ದಕ್ಷಿಣ ಕನ್ನಡ , ಉಡುಪಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ

ಉಡುಪಿ ಮಂಗಳೂರು: ಖಾಸಗಿ ಬಸ್ ಮಾಲಕರ ಸಂಘಟನೆ ಬಂದ್ ಗೆ ನೈತಿಕ ಬೆಂಬಲ ಮಾತ್ರ ನೀಡಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ಗಳು ಎಂದಿನಂತೆ ಓಡಾಟ ನಡೆಸಲಿದೆ. ಕಡಿದಾದ ವೇಗದಲ್ಲಿ, ವಿಕಸನಗೊಂಡಿದೆ. ಇದು ವಿವಿಧ ರೀತಿಯ ಮಾರ್ಕೆಟಿಂಗ್‌ಗೆ ಕಾರಣವಾಗಿದೆ. ಬಸ್ ಸಂಚಾರ ಬಂದ್ ಮಾಡುವುದರಿಂದ ವಿದ್ಯಾರ್ಥಿಗಳು, ಉದ್ಯೋಗಿಗಳು ಸೇರಿ ಸಾರ್ವಜನಿಕ ಜೀವನಕ್ಕೆ ಕಷ್ಟವಾಗುವ ಕಾರಣ ನಾವು ನೈತಿಕ ಬೆಂಬಲ ಸೂಚಿಸುತ್ತೇವೆ. ಬಸ್ ಓಡಾಟ ಎಂದಿನಂತೆ ಇರಲಿದೆ ಎಂದು ಖಾಸಗಿ ಬಸ್ ಒಕ್ಕೂಟ ತಿಳಿಸಿದೆ. […]
ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ರಾಜ್ಯ ಮಟ್ಟದ ಹ್ಯಾಂಡ್ ಬಾಲ್ ಸ್ಪರ್ಧೆಗೆ ಆಯ್ಕೆ

ಹೆಮ್ಮಾಡಿ: ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಸ್ಪರ್ಧೆಯಲ್ಲಿ ವಿಜೇತರಾದ ಕಾಲೇಜಿನ ವಿದ್ಯಾರ್ಥಿಗಳಾದ (ಬಾಲಕರ ವಿಭಾಗ) ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದ ಪ್ರಜ್ವಲ್ ಪೂಜಾರಿ, ದ್ವಿತೀಯ ಪಿ.ಯು.ಸಿ ವಾಣಿಜ್ಯ ವಿಭಾಗದ ರುಪಿನ್, ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದ ಪ್ರಜ್ವಲ್ ಜಿ., ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ರಿತೇಶ್ ಹಾಗೂ ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದ ಸಂಜನಾ ಕಟ್ಟೆ, ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ಅರ್ಫಾ ರಾಜ್ಯ ಮಟ್ಟದ […]
ಎಸ್.ಕೆ.ಪಿ.ಎ ಜಿಲ್ಲಾ ಕಟ್ಟಡ ಸಮಿತಿ ಅಧ್ಯಕ್ಷರಾಗಿ ಆನಂದ್ ಎನ್. ಬಂಟ್ವಾಳ ಆಯ್ಕೆ

ಉಡುಪಿ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ರಿ. ದಕ್ಷಿಣ ಕನ್ನಡ – ಉಡುಪಿ ಜಿಲ್ಲೆ ಇದರ ಕಟ್ಟಡ ಸಮಿತಿಯ ಅಧ್ಯಕ್ಷರಾಗಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಆನಂದ್ ಎನ್. ಬಂಟ್ವಾಳ ಆಯ್ಕೆಯಾಗಿದ್ದಾರೆ.
ಭಾರತದ ಹಸಿರು ಕ್ರಾಂತಿಯ ಪಿತಾಮಹ ಎಂಎಸ್ ಸ್ವಾಮಿನಾಥನ್ ವಿಧಿವಶ

ಚೆನ್ನೈ: ಭಾರತದ ಹಸಿರು ಕ್ರಾಂತಿಯ ಪಿತಾಮಹನೆಂದು ಖ್ಯಾತಿವೆತ್ತ ಮಂಕೊಂಬು ಸಾಂಬಶಿವನ್ ಸ್ವಾಮಿನಾಥನ್ (98) ಅವರು ಗುರುವಾರ ಚೆನ್ನೈನ ತಮ್ಮ ಮನೆಯಲ್ಲಿ ನಿಧನರಾಗಿದ್ದಾರೆ. ಸುಮಾರು ಅರ್ಧ ಶತಮಾನದ ವೃತ್ತಿಜೀವನದಲ್ಲಿ ಅವರ ಮಾರ್ಗದರ್ಶನದಲ್ಲಿ ಕೃಷಿ ವಿಜ್ಞಾನಿಗಳು ಭಾರತದ ಲಕ್ಷಾಂತರ ಜನರನ್ನು ಮಾರಣಾಂತಿಕ ಕ್ಷಾಮದಿಂದ ರಕ್ಷಿಸಿದ್ದಾರೆ. 1987 ರಲ್ಲಿ ವಿಶ್ವ ಆಹಾರ ಪ್ರಶಸ್ತಿ ವಿಜೇತರಾದ ಸ್ವಾಮಿನಾಥನ್ ಅವರ ನಿಧನಕ್ಕೆ ದೇಶ ಮತ್ತು ವಿದೇಶಗಳಲ್ಲಿ ವ್ಯಾಪಕ ಶೋಕ ವ್ಯಕ್ತವಾಗಿದೆ. 1950 ರ ದಶಕದಲ್ಲಿ ಬಡತನದಿಂದ ಬಳಲುತ್ತಿರುವ ಮೆಕ್ಸಿಕೋಕ್ಕಾಗಿ ಬೋರ್ಲಾಗ್ ಅಭಿವೃದ್ಧಿಪಡಿಸಿದ ಹೆಚ್ಚಿನ ಇಳುವರಿ […]
ಶ್ರೀ ಕೃಷ್ಣನಿಗೆ ‘ಅನಂತಪದ್ಮನಾಭ’ ಅಲಂಕಾರ

ಉಡುಪಿ: ಅನಂತ ಚತುರ್ದಶಿ ಪ್ರಯುಕ್ತ ಶ್ರೀಕೃಷ್ಣದೇವರಿಗೆ ಶೀರೂರು ಮಠಾಧೀಶರಾದ ಶ್ರೀವೇದವರ್ಧನತೀರ್ಥ ಶ್ರೀಪಾದರು “ಶ್ರೀಅನಂತಪದ್ಮನಾಭ”ನ ವಿಶೇಷ ಅಲಂಕಾರ ಮಾಡಿದರು. ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ಮಹಾಪೂಜೆ ನೆರವೇರಿಸಿದರು.