ವಿವಿಧ ಪ್ರಕರಣಗಳ ಆರೋಪಿಗಳಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದ ನ್ಯಾಯಾಲಯ

ಉಡುಪಿ: ಮನೆಯ ಒಳಗೆ ಅಕ್ರಮವಾಗಿ ಪ್ರವೇಶಿಸಿ, ಮನೆಯಲ್ಲಿದ್ದ ಚಿನ್ನಾಭರಣ ಹಾಗೂ ನಗದನ್ನು ಕಳವು ಮಾಡಿರುವ ಆರೋಪಿಗಳಿಗೆ ನಗರದ ಹೆಚ್ಚುವರಿ ಸಿ.ಜೆ ಮತ್ತು ಎ.ಸಿ.ಜೆ.ಎಂ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. ಪ್ರಕರಣ: 2015 ರ ಡಿಸೆಂಬರ್ 26 ರಂದು ರಾತ್ರಿ 2.30 ರ ಸುಮಾರಿಗೆ ಅಬ್ದುಲ್ ಖಾದರ್ ಅಲಿಯಾಸ್ ಎ.ಬಿ.ಅಬೂಬಕ್ಕರ್ ಹಾಗೂ ಅಜೀಜ್ ಅಲಿಯಾಸ್ ಬೊಂಡಾ ಅಜೀಜ್ ಎನ್ನುವವರು ಎಲ್ಲೂರು ಗ್ರಾಮದ ಅದಮಾರು ಎಂಬಲ್ಲಿನ ಪಿ. ಜನಾರ್ಧನ ರಾವ್ ಎನ್ನುವವರ ಮನೆಯ ಬಾಗಿಲಿನ ಚಿಲಕವನ್ನು ತೆಗೆದು, […]

2,000 ರೂ ಮುಖಬೆಲೆಯ ಕರೆನ್ಸಿ ನೋಟು ಹಿಂದಿರುಗಿಸಲು/ಬದಲಾಯಿಸಲು ಇಂದು ಕೊನೆ ದಿನ

ನವದೆಹಲಿ: 2,000 ರೂ ಮುಖಬೆಲೆಯ ಕರೆನ್ಸಿ ನೋಟುಗಳನ್ನು ಹಿಂದಿರುಗಿಸಲು ಅಥವಾ ಬದಲಾಯಿಸಲು ಇಂದು ಕೊನೆಯ ದಿನಾಂಕವಾಗಿದೆ. ಭಾರತೀಯ ರಿಸರ್ವ್ ಬ್ಯಾಂಕ್ (RBI) ಪ್ರಕಾರ, ಅಕ್ಟೋಬರ್ 1 ರಿಂದ ಬ್ಯಾಂಕ್ ನೋಟು ತನ್ನ ಮೌಲ್ಯವನ್ನು ಹೊಂದುವುದನ್ನು ನಿಲ್ಲಿಸುತ್ತದೆ ಮತ್ತು ಅದು ಕೇವಲ ಒಂದು ಕಾಗದದ ತುಂಡಾಗಿರುತ್ತದೆ. 2,000 ರೂ ನೋಟುಗಳನ್ನು ಚಲಾವಣೆಯಿಂದ ತೆಗೆದುಹಾಕಲಾಗುವುದು ಎಂದು ಕೇಂದ್ರ ಬ್ಯಾಂಕ್ ಘೋಷಿಸಿದ ನಾಲ್ಕು ತಿಂಗಳ ನಂತರ ಇದು ಬಂದಿದೆ. ವರದಿಯ ಪ್ರಕಾರ, ಸೆಪ್ಟೆಂಬರ್ 30 ರ ಗಡುವಿನ ನಂತರವೂ 2000 ರೂ. […]

ವಿದ್ಯಾರ್ಥಿ ದೆಸೆಯಲ್ಲಿಯೇ ಸಾಹಿತ್ಯಾಸಕ್ತಿ ಬೆಳೆಸಿಕೊಂಡಲ್ಲಿ ವಿಶೇಷ ಆನಂದ ಪ್ರಾಪ್ತಿ: ಮುರಳೀಧರ ಉಪಾಧ್ಯ

ಉಡುಪಿ: ಒಳ್ಳೆಯ ಓದು ಒಳ್ಳೆಯ ಬರವಣಿಗೆಗೆ ಪ್ರೇರಣೆಯನ್ನು ನಿಡುತ್ತದೆ. ವಿದ್ಯಾರ್ಥಿ ಜೀವನದಲ್ಲಿಯೇ ಬರವಣಿಗೆಯ ಹವ್ಯಾಸವನ್ನು ಮೈಗೂಡಿಸಿಕೊಳ್ಳಬೇಕು. ಸಾಹಿತ್ಯವನ್ನು ಓದುವುದು ಮತ್ತು ಬರೆಯುವುದರಿಂದ ಜೀವನದಲ್ಲಿ ಒಂದು ವಿಶೇಷ ಆನಂದವನ್ನು ಪಡೆಯಲು ಸಾಧ್ಯ ಎಂದು ಸಾಹಿತ್ಯ ಅಕಾಡೆಮಿ ನವ-ದೆಹಲಿಯ ಮಾಜಿ ಸದಸ್ಯ ಮುರಳೀಧರ ಉಪಾಧ್ಯ ಅಭಿಪ್ರಾಯಪಟ್ಟರು. ಅವರು ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಇಲ್ಲಿನ ಐ.ಕ್ಯೂ.ಎ.ಸಿ ಮತ್ತು ಕನ್ನಡ ವಿಭಾಗದ ಜಂಟಿ ಆಶ್ರಯದಲ್ಲಿ ಕಾಲೇಜಿನ ಸಾಹಿತ್ಯ ಸಂಘದ […]

ಬಾಲ್ಯ ವಿವಾಹ ಪ್ರಕರಣ ಕಂಡು ಬಂದಲ್ಲಿ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ: ಡಾ. ಕೆ ವಿದ್ಯಾಕುಮಾರಿ

ಉಡುಪಿ: ಶಾಲೆ ಬಿಟ್ಟ ಮಕ್ಕಳು ಹಾಗೂ ಬಾಲ ಕಾರ್ಮಿಕರು ಬಾಲ್ಯ ವಿವಾಹಕ್ಕೆ ಒಳಪಡುವ ಸಾಧ್ಯತೆ ಇದ್ದು, ಅವರಿಗೆ ಆಪ್ತ ಸಮಾಲೋಚನೆ ನೀಡಿ, ಶಿಕ್ಷಣದ ಮಹತ್ವದ ಕುರಿತು ಅರಿವು ಮೂಡಿಸಿ ಅವರನ್ನು ಮರಳಿ ಶಾಲೆಗೆ ಕರೆತರಲು ಮನವೊಲಿಸಬೇಕು. ಜಿಲ್ಲೆಯಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಕಡಿಮೆ ಇದೆ ಎಂದು ನಿರ್ಲಕ್ಷ್ಯ ವಹಿಸದೆ, ಗ್ರಾಮ ಪಂಚಾಯತಿಗಳು ಆಗಾಗ ಸಭೆಯನ್ನು ನಡೆಸಿ, ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ಹಾಗೂ ಬಾಲ್ಯ ವಿವಾಹ ತಡೆಗಟ್ಟುವ ಕುರಿತು ಜಾಗೃತಿ ಮೂಡಿಸಿ, ಬಾಲ್ಯ ವಿವಾಹ ತಡೆಗಟ್ಟಲು […]

ಅ. 4 ರಂದು ವಿಕಲಚೇತನರಿಗೆ ಕೌಶಲ್ಯಾಧಾರಿತ ತರಬೇತಿ ಮತ್ತು ಉದ್ಯೋಗ ಶಿಬಿರ ಉದ್ಘಾಟನೆ ಹಾಗೂ ಸಂದರ್ಶನ ಕಾರ್ಯಕ್ರಮ

ಉಡುಪಿ: ಜಿಲ್ಲಾ ವಿಕಲಚೇತನರ ಸಬಲೀಕರಣ ಇಲಾಖೆ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಘಟಕ ಹಾಗೂ ಎ.ಪಿ.ಡಿ ಸಂಸ್ಥೆ ಬೆಂಗಳೂರು ಇವರ ಸಹಯೋಗದೊಂದಿಗೆ ಕೌಶಲ್ಯಾಧಾರಿತ ತರಬೇತಿ ಮತ್ತು ಉದ್ಯೋಗಕ್ಕೆ ಆಯ್ಕೆ ಶಿಬಿರದ ಉದ್ಘಾಟನೆ ಮತ್ತು ಸಂದರ್ಶನ ಕಾರ್ಯಕ್ರಮವು ಅಕ್ಟೋಬರ್ 4 ರಂದು ಬೆಳಗ್ಗೆ 10 ಗಂಟೆಗೆ ನಗರದ ಅಜ್ಜರಕಾಡು ರೆಡ್‌ಕ್ರಾಸ್ ಭವನದಲ್ಲಿ ನಡೆಯಲಿದೆ. ಜಿಲ್ಲೆಯ 18 ರಿಂದ 35 ವರ್ಷದೊಳಗಿನ ನಿರುದ್ಯೋಗಿ ವಿಕಲಚೇತನರು ಅಂಗವಿಕಲರ ಗುರುತಿನ ಚೀಟಿ, ಶೈಕ್ಷಣಿಕ ದಾಖಲಾತಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ […]