ಅ.1 ರಿಂದ ಕಚೇರಿಗೆ ಬರುವಂತೆ ಉದ್ಯೋಗಿಗಳಿಗೆ ಸೂಚನೆ ವರ್ಕ್ ಫ್ರಂ ಹೋಮ್ ನಿಲ್ಲಿಸಿದ ಟಿಸಿಎಸ್
ಬೆಂಗಳೂರು : ವರ್ಕ್ ಫ್ರಂ ಹೋಮ್ ಅಥವಾ ಹೈಬ್ರಿಡ್ ಕೆಲಸವನ್ನು ಅಂತ್ಯಗೊಳಿಸಲಾಗಿದೆ ಎಂದು ಉದ್ಯೋಗಿಗಳಿಗೆ ಕಳುಹಿಸಲಾದ ಆಂತರಿಕ ಇಮೇಲ್ನಲ್ಲಿ ಕಂಪನಿ ತಿಳಿಸಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಆದಾಗ್ಯೂ ತೀರಾ ಅಗತ್ಯದ ಸಂದರ್ಭಗಳಲ್ಲಿ ಹೈಬ್ರಿಡ್ ಮಾದರಿಯ ಕೆಲಸಕ್ಕೆ ಅನುಮತಿ ನೀಡುವ ಸಾಧ್ಯತೆಯಿದೆ ಎಂದು ವರದಿಗಳು ಹೇಳಿವೆ.ತನ್ನ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಮ್ ಅಥವಾ ಹೈಬ್ರಿಡ್ ಮಾದರಿಯ ಕೆಲಸವನ್ನು ಸಂಪೂರ್ಣವಾಗಿ ತೆಗೆದುಹಾಕಿರುವ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್), ಅಕ್ಟೋಬರ್ 1 ರಿಂದ ಎಲ್ಲಾ ಉದ್ಯೋಗಿಗಳು ಕಡ್ಡಾಯವಾಗಿ ಕಚೇರಿಗೆ ಹಾಜರಾಗುವಂತೆ […]
ಏಷ್ಯನ್ ಗೇಮ್ಸ್ನಲ್ಲಿ ಹೊಸ ದಾಖಲೆ ಬರೆದ ಕನ್ನಡತಿ , ಗಾಲ್ಫ್ ಪಟು ಅದಿತಿ ಅಶೋಕ್ಗೆ ಬೆಳ್ಳಿ ಪದಕ
ಹಾಂಗ್‌ಝೌ (ಚೀನಾ): ಏಷ್ಯನ್ ಕ್ರೀಡಾಕೂಟದ ಗಾಲ್ಫ್‌ನಲ್ಲಿ ಕರ್ನಾಟಕ ಅದಿತಿ ಅಶೋಕ್ ಬೆಳ್ಳಿ ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದ್ದಾರೆ. ಕರ್ನಾಟಕ ಗಾಲ್ಫ್ ಪಟು ಅದಿತಿ ಅಶೋಕ್ ಏಷ್ಯನ್ ಗೇಮ್ಸ್ನಲ್ಲಿ ಬೆಳ್ಳಿ ಪದಕ ಗೆದ್ದು ದಾಖಲೆ ಬರೆದಿದ್ದಾರೆ.ಈ ಮೂಲಕ ಭಾರತಕ್ಕೆ ಮತ್ತೊಂದು ಪದಕ ತಂದಿದ್ದಾರೆ. ಭಾನುವಾರ ಬೆಳಗ್ಗೆ ನಡೆದ ಗಾಲ್ಫ್ ಫೈನಲ್ ಪಂದ್ಯದಲ್ಲಿ ಬೆಂಗಳೂರಿನ ಅದಿತಿ ಅಶೋಕ್ ಬೆಳ್ಳಿ ಪದಕ ಕೊರಳಿಗೇರಿಸಿಕೊಂಡರು. ಗಾಲ್ಫ್‌ನಲ್ಲಿ ಪದಕ ಜಯಿಸಿದ ದೇಶದ ಮೊದಲ ಮಹಿಳಾ ಪಟು ಎಂಬ ಕೀರ್ತಿಗೆ ಇವರು ಪಾತ್ರರಾಗಿದ್ದಾರೆ.ಇನ್ನು ಏಷ್ಯನ್ […]
ಹೋಟೆಲ್ ಉದ್ಯಮಿಗಳಿಗೆ ಶಾಕ್ , ವಾಣಿಜ್ಯ ಸಿಲಿಂಡರ್ ಬೆಲೆ 209 ರೂ ಏರಿಕೆ
ನವದೆಹಲಿ : ವಾಣಿಜ್ಯ ಅಡುಗೆ ಅನಿಲ (ಎಲ್‌ಪಿಜಿ) ದರ 19 ಕೆಜಿ ಸಿಲಿಂಡರ್‌ಗೆ 209 ರೂ. ಗಳಷ್ಟು ಹೆಚ್ಚಿಸಲಾಗಿದೆ.ಇದರಿಂದ ಹೋಟೆಲ್ ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗುವ ಸಾಧ್ಯತೆ ಇದ್ದು, ಗ್ರಾಹಕರ ಜೇಬಿಗೆ ಕತ್ತರಿ ಬೀಳಲಿದೆ. ಸದ್ಯ ಗೃಹಬಳಕೆಯ ಎಲ್‌ಪಿಜಿಯ ಬೆಲೆ ಪ್ರತಿ 14.2 ಕೆಜಿ ಸಿಲಿಂಡರ್‌ಗೆ ರೂ. 903 ರಷ್ಟಿದೆ.ವಾಣಿಜ್ಯ ಸಿಲಿಂಡರ್ ಬೆಲೆ 209 ರೂ. ಏರಿಕೆ ಕಂಡಿದೆ. ಮತ್ತೊಂದೆಡೆ ಕಚ್ಚಾ ತೈಲ ದುಬಾರಿ ಪರಿಣಾಮ ವಾಯು ಇಂಧನ ಬೆಲೆಯಲ್ಲಿ (ಎಟಿಎಫ್) ತೀವ್ರ ಏರಿಕೆ ಮಾಡಲಾಗಿದೆ. ಸರ್ಕಾರಿ […]
ಸ್ಯಾಂಡಲ್ವುಡ್ ಸ್ಟಾರ್ ಪೊಲೀಸ್ ವಶಕ್ಕೆ : ನಟ ನಾಗಭೂಷಣ್ ಕಾರು ಅಪಘಾತ: ಮಹಿಳೆ ಸಾವು, ಪತಿ ಸ್ಥಿತಿ ಗಂಭೀರ
ಬೆಂಗಳೂರು: ಸ್ಯಾಂಡಲ್ವುಡ್ ನಟ ನಾಗಭೂಷಣ್ ಕಾರು ಅಪಘಾತಕ್ಕೊಳಗಾಗಿದ್ದು, ಮಹಿಳೆ ಸಾವನ್ನಪ್ಪಿದ್ದಾರೆ. ಮೃತರ ಪತಿ ಸ್ಥಿತಿ ಗಂಭೀರವಾಗಿದೆ. ಕೋಣನಕುಂಟೆ ಕ್ರಾಸ್ ದಾರಿ ಮಧ್ಯೆ ಶನಿವಾರ ರಾತ್ರಿ 9:45ರ ಸುಮಾರಿಗೆ ಈ ಘಟನೆ ನಡೆದಿದೆ. ಸ್ನೇಹಿತರನ್ನು ಭೇಟಿಯಾಗಿ ಜೆ.ಪಿ ನಗರದ ತಮ್ಮ ಮನೆಗೆ ನಟ ನಾಗಭೂಷಣ್ ತೆರಳುತ್ತಿದ್ದರು. ಫುಟ್ ಪಾತ್ ಮೇಲೆ ವಾಕಿಂಗ್ ಮಾಡುತ್ತಿದ್ದ ದಂಪತಿ ರಸ್ತೆಗಿಳಿದ ಪರಿಣಾಮ ಕಾರು ಡಿಕ್ಕಿ ಹೊಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ನಟ ನಾಗಭೂಷಣ್ ಅವರ ಕಾರು ಅಪಘಾತಕ್ಕೊಳಗಾಗಿ, ಓರ್ವ […]
ಕಿನ್ನಿಮೂಲ್ಕಿ ಕನ್ನರ್ಪಾಡಿ 18ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ವಿಸರ್ಜನಾ ಮೆರವಣಿಗೆ
ಉಡುಪಿ: ಕಿನ್ನಿಮೂಲ್ಕಿ ಕನ್ನರ್ಪಾಡಿ ಸಾರ್ವಜನಿಕ ಗಣೇಶೋತ್ಸವ ಸಮಿತಿಯ 18ನೇ ವರ್ಷದ ಗಣೇಶೋತ್ಸವವು ಸ್ವಾಗತ ಗೋಪುರದ ಬಳಿಯ ಗಣಪತಿ ಮೈದಾನದಲ್ಲಿ ಸೆ. 19 ರಿಂದ 24ರ ವರೆಗೆ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವೈಭವದಿಂದ ನಡೆಯಿತು. ಸೆ. 24ರಂದು ಗಣೇಶನ ವಿಸರ್ಜನಾ ಮೆರವಣಿಗೆಯ ಶೋಭಾ ಯಾತ್ರೆಯು ವಿವಿಧ ವೇಷಭೂಷಣ, ವೇದ ಘೋಷಗಳೊಂದಿಗೆ ಫಯರ್ ಸ್ಟೇಷನ್ ರಸ್ತೆ, ಅಜ್ಜರಕಾಡು ಪಾರ್ಕ್, ಗೋವಿಂದ ಕಲ್ಯಾಣ ಮಂಟಪ ಮಾರ್ಗವಾಗಿ ಕಿನ್ನಿಮುಲ್ಕಿ ಮುಖ್ಯ ರಸ್ತೆ, ಬಲಾಯಿಪಾದೆ, ಸ್ವಾಗತ ಗೋಪುರದಿಂದ ಮೂಲಕ ಸಾಗಿ ಬಂದು […]