ಅವಿಭಾಜಿತ ಜಿಲ್ಲಾ ಛಾಯಾಚಿತ್ರ ಗ್ರಾಹಕರ ಸಂಘದ ಅಧ್ಯಕ್ಷರಾಗಿ ಪದ್ಮಪ್ರಸಾದ್ ಜೈನ್ ಆಯ್ಕೆ

ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯನ್ನೊಳಗೊಂಡ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷರಾಗಿ ಕಾರ್ಕಳದ ಶಿಲ್ಪಾ ಡಿಜಿಟಲ್ ಸ್ಟುಡಿಯೋದ ಮಾಲಕ ನೆಲ್ಲಿಕಾರು ಪದ್ಮಪ್ರಸಾದ್ ಜೈನ್ ಆಯ್ಕೆಯಾಗಿದ್ದಾರೆ. ಪದ್ಮಪ್ರಸಾದ್ ಜೈನ್ ಅವರು ಕಳೆದ ಅವದಿಯಲ್ಲಿ ಎಸ್ ಕೆಪಿಎ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಸಾಮಾಜಿಕ, ಧಾರ್ಮಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿರುವ ಇವರು 2005ರಲ್ಲಿ ಕಾರ್ಕಳದ ಜೆಸಿಐ ಅಧ್ಯಕ್ಷರಾಗಿ, ಭಾರತೀಯ ಜೇಸಿಸ್ ನ ವಲಯ ಸಂಯೋಜಕರಾಗಿ ಕಾರ್ಯನಿರ್ವಹಿಸಿದ್ದಾರೆ. ಅಸೋಸಿಯೇಶನ್ ನ ಸಂಚಾಲಕರಾಗಿ ಕರುಣಾಕರ್ ಕಾನಂಗಿ ಮಂಗಳೂರು, ಪ್ರಧಾನ ಕಾರ್ಯದರ್ಶಿಯಾಗಿ […]