊಬೊಟಿಕ್ಸ್ ಗ್ಯಾಲರಿಯಲ್ಲಿ ರೋಬೋಟ್ ನೀಡಿದ ಒಂದು ಕಪ್ ಚಹಾವನ್ನು ಆನಂದಿಸಿದರು. ಬುಧವಾರ ಗುಜರಾತ್‌ನ ಅಹಮದಾಬಾದ್‌ನಲ್ಲಿರುವ ಸೈನ್ಸ್ ಸಿಟಿಯಲ್ಲಿ ರೋಬೋಟ್ ಪ್ರದರ್ಶನಕ್ಕೆ ಭೇಟಿ ನೀಡಿದ ಪ್ರಧಾನಿ, ವೈಬ್ರೆಂಟ್ ಗುಜರಾತ್ ಗ್ಲೋಬಲ್ ಶೃಂಗಸಭೆಯನ್ನು ಉದ್ಘಾಟಿಸಿದರು. ರೋಬೋಟಿಕ್ಸ್ ಗ್ಯಾಲರಿಯು DRDO ರೋಬೋಟ್‌ಗಳು, ಮೈಕ್ರೋಬೋಟ್‌ಗಳು, ಕೃಷಿ ರೋಬೋಟ್, ವೈದ್ಯಕೀಯ ರೋಬೋಟ್‌ಗಳು, ಸ್ಪೇಸ್ ರೋಬೋಟ್ ಮತ್ತು ಹೆಚ್ಚಿನದನ್ನು ಪ್ರದರ್ಶಿಸುತ್ತದೆ. ಈ ಆಕರ್ಷಕ ಪ್ರದರ್ಶನಗಳ ಮೂಲಕ, ಆರೋಗ್ಯ ರಕ್ಷಣೆ, ಉತ್ಪಾದನೆ ಮತ್ತು ದೈನಂದಿನ ಜೀವನದಲ್ಲಿ […]
ಉಪ್ಪಿನಂಗಡಿಯ ವಕ್ತಿಗೆ ಒಲಿದ ಅದೃಷ್ಟ ಲಕ್ಷ್ಮಿ: ಕೇರಳ ಬಂಪರ್ ಲಾಟರಿಯಿಂದ ಕುಬೇರನಾದ ಮೇಸ್ತ್ರಿ!!
ಉಪ್ಪಿನಂಗಡಿ: ಕೇರಳದಲ್ಲಿ ಸರ್ಕಾರವೇ ಲಾಟರಿಯನ್ನು ನಡೆಸುತ್ತಿದ್ದು, ಪ್ರತಿವರ್ಷದಂತೆ ಓಣಂ ಹಬ್ಬದಂದು ಬಂಪರ್ ಲಾಟರಿ ಆಯೋಜಿಸಿತ್ತು. ಈ ಬಾರಿ 75 ಲಕ್ಷಕ್ಕೂ ಅಧಿಕ ಮಂದಿ ಲಾಟರಿ ಟಿಕೆಟ್ ಖರೀದಿ ಮಾಡಿದ್ದರು. ಒಂದು ಟಿಕೆಟ್ಗೆ 500 ರೂ. ನಿಗದಿ ಮಾಡಲಾಗಿತ್ತು. ಸೆ. 22ರಂದು ಪ್ರಕಟವಾದ ಫಲಿತಾಂಶದಲ್ಲಿ ತಮಿಳುನಾಡಿನ ನಾಲ್ವರು ಯುವಕರು ಮೊದಲ ಬಹುಮಾನವನ್ನು ಪಡೆದಿದ್ದಾರೆ. ಈ ಓಣಂ ಲಾಟರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ತಾಲೂಕಿನ ಇಳಂತಿಲ ನಿವಾಸಿ ಚಂದ್ರಯ್ಯ ಎಂಬ ಮೇಸ್ತ್ರಿಯೊಬ್ಬರು ಕಾನತ್ತೂರು ದೇವಸ್ಥಾನಕ್ಕೆ ತೆರಳಿದ್ದ ವೇಳೆ ಓಣಂ […]